ಬೆಂಗಳೂರು:
ಕರ್ನಾಟಕದಲ್ಲಿ 18 ವರ್ಷ ದಾಟಿದವರಿಗೆ ಕೋವಿಡ್ ಲಸಿಕೆ ನೀಡುವ ಅಭಿಯಾನಕ್ಕೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಶನಿವಾರ ಸಾಂಕೇತಿಕವಾಗಿ ಚಾಲನೆ ನೀಡಿದರು.
18 ವರ್ಷ ದಾಟಿದವರಿಗೆ ಲಸಿಕೆ ನೀಡುವ ಕಾರ್ಯಕ್ರಮಕ್ಕೆ ನಗರದ ಬೌರಿಂಗ್ ಆಸ್ಪತ್ರೆಯಲ್ಲಿ ಸಾಂಕೇತಿಕವಾಗಿ ಚಾಲನೆ ನೀಡಿದರು.
ಬಳಿಕ ಮಾತನಾಡಿದ ಅವರು, ‘ಇಂದಿನಿಂದ ಕೇಂದ್ರದ ಸೂಚನೆಯಂತೆ 18 ವರ್ಷ ದಾಟಿದವರಿಗೆ ಲಸಿಕೆ ನೀಡುವ ಕಾರ್ಯಕ್ರಮ ಆರಂಭವಾಗುತ್ತಿದೆ. 18 ವರ್ಷ ದಾಟಿದ ಎಲ್ಲರಿಗೂ ಉಚಿತವಾಗಿ ನೀಡಲು ಲಸಿಕೆ ನೀಡಲು ರಾಜ್ಯ ಸರ್ಕಾರ ಈಗಾಗಲೇ ತೀರ್ಮಾನಿಸಿದೆ. ಸದ್ಯ ಈ ಉದ್ದೇಶಕ್ಕೆ ಕೇಂದ್ರ ಸರ್ಕಾರದಿಂದ 3 ಲಕ್ಷ ಲಸಿಕೆ ಲಭ್ಯವಾಗಿದೆ. ನಮ್ಮ ಬಳಿ 1 ಲಕ್ಷ ಹೆಚ್ಚು ಲಸಿಕೆ ಇದೆ. ಅದನ್ನು ಇವತ್ತಿನಿಂದ ಕೊಡಲು ಆರಂಭಿಸುತ್ತೇವೆ. 2 ಕೋಟಿ ಲಸಿಕೆ ಖರೀದಿಗೆ ರಾಜ್ಯ ಸರ್ಕಾರ ಈಗಾಗಲೇ ಹಣ ಕೊಟ್ಟಾಗಿದೆ. ಕರ್ನಾಟಕದಲ್ಲಿ 18 ವರ್ಷ ವಯೋಮಾನದ 3.26 ಕೋಟಿ ಜನರಿಗೆ ಲಸಿಕೆ ಕೊಡಲು ಸರ್ಕಾರ ಉದ್ದೇಶಿಸಿದೆ. ’ ಎಂದರು.
ರಾಜ್ಯದಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಲಸಿಕೆ ಅಭಿಯಾನಕ್ಕೆ ಸಾಂಕೇತಿಕ ಚಾಲನೆ ನೀಡುವ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ @BSYBJP ರವರ ಭಾಷಣದ ಪ್ರಮುಖಾಂಶಗಳು;#KarnatakaFightsCorona #United2FightCorona #LargestVaccineDrive @narendramodi @PMOIndia @drharshvardhan @MoHFW_INDIA pic.twitter.com/KDBwwFTpqA
— CM of Karnataka (@CMofKarnataka) May 1, 2021