ಬೆಂಗಳೂರು:
ಕರ್ನಾಟಕದಲ್ಲಿ ಕಳೆದ 24 ಗಂಟೆಗಳಲ್ಲಿ ಹೊಸದಾಗಿ 38,603 ಕೋವಿಡ್ ಪ್ರಕರಣಗಳು ಮತ್ತು ಹೊಸದಾಗಿ 34,635 ಮಂದಿ ಚೇತರಿಸಿಕೊಂಡಿದ್ದು ಪ್ರಕರಣಗಳು ವರದಿಯಾಗಿದೆ.
ಕರ್ನಾಟಕದಲ್ಲಿ ಇದುವರೆಗೆ ವರದಿಯಾದ ಸೋಂಕು ಪ್ರಕರಣಗಳ ಸಂಖ್ಯೆ 22,42,065ಕ್ಕೆ ಏರಿಕೆಯಾಗಿದೆ ಮತ್ತು ಸದ್ಯ 6,03,639 ಪ್ರಕರಣಗಳು ಸಕ್ರಿಯವಾಗಿವೆ.
ಇಂದಿನ 17/05/2021 ಸಂಪೂರ್ಣ ಪತ್ರಿಕಾ ಪ್ರಕಟಣೆಗಾಗಿ ಇಲ್ಲಿ ನೀಡಲಾಗಿರುವ ಲಿಂಕ್ ಅನ್ನು ಕ್ಲಿಕ್ ಮಾಡಿhttps://t.co/2EGAyCqt6U @CMofKarnataka @BSYBJP @mla_sudhakar @drashwathcn @RAshokaBJP @BSBommai @CPBlr @PIBBengaluru @KarnatakaVarthe @PIBBengaluru @BBMPCOMM @BlrCityPolice @blrcitytraffic pic.twitter.com/skKk9MZkDO
— K'taka Health Dept (@DHFWKA) May 17, 2021
ಇಂದು ಕರ್ನಾಟಕದಲ್ಲಿ 476 ಮತ್ತು ಬೆಂಗಳೂರಿನಲ್ಲಿ 239 ಮಂದಿ ಮೃತಪಟ್ಟಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.
ಬೆಂಗಳೂರಿನಲ್ಲಿ ಅತಿ ಹೆಚ್ಚು 13,338 ಪ್ರಕರಣಗಳು ವರದಿಯಾಗಿದ್ದು ಹಾಸನ 2,324, ಬಳ್ಳಾರಿ 2,322, ಮೈಸೂರು 1,980, ತುಮಕೂರು 1,915, ಬೆಳಗಾವಿ 1,748, ಶಿವಮೊಗ್ಗ 1,322, ಉತ್ತರ ಕನ್ನಡ 1,288, ಹಾಗೂ ಮಂಡ್ಯದಲ್ಲಿ 1,087 ಒಂದು ಸಾವಿರಕ್ಕಿಂತ ಹೆಚ್ಚು ಖಚಿತ ಪ್ರಕರಣಗಳು ವರದಿಯಾಗಿವೆ.