Home ಅಪರಾಧ ಕೋವಿಡ್ ಸೋಂಕಿತ ಆಸ್ಪತ್ರೆಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ

ಕೋವಿಡ್ ಸೋಂಕಿತ ಆಸ್ಪತ್ರೆಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ

96
0

ಬೆಂಗಳೂರು:

ಬೆಂಗಳೂರಿನಲ್ಲಿ ಕೋವಿಡ್ ರೋಗಿಯೋರ್ವರು ಅತ್ಮಹತ್ಯೆಗೆ ಶರಣಾಗಿದ್ದಾರೆ. 

ವಿಜಯನಗರದ ಆಸ್ಪತ್ರೆಯಲ್ಲಿ ಕೋವಿಡ್ ಪಾಸಿಟಿವ್ ಹಿನ್ನೆಲೆ   ಚಿಕಿತ್ಸೆ ಪಡೆಯುತ್ತಿದ್ದ ಅಂಜನಾ ನಗರದ ರಾಮಣ್ಣ (61) ಎಂಬ ವ್ಯಕ್ತಿ  ಶುಕ್ರವಾರ ರಾತ್ರಿ 1.30ರ ಸುಮಾರಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. 

ಕೋವಿಡ್ ಸೋಂಕಿತ ವ್ಯಕ್ತಿ ಆತ್ಮಹತ್ಯೆಗೆ ಇನ್ನೂ ಕಾರಣ ತಿಳಿದುಬಂದಿಲ್ಲ.ಈ ಬಗ್ಗೆ ವಿಜಯನಗರ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. 
  
ಆಸ್ಪತ್ರೆಯ ವಾರ್ಡಿನ ಸೀಲಿಂಗ್‌ ಫ್ಯಾನ್‌ಗೆ ನೇಣು ಬಿಗಿದುಕೊಂಡು ಮೃತಪಟ್ಟಿದ್ದಾರೆ.  ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸದ್ಯ ಮೃತ ದೇಹವನ್ನ ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಲಾಗಿದೆ.
 

LEAVE A REPLY

Please enter your comment!
Please enter your name here