Home ಬೆಂಗಳೂರು ನಗರ ಕೋವಿಡ್‌-19: ಬೆಂಗ್ಳೂರಲ್ಲೂ ತೀವ್ರ ಕಟ್ಟೆಚ್ಚರ!

ಕೋವಿಡ್‌-19: ಬೆಂಗ್ಳೂರಲ್ಲೂ ತೀವ್ರ ಕಟ್ಟೆಚ್ಚರ!

30
0

ಬೆಂಗಳೂರು:

ನೆರೆಯ ರಾಜ್ಯಗಳಾದ ಮಹಾರಾಷ್ಟ್ರ, ಕೇರಳದಲ್ಲಿ ಕೋವಿಡ್‌ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಬೆಂಗಳೂರು ನಗರದಲ್ಲಿ ಕೋವಿಡ್‌ ಸೋಂಕು ಹರಡದಂತೆ ಆರೋಗ್ಯ ಸಿಬ್ಬಂದಿ ಮುಂಜಾಗ್ರತಾ ಕ್ರಮಕೈಗೊಳ್ಳಬೇಕು ಎಂದು ಬಿಬಿಎಂಪಿ ಆಯುಕ್ತ ಎನ್‌.ಮಂಜುನಾಥ್‌ ಅವರು ಆರೋಗ್ಯಾಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.

ಭಾನುವಾರ ಸಂಜೆ ಪಾಲಿಕೆ ವ್ಯಾಪ್ತಿಯಲ್ಲಿ ಕೋವಿಡ್‌-19ಕ್ಕೆ ಸಂಬಂಧಿಸಿದಂತೆ ಎಲ್ಲಾ ವಲಯಗಳ ಜಂಟಿ ಆಯುಕ್ತರು, ಆರೋಗ್ಯಾಧಿಕಾರಿಗಳು, ಪ್ರಾಥಮಿಕ ಆರೋಗ್ಯ ಕೇಂದ್ರಗಳ ವೈದ್ಯಾಧಿಕಾರಿಗಳ ಸಭೆ ನಡೆಸಿ ಅವರು ಮಾತನಾಡಿದರು.

ಪಾಲಿಕೆ ವ್ಯಾಪ್ತಿಯಲ್ಲಿ ಕೋವಿಡ್‌ ಪರೀಕ್ಷೆಗಾಗಿ 500 ತಂಡಗಳಿದ್ದು, ಈ ತಂಡಗಳನ್ನು ಸಮರ್ಪಕವಾಗಿ ಬಳಸಿಕೊಂಡು ತ್ವರಿತವಾಗಿ ಕೋವಿಡ್‌ ಪರೀಕ್ಷೆಗಳನ್ನು ಹೆಚ್ಚಿಸಬೇಕು. ಸೋಂಕಿತರೊಂದಿಗೆ ಸಂಪರ್ಕದಲ್ಲಿದ್ದ ಪ್ರಾಥಮಿಕ ಮತ್ತು ದ್ವಿತೀಯ ಸಂಪರ್ಕಿತರ ಪತ್ತೆಗೆ ಆರೋಗ್ಯ ಅಧಿಕಾರಿಗಳೊಂದಿಗೆ ಕಂದಾಯ ಅಧಿಕಾರಿಗಳು, ಎಂಜಿನಿಯರ್‌ಗಳನ್ನು ಬಳಸಿಕೊಳ್ಳಬೇಕು. ಮುಖ್ಯವಾಗಿ ಪ್ರಾಥಮಿಕ ಆರೋಗ್ಯ ಕೇಂದ್ರಗಳ ಮಟ್ಟದಲ್ಲೇ ಕೋವಿಡ್‌ ಪ್ರಕರಣ ನಿಯಂತ್ರಿಸಲು ಕ್ರಮವಹಿಸಬೇಕು ಎಂದು ಸೂಚಿಸಿದರು.

ನೆರೆಯ ರಾಜ್ಯಗಳಾದ ಮಹಾರಾಷ್ಟ್ರ, ಕೇರಳದಲ್ಲಿ ಕೋವಿಡ್‌ ಪ್ರಕರಣಗಳು ಹೆಚ್ಚಾಗುತ್ತಿವೆ. ಇದೀಗ ಪಂಜಾಬ್‌, ಮಧ್ಯಪ್ರದೇಶ, ಛತ್ತೀಸ್‌ಗಡದಲ್ಲೂ ಸೋಂಕು ಹೆಚ್ಚುತ್ತಿದೆ. ಇದು ಆತಂಕಕ್ಕೆ ಕಾರಣವಾಗಿದ್ದು ಬೆಂಗಳೂರು ನಗರದಲ್ಲಿ ಕೋವಿಡ್‌ ಸೋಂಕು ಹರಡದಂತೆ ಆರೋಗ್ಯ ಸಿಬ್ಬಂದಿ ಮುಂಜಾಗ್ರತಾ ಕ್ರಮಕೈಗೊಳ್ಳಬೇಕು ಎಂದು ಮಂಜುನಾಥ್‌ ಅವರು ಸೂಚನೆ ನೀಡಿದ್ದಾರೆ..

LEAVE A REPLY

Please enter your comment!
Please enter your name here