ಬೆಂಗಳೂರು:
ಬೆಂಗಳೂರಿನಲ್ಲಿ ಇಂದು 3,002 ಮಂದಿಗೆ ಸೋಂಕು ದೃಢಪಟ್ಟಿದ್ದು, ಇದರೊಂದಿಗೆ ಸೋಂಕಿತರ ಸಂಖ್ಯೆ 4,44,244ಕ್ಕೆ ಏರಿಕೆಯಾಗಿದೆ. ಇನ್ನು ನಗರದಲ್ಲಿ ಸೋಂಕಿಗೆ 6 ಮಂದಿ ಬಲಿಯಾಗಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.
ರಾಜ್ಯದಲ್ಲಿ ಕೊರೋನಾ ಅಬ್ಬರ ಮತ್ತೆ ಹೆಚ್ಚುತ್ತಿದ್ದು, ಇಂದು 4,373 ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ. ಇದರೊಂದಿಗೆ ಸೋಂಕಿತರ ಸಂಖ್ಯೆ 10,10,602ಕ್ಕೆ ಏರಿಕೆಯಾಗಿದೆ.
ಇಂದಿನ 03/04/2021 ಸಂಪೂರ್ಣ ಪತ್ರಿಕಾ ಪ್ರಕಟಣೆಗಾಗಿ ಇಲ್ಲಿ ನೀಡಲಾಗಿರುವ ಲಿಂಕ್ ಅನ್ನು ಕ್ಲಿಕ್ ಮಾಡಿ.https://t.co/QzY25yAME2 @mla_sudhakar @Comm_dhfwka @MDNHM_Kar @KarnatakaVarthe @PIBBengaluru @CovidKarnataka pic.twitter.com/BX6BwO9jJT
— K'taka Health Dept (@DHFWKA) April 3, 2021
ಇನ್ನು ಕಳೆದ 24 ಗಂಟೆಯಲ್ಲಿ ರಾಜ್ಯದಲ್ಲಿ ಕೊರೋನಾ ಸೋಂಕಿನಿಂದ 19 ಸೋಂಕಿತರು ಮೃತಪಟ್ಟಿದ್ದು, ಸಾವಿನ ಸಂಖ್ಯೆ 12,610ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.