Home ಬಳ್ಳಾರಿ ಕೋವಿಡ್-19: ಬಳ್ಳಾರಿ, ಹೊಸಪೇಟೆಯಲ್ಲಿ ಸೋಮವಾರದಿಂದ ರಾತ್ರಿ ಕರ್ಫ್ಯೂ ಜಾರಿ

ಕೋವಿಡ್-19: ಬಳ್ಳಾರಿ, ಹೊಸಪೇಟೆಯಲ್ಲಿ ಸೋಮವಾರದಿಂದ ರಾತ್ರಿ ಕರ್ಫ್ಯೂ ಜಾರಿ

192
0

ಬೆಂಗಳೂರು/ಬಳ್ಳಾರಿ/ವಿಜಯನಗರ:

ಬಳ್ಳಾರಿ ಜಿಲ್ಲಾಧಿಕಾರಿ ಪವನಕುಮಾರ ಮಾಲಪಾಟಿ ಅವರು ಬಳ್ಳಾರಿ ಮಹಾನಗರ ಪಾಲಿಕೆ ಮತ್ತು ಹೊಸಪೇಟೆ ನಗರಸಭೆ ವ್ಯಾಪ್ತಿಯಲ್ಲಿ ಸೋಮವಾರದಿಂದ (ಏ.19) ಏ.30ರ ವರೆಗೆ ಕೊರೊನಾ (ರಾತ್ರಿ ಕರ್ಫ್ಯೂ) ಕರ್ಫ್ಯೂ ಜಾರಿಗೊಳಿಸಿ ಆದೇಶ ಹೊರಡಿಸಿದ್ದಾರೆ.

IAS Pavan Kumar Malapati
ಬಳ್ಳಾರಿ ಜಿಲ್ಲಾಧಿಕಾರಿ ಪವನಕುಮಾರ ಮಾಲಪಾಟಿ

ಆದೇಶದನ್ವಯ: “ರಾತ್ರಿ 10 ಗಂಟೆಯಿಂದ ಬೆಳಿಗ್ಗೆ 5ರ ವರೆಗೆ ಕರ್ಫ್ಯೂ ಜಾರಿಯಲ್ಲಿರುತ್ತದೆ. ಎಲ್ಲ ರೀತಿಯ ವಾಣಿಜ್ಯ ಚಟುವಟಿಕೆ, ಸಂಚಾರ ನಿಷೇಧಿಸಲಾಗಿದೆ. ಆದರೆ, ವೈದ್ಯಕೀಯ, ಅಗತ್ಯ ತುರ್ತು ಸೇವೆಗಳಿಗೆ ಇದು ಅನ್ವಯಿಸುವುದಿಲ್ಲ. ಆರೋಗ್ಯ ಸಂಬಂಧಿತ ಸಮಸ್ಯೆಗಳಿಂದ ಬಳಲುತ್ತಿರುವ ವ್ಯಕ್ತಿಗಳಿಗೆ ಮತ್ತು ಅವರ ಸಹಾಯಕರಿಗೆ ವೈದ್ಯಕೀಯ ಸೇವೆಗಾಗಿ ಸಂಚಾರಕ್ಕೆ ಅನುಮತಿ ಇದೆ. ರಾತ್ರಿ ಪಾಳಿಯಲ್ಲಿ ಕಾರ್ಯನಿರ್ವಹಿಸುವ ಎಲ್ಲ ಕೈಗಾರಿಕೆಗಳು, ಕಂಪನಿಗಳು, ಸಂಸ್ಥೆಗಳು ಯಥಾಸ್ಥಿತಿಯಲ್ಲಿ ಕಾರ್ಯನಿರ್ವಹಿಸಬಹುದು. ಸಂಬಂಧಿಸಿದ ಕಾರ್ಮಿಕರು, ನೌಕರರು ಕರ್ಫ್ಯೂ ಮುನ್ನವೇ ಹಾಜರಾಗಬೇಕು.”

Ballari Covid19 night curfew

ಅದೇ ರೀತಿ ‘ರೈಲು, ಬಸ್, ವಿಮಾನದ ದೂರ ಪ್ರಯಾಣಕ್ಕೆ ಅನುಮತಿ ಇದೆ. ಪ್ರಯಾಣಿಕರು ಮನೆಯಿಂದ ನಿಲ್ದಾಣದ ವರೆಗೆ ಮತ್ತು ನಿಲ್ದಾಣದಿಂದ ಮನೆಗೆ ಅಧಿಕೃತ ಟಿಕೆಟ್ ಆಧಾರದ ಮೇಲೆ ಆಟೊ, ಕ್ಯಾಬ್ ಇತ್ಯಾದಿಗಳ ಮೂಲಕ ಸಂಚರಿಸಲು ಅನುಮತಿ ನೀಡಲಾಗಿದೆ. ಟಿಕೆಟ್‌ ಇಲ್ಲದಿದ್ದಲ್ಲಿ ಕಾನೂನು ಪ್ರಕಾರ ಕ್ರಮ ಜರುಗಿಸಲಾಗುವುದು’ ಎಂದು ಎಚ್ಚರಿಕೆ ನೀಡಿದ್ದಾರೆ.

ಈ ಆದೇಶ ಪಾಲನೆಯಲ್ಲಿ ಲೋಪವೆಸಗುವಂತಹವರ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಅವರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here