Home ಆರೋಗ್ಯ COVID-19: ಬೆಂಗಳೂರಿನಲ್ಲಿ 2,906 ಸೇರಿ 4,234 ಮಂದಿಗೆ ಪಾಸಿಟಿವ್, 18 ಸಾವು

COVID-19: ಬೆಂಗಳೂರಿನಲ್ಲಿ 2,906 ಸೇರಿ 4,234 ಮಂದಿಗೆ ಪಾಸಿಟಿವ್, 18 ಸಾವು

47
0

ಬೆಂಗಳೂರು:

ಕರ್ನಾಟಕದಲ್ಲಿ ಕೊರೋನಾ ಅಬ್ಬರ ಮತ್ತೆ ಹೆಚ್ಚುತ್ತಿದ್ದು, ಇಂದು ಬೆಂಗಳೂರಿನಲ್ಲಿ 2,906 ಮಂದಿಗೆ ಸೋಂಕು ದೃಢಪಟ್ಟಿದ್ದು, ರಾಜ್ಯದಲ್ಲಿ 4225 ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ. ಇದರೊಂದಿಗೆ ಸೋಂಕಿತರ ಸಂಖ್ಯೆ 10,01,238ಕ್ಕೆ ಏರಿಕೆಯಾಗಿದೆ.

ಇನ್ನು ಕಳೆದ 24 ಗಂಟೆಯಲ್ಲಿ ರಾಜ್ಯದಲ್ಲಿ ಕೊರೋನಾ ಸೋಂಕಿನಿಂದ 18 ಸೋಂಕಿತರು ಮೃತಪಟ್ಟಿದ್ದು, ಸಾವಿನ ಸಂಖ್ಯೆ 12,585ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

ಬೆಂಗಳೂರಿನಲ್ಲಿ ಇಂದು 2,906 ಮಂದಿಗೆ ಸೋಂಕು ದೃಢಪಟ್ಟಿದ್ದು, ಸೋಂಕಿಗೆ 11 ಮಂದಿ ಬಲಿಯಾಗಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

ರಾಜ್ಯದಲ್ಲಿ ಇಂದು 1,599 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 9,57,769ಕ್ಕೆ ಏರಿಕೆಯಾಗಿದೆ. ಇನ್ನು 30,865 ಸಕ್ರೀಯ ಪ್ರಕರಣಗಳಿದ್ದು, ಈ ಪೈಕಿ 265 ಮಂದಿ ಕೋವಿಡ್ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

LEAVE A REPLY

Please enter your comment!
Please enter your name here