Home ಆರೋಗ್ಯ ಆರೋಗ್ಯ ಕ್ಷೇತ್ರಕ್ಕೆ ₹30 ಸಾವಿರ ಕೋಟಿ ರುಪಾಯಿ ಮೀಸಲಿಡಬೇಕು: ಡಿ.ಕೆ. ಶಿವಕುಮಾರ್

ಆರೋಗ್ಯ ಕ್ಷೇತ್ರಕ್ಕೆ ₹30 ಸಾವಿರ ಕೋಟಿ ರುಪಾಯಿ ಮೀಸಲಿಡಬೇಕು: ಡಿ.ಕೆ. ಶಿವಕುಮಾರ್

49
0
Advertisement
bengaluru

ಬೆಂಗಳೂರು:

ಕೊರೋನಾ ಎರಡನೇ ಅಲೆ ವ್ಯಾಪಕವಾಗುತ್ತಿರುವ ಹಿನ್ನೆಲೆಯಲ್ಲಿ ಆರೋಗ್ಯ ಕ್ಷೇತ್ರಕ್ಕೆ 30 ಸಾವಿರ ಕೋಟಿ ರುಪಾಯಿ ಮೀಸಲಿಡಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ರಾಜ್ಯ ಸರಕಾರವನ್ನು ಆಗ್ರಹಿಸಿದ್ದಾರೆ.

ರಾಜ್ಯದಲ್ಲಿ ಕೊರೋನಾ ಪರಿಸ್ಥಿತಿ ದಿನೇ ದಿನೇ ಗಂಭೀರವಾಗುತ್ತಿದೆ. ಸೋಂಕಿತರಿಗೆ ಬೆಡ್ ಗಳು ಸಿಗುತ್ತಿಲ್ಲ. ಐಸಿಯು, ರೆಮ್ ಡಿಸಿವಿಯರ್ ಲಸಿಕೆ, ಆಮ್ಲಜನಕ ಅಭಾವ ಸೃಷ್ಟಿಯಾಗಿವೆ. ಪ್ರತಿ ವಿಚಾರದಲ್ಲೂ ಪರಿಸ್ಥಿತಿ ಬಿಗಡಾಯಿಸುತ್ತಿದ್ದು, ಸರ್ಕಾರ ಕೂಡಲೇ ಅಭಿವೃದ್ಧಿ ಯೋಜನೆಗಳನ್ನು ನಿಲ್ಲಿಸಿ, ಆ ಹಣವನ್ನು ಕೊರೋನಾ ನಿಯಂತ್ರಣಕ್ಕೆ ವಿನಿಯೋಗಿಸಬೇಕು. ಸಮರೋಪಾದಿಯಲ್ಲಿ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಅವರು ಒತ್ತಾಯಿಸಿದ್ದಾರೆ.

ರಾಜ್ಯದಲ್ಲಿ ಅತಿ ಹೆಚ್ಚು ವೈದ್ಯಕೀಯ ಕಾಲೇಜುಗಳಿವೆ. ಸಾಕಷ್ಟು ಪ್ರಮಾಣದಲ್ಲಿ ವೈದ್ಯರು, ಆರೋಗ್ಯ ಸಿಬ್ಬಂದಿಗಳಿದ್ದಾರೆ. ಈ ಎಲ್ಲ ಸಂಪನ್ಮೂಲಗಳನ್ನು ಸಮರ್ಪಕವಾಗಿ ಬಳಸಿಕೊಳ್ಳಬೇಕು. ಪ್ರತಿಯೊಬ್ಬರಿಗೂ ಉಚಿತ ಚಿಕಿತ್ಸೆ ಸಿಗುವಂತಾಗಬೇಕು. ಪರೀಕ್ಷೆ ಪ್ರಮಾಣ ಹೆಚ್ಚಿಸಬೇಕು. ಈ ನಿಟ್ಟಿನಲ್ಲಿ ಆರೋಗ್ಯ ಕ್ಷೇತ್ರಕ್ಕೆ ಕನಿಷ್ಠ ಪಕ್ಷ ₹ 30 ಸಾವಿರ ಕೋಟಿಯನ್ನಾದರೂ ಮೀಸಲಿಡಬೇಕು ಎಂದು ಶಿವಕುಮಾರ್ ಅವರು ಹೇಳಿಕೆಯಲ್ಲಿ ಒತ್ತಾಯಿಸಿದ್ದಾರೆ.

bengaluru bengaluru

bengaluru

LEAVE A REPLY

Please enter your comment!
Please enter your name here