Home ಆರೋಗ್ಯ Covid 19: ಆರ್‌ಟಿ-ಪಿಸಿಆರ್ ಪರೀಕ್ಷೆ ದಿನಕ್ಕೆ 6,000 ಹೆಚ್ಚಿಸಲು ಬಿಬಿಎಂಪಿ ಮುಂದು

Covid 19: ಆರ್‌ಟಿ-ಪಿಸಿಆರ್ ಪರೀಕ್ಷೆ ದಿನಕ್ಕೆ 6,000 ಹೆಚ್ಚಿಸಲು ಬಿಬಿಎಂಪಿ ಮುಂದು

25
0
IAS officer Tushar Giri Nath
bengaluru

ಬೆಂಗಳೂರು:

ದಿನಕಳೆದಂತೆ ಕೊರೋನಾ ಸೋಂಕು ಉಲ್ಭಣಗೊಳ್ಳುತ್ತಿದ್ದು ಈ ಹಿನ್ನೆಲೆಯಲ್ಲಿ ನಗರದಲ್ಲಿ ಆರ್‌ಟಿ-ಪಿಸಿಆರ್ ಪರೀಕ್ಷೆಗಳ ಸಂಖ್ಯೆ ಹೆಚ್ಚಿಸಲು ಬಿಬಿಎಂಪಿ ಮುಂದಾಗಿದೆ.

ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಮಾತನಾಡಿ, ಪ್ರಸ್ತುತ 4,000 ಪರೀಕ್ಷೆಗಳನ್ನು ಮಾಡಲಾಗುತ್ತಿದ್ದು, ಇದನ್ನು ದಿನಕ್ಕೆ 6,000 ಪರೀಕ್ಷೆಗಳಿಗೆ ಹೆಚ್ಚಿಸಲಾಗುವುದು ಎಂದು ಹೇಳಿದರು.

ಸೋಂಕಿತರ ಪ್ರಾಥಮಿಕ ಮತ್ತು ದ್ವಿತೀಯ ಸಂಪರ್ಕಿತರನ್ನು ಹೆಚ್ಚಾಗಿ ಪರೀಕ್ಷೆಗೆ ಒಳಪಡಿಸಲಾಗುತ್ತಿದೆ. ನಗರದಲ್ಲಿ ಕೊರೋನಾ ಪಾಸಿಟಿವ ದರ ಸ್ವಲ್ಪ ಪ್ರಮಾಣದಲ್ಲಿ ಹೆಚ್ಚಾಗಿದೆ. ಆದರೆ, ಆಸ್ಪತ್ರೆಗೆ ದಾಖಲಾಗುವವರ ಸಂಖ್ಯೆಯಲ್ಲಿ ಹೆಚ್ಚಳವಾಗಿಲ್ಲ ಎಂದು ಹೇಳಿದರು.

ಬಿಬಿಎಂಪಿ ಆರೋಗ್ಯ ಇಲಾಖೆಯ ಪ್ರಕಾರ, ಬೆಂಗಳೂರಿನಲ್ಲಿ 413 ಕೋವಿಡ್ -19 ಪ್ರಕರಣಗಳು ದಾಖಲಾಗಿದ್ದು, ಅದರಲ್ಲಿ 343 ಮಂದಿ ಚೇತರಿಸಿಕೊಂಡಿದ್ದಾರೆ. ಒಂದು ಸಾವು ಸಂಭವಿಸಿದೆ ಎಂದು ತಿಳಿದುಬಂದಿದೆ.

ಮೃತ ವ್ಯಕ್ತಿ ವಯಸ್ಸಾಗಿದ್ದು, ದೀರ್ಘಕಾಲಿಕ ರೋಗಗಳಿಂದ ಬಳಲುತ್ತಿದ್ದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ನಗರದಲ್ಲಿ ಪತ್ತೆಯಾಗಿರುವ 413 ಸೋಂಕು ಪ್ರಕರಣಗಳಲ್ಲಿ ಬಿಬಿಎಂಪಿ ವ್ಯಾಪ್ತಿಯಲ್ಲಿ 394 ಪ್ರಕರಣಗಳು ದಾಖಲಾಗಿವೆ ಎಂದು ತಿಳಿದುಬಂದಿದೆ.

LEAVE A REPLY

Please enter your comment!
Please enter your name here