ಏಳು ಜಿಲ್ಲೆಗಳಲ್ಲಿ ಚಿತ್ರಮಂದಿರಗಳಿಗೆ ಮತ್ತೆ ಶೇ.50 ಆಸನ ನಿರ್ಬಂಧ; ರಾಜ್ಯದಲ್ಲಿ ಲಾಕ್ ಡೌನ್, ಸೆಮಿ ಲಾಕ್ ಡೌನ್, ನೈಟ್ ಕರ್ಫ್ಯೂ ವಿಧಿಸುವುದಿಲ್ಲ ಎಂದು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ರವಿಕುಮಾರ್ ಹೇಳಿದ್ದಾರೆ
ಬೆಂಗಳೂರು:
ರಾಜ್ಯದಲ್ಲಿ ಲಾಕ್ ಡೌನ್, ಸೆಮಿ ಲಾಕ್ ಡೌನ್, ನೈಟ್ ಕರ್ಫ್ಯೂ ವಿಧಿಸುವುದಿಲ್ಲ ಎಂದು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ರವಿಕುಮಾರ್ ಹೇಳಿದ್ದಾರೆ ಆದರೆ ಜಿಮ್ ಮತ್ತು ಸ್ವಿಮ್ಮಿಂಗ್ ಪೂಲ್ ಗಳನ್ನು ಸಂಪೂರ್ಣ ಬಂದ್, ಸಾರಿಗೆ ಬಸ್ ಗಳಲ್ಲಿ ನಿಗದಿತ ಆಸನದ ಮೀತಿ ಮೀರುವಂತಿಲ್ಲ, ರಾಜ್ಯಾದ್ಯಾಂತ ವಿದ್ಯಾಗಮ ಸೇರಿದಂತೆ ಎಲ್ಲಾ ಶೈಕ್ಷಣಿಕ ಚಟುವಟಿಕೆ ಬಂದ್, ಯಾವುದೇ ರೀತಿಯ, ರ್ಯಾಲಿ, ಮುಷ್ಕರ ನಡೆಸುವಂತಿಲ್ಲಹಾಗೂ ಧಾರ್ಮಿಕ ಆಚರಣೆ, ಜಾತ್ರೆ ನಿಷೇಧ ಎಂದು ಆದೇಶ ಹೊರಡಿಸಿ ಹೊಸ ಮಾರ್ಗಸೂಚಿಯನ್ನು ಜಾರಿಮಾಡಿದ್ದಾರೆ.
ವಿಧಾನಸೌಧದಲ್ಲಿಂದು ಆರೋಗ್ಯ ಇಲಾಖೆ ಮತ್ತಿತ್ತರ ಇಲಾಖಾಧಿಕಾರಿಗಳ ಜೊತೆ ಸಭೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲಾಕ್ ಡೌನ್ ಗಿಂತ ಸೋಂಕು ನಿಯಂತ್ರಣ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಜನ ಜಾಗೃತಿ ಮೂಡಿಸಲಾಗುವುದು ಎಂದರು. ಕೋವಿಡ್ ಸೋಂಕು ನಿಯಂತ್ರಣಕ್ಕೆ ಲಸಿಕೆ ಅಭಿಯಾನ ಚುರುಕುಗೊಳಿಸಲು ಸರ್ಕಾರ ತಿರ್ಮಾನಿಸಿದ್ದು, ರಾಜ್ಯದಲ್ಲಿ ಲಾಕ್ ಡೌನ್, ಸೆಮಿ ಲಾಕ್ ಡೌನ್, ನೈಟ್ ಕರ್ಫ್ಯೂ ವಿಧಿಸುವುದಿಲ್ಲ ಎಂದು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ರವಿಕುಮಾರ್ ಹೇಳಿದ್ದಾರೆ.
ಸಾಂಕ್ರಾಮಿಕ ರೋಗ ನಿಯಂತ್ರಣ ಕಾಯಿದೆ ಉಲ್ಲಂಘನೆ ಮಾಡಿದರೆ ಕ್ರಮ ಜರುಗಿಸಬೇಕು. ಕೈಗಾರಿಕಾ ಪ್ರದೇಶ ಮತ್ತು ಅಪಾರ್ಟ್‌ಮೆಂಟ್ ಗಳಲ್ಲಿ ಲಸಿಕೆ ನೀಡಲು ತೀರ್ಮಾನಿಸಲಾಗಿದೆ. ಕೇಂದ್ರದಿಂದ ಮಾಸ್ಕ್, ಸಾಮಾಜಿಕ ಅಂತರ, ನಿಯಮಗಳ ಬಿಗಿ ಪಾಲನೆಗೆ ಸೂಚಿಸಿದ್ದಾರೆ. ರಾಜ್ಯದಲ್ಲೂ ಕಟ್ಟುನಿಟ್ಟಿನ ಪರಿಪಾಲನೆಗೆ ಒತ್ತು ನೀಡಲಾಗುವುದು ಎಂದು ಹೇಳಿದರು.
ಕೋವಿಡ್‌ಗಾಗಿ ಖಾಸಗಿ ಆಸ್ಪತ್ರೆಗಳಲ್ಲಿ ಶೇಕಡಾ 20ರಷ್ಟು ಹಾಸಿಗೆ ಮೀಸಲಿಡಲಾಗಿದೆ. ಜಾತ್ರೆ ಗಳಿಗೆ ಬ್ರೇಕ್ ಹಾಕಲಾಗಿದೆ. ಈ ಬಗ್ಗೆ ಜಿಲ್ಲಾಡಳಿತ ಸೂಕ್ತ ಕ್ರಮ ತೆಗೆದುಕೊಳ್ಳುತ್ತಿದೆ ಎಂದರು.
ಲಸಿಕೆ ಹಾಕುವ ಪ್ರಕ್ರಿಯೆಯನ್ನು ಹೆಚ್ಚಿಸಲು ಸೂಚನೆ ನೀಡಿದ್ದೇವೆ. ಸರ್ಕಾರವೇ ಮನೆ ಬಾಗಿಲಿಗೆ ಹೋಗಿ ಲಸಿಕೆ ಹಾಕುವ ಸ್ಥಿತಿ ಸೃಷ್ಟಿಯಾಗಿದೆ. ಹೀಗಾಗಿ ಜನ ಹೆಚ್ಚು ಇರುವ ಕಡೆ ಲಸಿಕೆ ಹಾಕಿಸಲು ಕ್ರಮ ಕೈಗೊಳ್ಳಲಾಗಿದೆ. ಈಗಾಗಲೇ ಜಾತ್ರೆ, ಉತ್ಸವಗಳನ್ನು ನಿಯಂತ್ರಿಸಿದ್ದೇವೆ. ಶಾಲೆಗಳನ್ನು ಭೌತಿಕವಾಗಿ ನಡೆಸುವುದು ಬೇಡ ಎಂದೂ ನಿರ್ಧರಿಸಲಾಗಿದೆ ಎಂದು ರವಿಕುಮಾರ್ ಸ್ಪಷ್ಟಪಡಿಸಿದರು.
ಸಭೆಯ ನಂತರ ರಾಜ್ಯ ಸರ್ಕಾರ ಹೊಸ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದ್ದು, ಬೆಂಗಳೂರು ನಗರ ಸೇರಿದಂತೆ ರಾಜ್ಯದ 8 ಜಿಲ್ಲೆಗಳಲ್ಲಿ ಚಿತ್ರಮಂದಿರಗಳಲ್ಲಿ ಶೇ.50ರಷ್ಟು ಪ್ರೇಕ್ಷಕರಿಗೆ ಮಾತ್ರ ಅವಕಾಶ ನೀಡಲಾಗಿದೆ.
ರಾಜ್ಯಾದ್ಯಂತ ಜಿಮ್ ಮತ್ತು ಸ್ವಿಮ್ಮಿಂಗ್ ಪೂಲ್ ಗಳನ್ನು ಸಂಪೂರ್ಣ ಬಂದ್ ಮಾಡಲಾಗುತ್ತಿದೆ. ಸಾರಿಗೆ ಬಸ್ ಗಳಲ್ಲಿ ನಿಗದಿತ ಆಸನದ ಮೀತಿ ಮೀರುವಂತಿಲ್ಲ. ರಾಜ್ಯಾದ್ಯಾಂತ ವಿದ್ಯಾಗಮ ಸೇರಿದಂತೆ ಎಲ್ಲಾ ಶೈಕ್ಷಣಿಕ ಚಟುವಟಿಕೆ ಬಂದ್
ಯಾವುದೇ ರೀತಿಯ, ರ್ಯಾಲಿ, ಮುಷ್ಕರ ನಡೆಸುವಂತಿಲ್ಲ ಧಾರ್ಮಿಕ ಆಚರಣೆ, ಜಾತ್ರೆ ನಿಷೇಧ. ಏಪ್ರಿಲ್ 20ರ ವರೆಗೆ ಈ ಮಾರ್ಗಸೂಚಿ ಅನ್ವಯವಾಗಲಿದೆ.
ಹೊಸ ಮಾರ್ಗಸೂಚಿಗಳು
- ರಾಜ್ಯಾದ್ಯಂತ 6 ರಿಂದ 9 ತರಗತಿಗಳು ಬಂದ್
- 11 ಮತ್ತು 12 ತರಗತಿಗಳು ಅಸ್ತಿತ್ವದಲ್ಲಿರುವ ಮೋಡ್‌ನಲ್ಲಿ ಮುಂದುವರಿಯಬಹುದು. ಆದಾಗ್ಯೂ, ಈ ತರಗತಿಗಳಿಗೆ ವೈಯಕ್ತಿಕವಾಗಿ ಹಾಜರಾಗುವುದು ಕಡ್ಡಾಯವಲ್ಲ.
- ಬೋರ್ಡ್ / ಯೂನಿವರ್ಸಿಟಿ ಪರೀಕ್ಷೆಗಳು ಮತ್ತು ಆರೋಗ್ಯ ವಿಜ್ಞಾನಗಳ ತರಗತಿಗಳನ್ನು ಹೊರತುಪಡಿಸಿ ಉನ್ನತ ಮತ್ತು ವೃತ್ತಿಪರ ಕೋರ್ಸ್‌ಗಳ ತರಗತಿಗಳನ್ನು ಅಮಾನತುಗೊಳಿಸಲಾಗುತ್ತದೆ.
- ಉನ್ನತ ಮತ್ತು ವೃತ್ತಿಪರ ಕೋರ್ಸ್‌ಗಳ ವಿದ್ಯಾರ್ಥಿಗಳನ್ನು ಹೊರತುಪಡಿಸಿ ಇತರೆ ಬೋರ್ಡಿಂಗ್ ಶಾಲೆಗಳು ಮತ್ತು ವಸತಿ ವಸತಿ ನಿಲಯಗಳನ್ನು ಮುಚ್ಚಬೇಕು.
- ಪೂಜಾ ಸ್ಥಳಗಳಲ್ಲಿ ವ್ಯಕ್ತಿಗಳಿಗೆ ಮಾತ್ರ ಭೇಟಿ ನೀಡಲು ಮತ್ತು ಪ್ರಾರ್ಥನೆ ಸಲ್ಲಿಸಲು ಅನುಮತಿ ಇದೆ. ಯಾವುದೇ ಕೂಟಗಳು, ಕಾರ್ಯಗಳು ಇತ್ಯಾದಿ ಇರಬಾರದು.
- ಅಪಾರ್ಟ್ಮೆಂಟ್ ಸಂಕೀರ್ಣಗಳಲ್ಲಿ, ಜಿಮ್, ಪಾರ್ಟಿ ಹಾಲ್, ಕ್ಲಬ್ ಹೌಸ್, ಈಜುಕೊಳ ಮುಂತಾದ ಸಾಮಾನ್ಯ ಸೌಲಭ್ಯಗಳು ಬಂದ್ ಮಾಡಬೇಕು.
- ಮನೆಯಿಂದ ಕೆಲಸದ ಅಭ್ಯಾಸವನ್ನು ಸಾಧ್ಯವಾದಷ್ಟು ಕಚೇರಿಗಳು ಮತ್ತು ಕೆಲಸದ ಸ್ಥಳಗಳಲ್ಲಿ ಅನುಸರಿಸಬೇಕು.
- ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮೈಸೂರು, ಕಲ್ಬುರ್ಗಿ, ದಕ್ಷಿಣ ಕನ್ನಡ, ಉಡುಪಿ, ಬೀದರ್ ಮತ್ತು ಧಾರವಾಡ ಜಿಲ್ಲೆಗಳಲ್ಲಿ ಮಾತ್ರ ಚಿತ್ರಮಂದರಿಗಳಲ್ಲಿ ಗರಿಷ್ಠ 50% ಆಸನಕ್ಕೆ ಅನುಮತಿ.
- ಬೆಂಗಳೂರು, ಮೈಸೂರು, ಕಲ್ಬುರ್ಗಿ, ದಕ್ಷಿಣ ಕನ್ನಡ, ಉಡುಪಿ, ಬೀದರ್ ಮತ್ತು ಹುಬಾಲಿ-ಧಾರವಾಡ್ ಸೇರಿದಂತೆ ಬೆಂಗಳೂರು ನಗರ ಮತ್ತು ಗ್ರಾಮೀಣ ಜಿಲ್ಲೆಗಳಲ್ಲಿ. ಪಬ್‌ಗಳು, ಬಾರ್‌ಗಳು, ಕ್ಲಬ್‌ಗಳು, ರೆಸ್ಟೋರೆಂಟ್‌ಗಳಲ್ಲಿನ ಗ್ರಾಹಕರ ಸಂಖ್ಯೆ ಶೇ.50 ಮೀರಬಾರದು.