Home ಬೆಂಗಳೂರು ನಗರ ಕೋವಿಡ್-19: ಕರ್ನಾಟಕದ ಪರಿಸ್ಥಿತಿ ಪರಾಮರ್ಶೆಗೆ ಇಂದು ಬೆಳಗ್ಗೆ ತುರ್ತು ಸಭೆ ಕರೆದ ಸಿಎಂ ಯಡಿಯೂರಪ್ಪ

ಕೋವಿಡ್-19: ಕರ್ನಾಟಕದ ಪರಿಸ್ಥಿತಿ ಪರಾಮರ್ಶೆಗೆ ಇಂದು ಬೆಳಗ್ಗೆ ತುರ್ತು ಸಭೆ ಕರೆದ ಸಿಎಂ ಯಡಿಯೂರಪ್ಪ

63
0

ಬೆಂಗಳೂರು:

ರಾಜ್ಯದಲ್ಲಿ ಹೊಸದಾಗಿ 14 ಸಾವಿರದ 738 ಕೊರೊನಾ ಸೋಂಕು ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಶುಕ್ರವಾರ ತಮ್ಮ ನಿವಾಸದಲ್ಲಿ ತುರ್ತು ಸಭೆ ಕರೆದಿದ್ದಾರೆ.

ಇಂದು ಬೆಳಗ್ಗೆ 9.30ಕ್ಕೆ ಮುಖ್ಯಮಂತ್ರಿಗಳ ಅಧಿಕೃತ ನಿವಾಸ ಕಾವೇರಿಯಲ್ಲಿ ಸಭೆ ನಡೆಯಲಿದ್ದು ಕೋವಿಡ್-19 ಸ್ಥಿತಿಗತಿ, ಮುಂದೆ ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ಚರ್ಚೆ ನಡೆಸಲಾಗುತ್ತದೆ ಎಂದು ತಿಳಿದುಬಂದಿದೆ. ಸಭೆಯಲ್ಲಿ ಸಂಪುಟ ಸಚಿವರು, ಹಿರಿಯ ಅಧಿಕಾರಿಗಳು, ತಜ್ಞರು, ವೈದ್ಯರು ಭಾಗವಹಿಸುವ ಸಾಧ್ಯತೆಯಿದೆ.

ರಾಜ್ಯದಲ್ಲಿ ಹೊಸದಾಗಿ 14 ಸಾವಿರದ 738 ಕೊರೊನಾ ಸೋಂಕು ಪ್ರಕರಣಗಳು ವರದಿಯಾಗಿವೆ. 3 ಸಾವಿರದ 591 ಮಂದಿ ಚೇತರಿಸಿಕೊಂಡು ಆಸ್ಪತ್ರೆಯಿಂದ ವಾಪಸ್ಸಾಗಿದ್ದು, ಒಟ್ಟು ಈವರೆಗೆ 9 ಲಕ್ಷ 99 ಸಾವಿರದ 958 ಜನರು ಗುಣಮುಖರಾಗಿದ್ದಾರೆ. ಸದ್ಯ 92 ಸಾವಿರದ 561 ಜನರು ಸೋಂಕಿನಿಂದ ಬಳಲುತ್ತಿದ್ದಾರೆ.

555 ಮಂದಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಪ್ರಕಟಣೆ ತಿಳಿಸಿದೆ. ಬೆಂಗಳೂರಿನಲ್ಲೇ ನಿನ್ನೆ ಒಂದೇ ದಿನ 30 ಜನರು ಸೋಂಕಿನಿಂದ ಮೃತಪಟ್ಟಿದ್ದು ರಾಜ್ಯದಲ್ಲಿ ಒಟ್ಟು 66 ಜನರು ಮೃತಪಟ್ಟಿದ್ದಾರೆ.

ಬೆಂಗಳೂರಿನಲ್ಲಿ 10 ಸಾವಿರದ 497 ಹೊಸ ಸೋಂಕು ಪ್ರಕರಣಗಳು ವರದಿಯಾಗಿದ್ದು ಒಟ್ಟು ಈವರೆಗೆ 5 ಲಕ್ಷದ 12 ಸಾವಿರದ 521 ಪ್ರಕರಣಗಳು ದೃಢಪಟ್ಟಿವೆ. 1 ಸಾವಿರದ 807 ಜನರು ಆಸ್ಪತ್ರೆಯಿಂದ ವಾಪಸ್ಸಾಗಿದ್ದು ಈವರೆಗೆ 4 ಲಕ್ಷ 35 ಸಾವಿರದ 730 ಮಂದಿ ಗುಣಮುಖರಾಗಿದ್ದಾರೆ. ಪ್ರಸ್ತುತ 71 ಸಾವಿರದ 827 ಜನರು ಸೋಂಕಿನಿಂದ ಬಳಲುತ್ತಿದ್ದಾರೆ.

LEAVE A REPLY

Please enter your comment!
Please enter your name here