Home ಶಿಕ್ಷಣ ಬೆಂಗಳೂರು ನಗರ ಜಿಲ್ಲೆಯಲ್ಲಿ 6-9ನೇ‌ ಭೌತಿಕ ತರಗತಿ ಸ್ಥಗಿತ – ಸುರೇಶ್‌ ಕುಮಾರ್

ಬೆಂಗಳೂರು ನಗರ ಜಿಲ್ಲೆಯಲ್ಲಿ 6-9ನೇ‌ ಭೌತಿಕ ತರಗತಿ ಸ್ಥಗಿತ – ಸುರೇಶ್‌ ಕುಮಾರ್

127
0
ಪ್ರಾತಿನಿಧ್ಯ ಚಿತ್ರ

ಬೆಂಗಳೂರು:

ಬೆಂಗಳೂರು ನಗರ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಕೋವಿಡ್ ಪ್ರಕರಣಗಳನ್ನು ಪರಿಗಣಿಸಿ ಪ್ರಸ್ತುತ ನಡೆಯುತ್ತಿರುವ 6-9ನೇ‌ ಭೌತಿಕ ತರಗತಿಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ‌ ಆದೇಶದವರೆಗೆ ನಿಲ್ಲಿಸಲಾಗುತ್ತದೆ ಎಂದು ಸಚಿವ ಸುರೇಶ್‌ಕುಮಾರ್ ಹೇಳಿದ್ದಾರೆ.

ಈ ಸಂಬಂಧ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಲಾಗಿದ್ದು, ಈ ವಯೋಮಾನದ ವಿದ್ಯಾರ್ಥಿಗಳ ಆರೋಗ್ಯದ ಹಿತದೃಷ್ಟಿಯಿಂದ‌ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. 10 ನೇ ತರಗತಿಗಳು ಎಂದಿನಂತೆ ಮುಂದುವರೆಯಲಿದ್ದು, ವಿದ್ಯಾರ್ಥಿಗಳ ಹಾಜರಾತಿ ಕಡ್ಡಾಯವಲ್ಲ ಎಂದಿದ್ದಾರೆ. 

ರಾಜ್ಯದ ಉಳಿದೆಡೆ ಪ್ರಸ್ತುತ ಇರುವ ವ್ಯವಸ್ಥೆ ಮುಂದುವರೆಯಲಿದ್ದು, ಮುಂದಿನ ದಿನಗಳಲ್ಲಿ ಪರಿಸ್ಥಿತಿಗೆ ಅನುಗುಣವಾಗಿ ಸೂಕ್ತ ತೀರ್ಮಾನವನ್ನು ತೆಗೆದುಕೊಳ್ಳಲಾಗುವುದು ಎಂದು ಅವರು ಹೇಳಿದ್ದಾರೆ.

ಪರೀಕ್ಷೆ: ಕಡ್ಡಾಯ ಶಿಕ್ಷಣ ಕಾಯಿದೆಯ ಅವಕಾಶಗಳಡಿಯಲ್ಲಿ 6-9ನೇ ತರಗತಿಗಳಿಗೆ ಸಂಬಂಧಿಸಿದಂತೆ ಶಾಲೆಗಳು ನಡೆಸಬೇಕಾದ ಮೌಲ್ಯಾಂಕನ ಪರೀಕ್ಷೆಗಳ ಕುರಿತಂತೆ ಮುಂದಿನ ದಿನಗಳಲ್ಲಿ‌ ಅಗತ್ಯ ನಿರ್ದೇಶನಗಳನ್ನು ನೀಡಲಾಗುವುದೆಂದು ಸಚಿವರು ಸ್ಪಷ್ಟ ಪಡಿಸಿದ್ದಾರೆ.

LEAVE A REPLY

Please enter your comment!
Please enter your name here