ಬೆಂಗಳೂರು:
ಕರ್ನಾಟಕದಲ್ಲಿ ಕೊರೋನಾ ಅಬ್ಬರ ಮತ್ತೆ ಹೆಚ್ಚುತ್ತಿದ್ದು, ಬುಧವಾರ ಬೆಂಗಳೂರಿನಲ್ಲಿ 2928 ಮಂದಿಗೆ ಸೋಂಕು ದೃಢಪಟ್ಟಿದ್ದು, ರಾಜ್ಯದಲ್ಲಿ 4225 ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ. ಇದರೊಂದಿಗೆ ಸೋಂಕಿತರ ಸಂಖ್ಯೆ 9,97,004ಕ್ಕೆ ಏರಿಕೆಯಾಗಿದೆ.
ಇನ್ನು ಕಳೆದ 24 ಗಂಟೆಯಲ್ಲಿ ರಾಜ್ಯದಲ್ಲಿ ಕೊರೋನಾ ಸೋಂಕಿನಿಂದ 26 ಸೋಂಕಿತರು ಮೃತಪಟ್ಟಿದ್ದು, ಸಾವಿನ ಸಂಖ್ಯೆ 12,567ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.
ಇಂದಿನ 31/03/2021 ಸಂಪೂರ್ಣ ಪತ್ರಿಕಾ ಪ್ರಕಟಣೆಗಾಗಿ ಇಲ್ಲಿ ನೀಡಲಾಗಿರುವ ಲಿಂಕ್ ಅನ್ನು ಕ್ಲಿಕ್ ಮಾಡಿ.https://t.co/1uyHd0sIGD @mla_sudhakar @Comm_dhfwka @MDNHM_Kar @KarnatakaVarthe @PIBBengaluru @CovidKarnataka pic.twitter.com/zFbJAE9Tq4
— K'taka Health Dept (@DHFWKA) March 31, 2021
ಬೆಂಗಳೂರಿನಲ್ಲಿ ಇಂದು 2928 ಮಂದಿಗೆ ಸೋಂಕು ದೃಢಪಟ್ಟಿದ್ದು, ಇದರೊಂದಿಗೆ ಸೋಂಕಿತರ ಸಂಖ್ಯೆ 4,10,594ಕ್ಕೆ ಏರಿಕೆಯಾಗಿದೆ. ಇನ್ನು ನಗರದಲ್ಲಿ ಸೋಂಕಿಗೆ 18 ಮಂದಿ ಬಲಿಯಾಗಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.
ರಾಜ್ಯದಲ್ಲಿ ಇಂದು 1492 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 9,56,170ಕ್ಕೆ ಏರಿಕೆಯಾಗಿದೆ. ಇನ್ನು 28248 ಸಕ್ರೀಯ ಪ್ರಕರಣಗಳಿದ್ದು, ಈ ಪೈಕಿ 266 ಮಂದಿ ಕೋವಿಡ್ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.