Home ಆರೋಗ್ಯ Covid-19: ಆಸ್ಪತ್ರೆಗಳಲ್ಲಿ ವೆಂಟಿಲೇಟರ್ ಲಭ್ಯತೆ ಬಗ್ಗೆ ಕ್ಷಣಕ್ಷಣದ ಮಾಹಿತಿ ಪಡೆದುಕೊಳ್ಳಿ

Covid-19: ಆಸ್ಪತ್ರೆಗಳಲ್ಲಿ ವೆಂಟಿಲೇಟರ್ ಲಭ್ಯತೆ ಬಗ್ಗೆ ಕ್ಷಣಕ್ಷಣದ ಮಾಹಿತಿ ಪಡೆದುಕೊಳ್ಳಿ

30
0
Advertisement
bengaluru

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮಂಗಳವಾರ ಉನ್ನತ ಅಧಿಕಾರಿಗಳೊಂದಿಗೆ ಮಹತ್ವದ ಸಭೆ ನಡೆಸಿ ಕೊವಿಡ್ ನಿಯಮಗಳನ್ನು ಉಲ್ಲಂಘಿಸುವವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಜರುಗಿಸಬೇಕೆಂದು ಹೇಳಿದರು.

ಬೆಂಗಳೂರು:

ರಾಜ್ಯದದಲ್ಲಿ ಕೊರೊನಾ ವೈರಸ್‌ ಪ್ರಕರಣಗಳು ಹೆಚ್ಚುತ್ತಿರುವ ನಿಟ್ಟಿನಲ್ಲಿ ಆಸ್ಪತ್ರೆಗಳಲ್ಲಿ ವೆಂಟಿಲೇಟರ್ ಲಭ್ಯತೆ ಬಗ್ಗೆ ಕ್ಷಣಕ್ಷಣದ ಮಾಹಿತಿ ಅಪ್​ಡೇಟ್ ಮಾಡಿಕೊಳ್ಳಬೇಕು ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅಧಿಕಾರಿಗಳಿಗೆ ಸೂಚಿಸಿದರು.

ರಾಜ್ಯದಲ್ಲಿ ಕೋವಿಡ್-19 ಎರಡನೇ ಅಲೆ ನಿಯಂತ್ರಣಕ್ಕೆ ತರುವ ಕುರಿತು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮಂಗಳವಾರ ಉನ್ನತ ಅಧಿಕಾರಿಗಳೊಂದಿಗೆ ಮಹತ್ವದ ಸಭೆ ನಡೆಸಿದರು.

ಖಾಸಗಿ ಆಸ್ಪತ್ರೆಗಳಲ್ಲಿ ಖಾಲಿಯಿರುವ ಬೆಡ್​ಗಳ ಕ್ಷಣಕ್ಷಣದ ಮಾಹಿತಿ ಪಡೆಯಲು ಸಭೆ ತೀರ್ಮಾನ ಮಾಡಲಾಯಿತು. ಲಸಿಕೆ ಕೊರತೆ ಬಗ್ಗೆ ಕೇಂದ್ರ ಆರೋಗ್ಯ ಸಚಿವಾಲಯದ ಜೊತೆ ನಿರಂತರ ಸಂಪರ್ಕದಲ್ಲಿದ್ದು, ಅವಶ್ಯಕತೆಗೆ ಅನುಗುಣವಾಗಿ‌ ಲಸಿಕೆಯ ದಾಸ್ತಾನು ಪಡೆದುಕೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಯಿತು. ಕೊರೊನಾ ಸೋಂಕು ತಡೆ ದೃಷ್ಟಿಯಿಂದ ನೈಟ್ ಕರ್ಫ್ಯೂವನ್ನು ಇನ್ನಷ್ಟು ಬಿಗಿಗೊಳಿಸಲು ಪೊಲೀಸ್ ಅಧಿಕಾರಿಗಳಿಗೆ ಯಡಿಯೂರಪ್ಪ ಸೂಚಿಸಿದರು.

bengaluru bengaluru

ರಾಜ್ಯದಲ್ಲಿ ಅಗತ್ಯವಿರುವ ಸ್ಥಳಗಳಲ್ಲಿ ಮೈಕ್ರೊಕಂಟೇನ್​ಮೆಂಟ್ ವಲಯಗಳನ್ನು ಘೋಷಿಸಲು ಮುಖ್ಯಮಂತ್ರಿ ಸೂಚನೆ ನೀಡಿದರು. ಇಂಥ ವಲಯಗಳಲ್ಲಿ ಪರೀಕ್ಷೆಗಳನ್ನು ಹೆಚ್ಚಿಸಬೇಕು. ಸಂಪರ್ಕಿತರನ್ನು ಪತ್ತೆಹಚ್ಚಲು ಗಮನ ನೀಡಬೇಕು. ಮಾಸ್ಕ್​ ಹಾಕದಿರುವುದು ಮತ್ತು ಇತರ ಕೊವಿಡ್ ನಿಯಮಗಳನ್ನು ಉಲ್ಲಂಘಿಸುವವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಜರುಗಿಸಬೇಕೆಂದು ಯಡಿಯೂರಪ್ಪ ಹೇಳಿದರು.

ಆಸ್ಪತ್ರೆಗಳಲ್ಲಿ ವೆಂಟಿಲೇಟರ್ ಲಭ್ಯತೆ ಬಗ್ಗೆ ಕ್ಷಣಕ್ಷಣದ ಮಾಹಿತಿ ಅಪ್​ಡೇಟ್ ಮಾಡಿಕೊಳ್ಳಬೇಕು. ಪರಿಸ್ಥಿತಿ ನೋಡಿಕೊಂಡು ನೈಟ್ ಕರ್ಫ್ಯೂ ಮುಂದುವರಿಸುವ ಅಥವಾ ನಿಲ್ಲಿಸುವ ಬಗ್ಗೆ ಆರೋಗ್ಯ ಕಾರ್ಯಪಡೆ ಸದಸ್ಯರ ಅಭಿಪ್ರಾಯ ಪಡೆಯಲು ಸೂಚಿಸಲಾಯಿತು. ಮನೆಯಲ್ಲಿ ಐಸೋಲೇಷನ್ ಇರುವವರ ಬಗ್ಗೆ ನಿರಂತರ ಮಾಹಿತಿ ಪಡೆಯಲು ಈ ಹಿಂದಿನ‌ ಕ್ರಮ ಅನುಸರಿಸಲು ಸೂಚನೆ ನೀಡಲಾಯಿತು. ಕೊರೊನಾ ಸೋಂಕಿತರ ಚಿಕಿತ್ಸೆಗೆ ಬಳಸುವ ರೆಮೆಡಿಸಿವಿರ್ ಔಷಧಿಯನ್ನು ಲಭ್ಯತೆಗೆ ಅನುಗುಣವಾಗಿ ಖಾಸಗಿ ಆಸ್ಪತ್ರೆಗಳಿಗೆ ಒದಗಿಸುವ ಬಗ್ಗೆ ಸಭೆ ತೀರ್ಮಾನಿಸಿತು.

ಸಭೆಯಲ್ಲಿ ಮುಖ್ಯಕಾರ್ಯದರ್ಶಿ ರವಿಕುಮಾರ್, ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತಾ, ಪೋಲೀಸ್ ಕಮಿಷನರ್ ಕಮಲ್ ಪಂಥ್ ಸೇರಿದಂತೆ ಇತರರು ಉಪಸ್ಥಿತರಿದ್ದರು.


bengaluru

LEAVE A REPLY

Please enter your comment!
Please enter your name here