Home ಬೆಂಗಳೂರು ನಗರ Covid-19 ಸರ್ಕಾರದ ಸಮರ್ಪಕ ನಿರ್ವಹಣೆ : ಡಿ.ವಿ.ಸದಾನಂದಗೌಡ

Covid-19 ಸರ್ಕಾರದ ಸಮರ್ಪಕ ನಿರ್ವಹಣೆ : ಡಿ.ವಿ.ಸದಾನಂದಗೌಡ

67
0

ಬೆಂಗಳೂರು:

ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಕೊರೊನಾ ಸಾಂಕ್ರಾಮಿಕದ ನಿರ್ವಹಣೆಯನ್ನು ಸರ್ಮಪಕವಾಗಿದ್ದು, ಎಲ್ಲರಿಗೂ ಲಸಿಕೆ ಸೇರಿದಂತೆ ಅಗತ್ಯ ಸೌಲಭ್ಯಗಳನ್ನು ಒದಗಿಸುತ್ತಿದೆ ಎಂದು ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ಸಚಿವರಾದ ಡಿ.ವಿ ಸದಾನಂದ ಗೌಡ ಹೇಳಿದರು.

ಕೆ.ಆರ್.ಪುರ ಕ್ಷೇತ್ರದಲ್ಲಿ ಕೋವಿಡ್‌ನಿಂದ ಮೃತಪಟ್ಟ 115 ಕುಟುಂಬಗಳಿಗೆ ನಗರಾಭಿವೃದ್ಧಿ ಸಚಿವರಾದ ಶ್ರೀ ಬೈರತಿ ಬಸವರಾಜ ಅವರು ವೈಯಕ್ತಿಕವಾಗಿ ಪ್ರತಿ ಕುಟುಂಬಕ್ಕೆ ಒಂದು ಲಕ್ಷ ನೀಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಬೈರತಿ ಬಸವರಾಜ ಅವರು ಕೋವಿಡ್ ನಿಂದ ಮೃತಪಟ್ಟ ಕುಟುಂಬಗಳಿಗೆ ಆರ್ಥಿಕ ನೆರವು ನೀಡುವ ಮೂಲಕ ಸಾಂತ್ವನ ಹೇಳುತ್ತಿರುವುದು ಶ್ಲಾಘನೀಯ ಎಂದರು.

512th birth anniversary of Nadaprabhu Kempegowda Karnataka CM releases postal envelope

ವರ್ಷಾಂತ್ಯದ ವೇಳೆಗೆ ದೇಶದ ಎಲ್ಲ ಅರ್ಹರಿಗೂ ಕೊರೊನಾ ಸೋಂಕು ನಿರೋಧಕ ಚುಚ್ಚುಮದ್ದು ನೀಡುವ ಗುರಿ ಇದ್ದು, ಪ್ರತಿಯೊಬ್ಬರು ಸರ್ಕಾರದ ನಿಯಮಗಳನ್ನು ಪಾಲಿಸಬೇಕು ಎಂದು ಹೇಳಿದರು.

ದುಡಿಯುವ ಕೈಗಳಿಗೆ ಕೇಲಸವಿಲ್ಲದ ಸಂದರ್ಭದಲ್ಲಿ ಒಂದು ಲಕ್ಷ ಕಿಟ್ ವಿತರಣೆ ಮಾಡುವ ಮೂಲಕ ಸಾಮಾಜಿಕ ಕಳಕಳಿ ಮಾಡಿದ ಬೈರತಿ ಬಸವರಾಜ್ ಅವರು ಪ್ರತಿ ಹಂತದಲ್ಲಿ ಸಾರ್ವಜನಿಕ ಸೇವೆ ನಿಂತಿರುವವುದು ಸಂತಸ ತಂದಿದೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಕೆ.ಆರ್.ಪುರದಲ್ಲಿ ಕೆಂಪೇಗೌಡರ ಪ್ರತಿಮೆಗೆ ಮಾರ್ಲಾಪಣೆ ಮಾಡುವ ಮೂಲಕ ೫೧೨ ಜಯಂತಿ ಆಚರಣೆ ಮಾಡಲಾಯಿತು.

ಉಪಮುಖ್ಯಮಂತ್ರಿ ಹಾಗೂ ಸಾರಿಗೆ ಸಚಿವರಾದ ಲಕ್ಷ್ಮಣ ಸವದಿ, ಗೃಹ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವರಾದ ಬಸವರಾಜ ಬೊಮ್ಮಾಯಿ, ಸಹಕಾರ ಸಚಿವರಾದ ಎಸ್.ಟಿ. ಸೋಮಶೇಖರ್, ಅರಣ್ಯ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರಾದ ಅರವಿಂದ ಲಿಂಬಾವಳಿ, ಬಿಬಿಎಂಪಿ ಮಾಜಿ ಸದಸ್ಯರಾದ ಜಯಪ್ರಕಾಶ್, ಅಂತೋಣಿಸ್ವಾಮಿ, ಶ್ರೀಕಾಂತ್, ಸುರೇಶ್ ಮತ್ತಿತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here