ಬೆಂಗಳೂರು:
ರಾಜ್ಯದಲ್ಲಿ ಕಳೆದ 10 ದಿನಗಳಿಂದ ದೈನಂದಿನ ಕೋವಿಡ್ 19 ಪ್ರಕರಣಗಳ ಸಂಖ್ಯೆಯಲ್ಲಿ ನಿಧಾನಗತಿಯ ಏರಿಕೆಯನ್ನು ಗಮನಿಸಿದ ರಾಜ್ಯ ಆರೋಗ್ಯ ಇಲಾಖೆ ಮತ್ತೆ ಮಾಸ್ಕ್ ಕಡ್ಡಾಯಗೊಳಿಸಿ ಆದೇಶಿಸಿದೆ.
Also Read: Covid-19 spike: Karnataka reimposes mask ‘fatwa’
ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಆಯುಕ್ತ ಡಿ.ರಂದೀಪ್ ಅವರು, ದಿನಾಂಕ: 9.6.2022 ರಂದು 471 ಪ್ರಕರಣಗಳು ಹಾಗು ಪಾಸಿಟಿವ್ ಪ್ರಮಾಣ 2.14% ವರದಿಯಾಗಿದೆ. ಕೋವಿಡ್ 19 ನ ಮೂರನೇ ಅಲೆಯ ನಂತರದ ಅವಧಿಯ ಏರಿಕೆ ಇದಾಗಿದ್ದು, ಮುಂಜಾಗ್ರತಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸುವುದು ಅಗತ್ಯವಾಗಿದೆ ಎಂಬುದಾಗಿ ತಿಳಿಸಿದ್ದಾರೆ.
ಹೊಸ ಮಾರ್ಗಸೂಚಿಗಳು ಇಲ್ಲಿವೆ
- ಸಾರ್ವಜನಿಕ ಪ್ರದೇಶಗಳಲ್ಲಿ ಮಾಸ್ಕ್ ಧರಿಸುವುದನ್ನು ಕಡ್ಡಾಯಗೊಳಸಲಾಗಿದ್ದು, ಈ ಕ್ರಮವನ್ನು ಜಾರಿಗೊಳಸಲು ಮಾರ್ಷಲ್/ ಪೋಲೀಸ್ ಸಿಬ್ಬಂದಿಗಳ ಸಹಾಯವನ್ನು ಪಡೆಯುವುದು.
- ಮುಚ್ಚಿದ ಸಂರಚನೆಯನ್ನು (Closed areas) ಹೊಂದಿದ ಸ್ಥಳಗಳಾದ ಶಾಪಿಂಗ್ ಮಾಲ್‌ಗಳು, ರೆಸ್ಟೋರೆಂಟ್‌ಗಳು, ಪಬ್‌ಗಳು, ಕೆಫೆಟೇರಿಯಾ/ ಹೊಟೇಲ್‌ಗಳು, ಶೈಕ್ಷಣಿಕ ಸಂಸ್ಥೆಗಳು, ಹಾಸ್ಟೆಲ್‌ಗಳು, ಕಛೇರಿಗಳು, ಕಾರ್ಖಾನೆ ಇತ್ಯಾದಿ ಪ್ರದೇಶಗಳಲ್ಲಿ ಸಿಬ್ಬಂದಿಗಳು ಮಾಸ್ಕ್ ಧರಿಸುವುದನ್ನು ಕಡ್ಡಾಯಗೊಳಿಸುವುದು ಹಾಗೂ ಮಾಸ್ಕ್ ಧರಿಸಿ ಬರುವರಿಗೆ ಮಾತ್ರವೇ ಪ್ರವೇಶ ನೀಡುವುದನ್ನು ಖಚಿತಪಡಿಸಿಕೊಳ್ಳುವುದು ಆಯಾ ಸಂಸ್ಥೆಯ ಮಾಲಕರ / ಆಡಳತಗಳ ಜವಾಬ್ದಾರಿಯಾಗಿರುತ್ತದೆ.
- ಸ್ವಂತ ವಾಹನಗಳು ಹಾಗೂ ಸಾರ್ವಜನಿಕ ಸಾರಿಗೆ ವಾಹನಗಳಲ್ಲಿ ( ಬಸ್ ಹಾಗೂ ರೈಲು) ಪ್ರಯಾಣಿಸುವ ಸಂದರ್ಭದಲ್ಲಿ ಸಾರ್ವಜನಿಕರು ಮಾಸ್ಕ್ ಧರಿಸುವುದು ಕಡ್ಡಾಯವಾಗಿರುತ್ತದೆ.
- ILI & SARI ಲಕ್ಷಣಗಳನ್ನು ಹೊಂದಿದವರು, ಹೈರಿಸ್ ಗುಂಪಿನವರು ಹಾಗೂ ಇತರ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿರುವವರನ್ನು ಆದ್ಯತೆಯ ಮೇಲೆ ಪರೀಕ್ಷೆಗೆ ಒಳಪಡುವುದು ಹಾಗೂ ಫಲಿತಾಂಶ ಲಭ್ಯವಾಗುವವರೆಗೂ ಮನೆಯಲ್ಲಿಯೇ ಪ್ರತ್ಯೇಕವಾಗಿರುವುದು.
- ಅರ್ಹ ಜನರೆಲ್ಲರೂ Precautionary dose ಸೇರಿದಂತೆ, ಕೋವಿಡ್ 19 ಲಸಿಕೆಯನ್ನು ಪಡೆಯುವುದು. ಕೋವಿಡ್ 19 ಮುಂಜಾಗ್ರತಾ ಕ್ರಮವಾಗಿ ಮೇಲೆ ತಿಳಿಸಿದ ಅಂಶಗಳನ್ನು ಕಟ್ಟುನಿಟ್ಟಾಗಿ ಅನುಷ್ಠಾನಗೊಳಸುವ ನಿಟ್ಟಿನಲ್ಲಿ ಅಧಿಕಾರಿಗಳು ಸೂಕ್ತ ಕ್ರಮಗಳನ್ನು ಕೈಗೊಳ್ಳಲು ಸೂಚಿಸಿದೆ.