Home ಆರೋಗ್ಯ ನಾಳೆಯಿಂದ 18-44 ವರ್ಷ ವಯೋಮಾನದವರಿಗೆ ಕೋವಿಡ್-19 ಲಸಿಕೆ ವ್ಯಾಕ್ಸಿನೇಷನ್

ನಾಳೆಯಿಂದ 18-44 ವರ್ಷ ವಯೋಮಾನದವರಿಗೆ ಕೋವಿಡ್-19 ಲಸಿಕೆ ವ್ಯಾಕ್ಸಿನೇಷನ್

87
0
ಫೈಲ್ ಚಿತ್ರ
bengaluru

ಶನಿವಾರ ರಾಜ್ಯಕ್ಕೆ ತಲುಪಿದ 3.5 ಲಕ್ಷ ಡೋಸ್ ಕೋವಿಶೀಲ್ಡ್‌ ಲಸಿಕೆ

ಬೆಂಗಳೂರು:

ನಾಳೆ ಮೇ 10ರಿಂದ ಬೆಂಗಳೂರಿನ ಕೆ.ಸಿ.ಜನರಲ್, ಜಯನಗರ ಜನರಲ್, ಸರ್ ಸಿ.ವಿ.ರಾಮನ್ ಜನರಲ್, ಇಎಸ್ಐ ಮತ್ತು ನಿಮ್ಹಾನ್ಸ್ ಆಸ್ಪತ್ರೆಗಳಲ್ಲಿ ಹಾಗೂ ಸರ್ಕಾರಿ ವೈದ್ಯಕೀಯ ಕಾಲೇಜುಗಳಲ್ಲಿ 18-44 ವರ್ಷ ವಯೋಮಾನದವರಿಗೆ ಕೋವಿಡ್-19 ಲಸಿಕೆ ವಿತರಿಸಲಾಗುವುದು.

ಈ ಕುರಿತಾಗಿ ಟ್ವಿಟ್ಟರ್‌ನಲ್ಲಿ ಆರೋಗ್ಯ ಸಚಿವ ಡಾ. ಕೆ ಸುಧಾಕರ್‌ ಮಾಹಿತಿ ನೀಡಿದ್ದಾರೆ.

18-44 ವರ್ಷ ವಯೋಮಾನದವರಿಗೆ ಲಸಿಕೆ ವಿತರಿಸುವ ಎಲ್ಲ ಕೇಂದ್ರಗಳಲ್ಲಿ ಈ ಗುಂಪಿನವರಿಗೆ ಪ್ರತ್ಯೇಕ ಸ್ಥಳ ಗುರುತಿಸಲಾಗಿವುದು. ಕೋವಿನ್ ಅಥವಾ ಆರೋಗ್ಯ ಸೇತು ಆಪ್ ಮೂಲಕ ನೋಂದಣಿ ಮಾಡಿಸಿ, ಸಮಯ ನಿಗದಿ ಮಾಡಿಕೊಂಡಿರುವವರಿಗೆ ಮಾತ್ರ ಲಸಿಕೆ ನೀಡಲಾಗುವುದು. ನೋಂದಣಿ ಇಲ್ಲದೆ ನೇರವಾಗಿ ಲಸಿಕಾ ಕೇಂದ್ರಕ್ಕೆ ಬರುವವರಿಗೆ ಅವಕಾಶವಿರುವುದಿಲ್ಲ ಎಂದಿದ್ದಾರೆ.

ಇತರೆ ಜಿಲ್ಲೆಗಳಲ್ಲಿ ಆರಂಭಿಕವಾಗಿ ಜಿಲ್ಲಾಸ್ಪತ್ರೆಗಳು, ತಾಲ್ಲೂಕು ಆಸ್ಪತ್ರೆಗಳು ಹಾಗೂ ಸರ್ಕಾರಿ ವೈದ್ಯಕೀಯ ಕಾಲೇಜುಗಳಲ್ಲಿ 18-44 ವರ್ಷ ವಯೋಮಾನದವರಿಗೆ ಲಸಿಕೆ ವಿತರಣೆ ಮಾಡಲಾಗುವುದು. ಲಸಿಕೆ ಪೂರೈಕೆ ಹೆಚ್ಚಾಗುತ್ತಿದ್ದಂತೆ ಮುಂದಿನ ದಿನಗಳಲ್ಲಿ ಇನ್ನಷ್ಟು ಲಸಿಕಾ ಕೇಂದ್ರಗಳಲ್ಲಿ ವಿತರಣೆ ಆರಂಭಿಸಲಾಗುವುದು ಎಂದು ಮಾಹಿತಿ ನೀಡಿದ್ದಾರೆ.

ಯುವಕರು ತಮ್ಮ ಸರದಿಗಾಗಿ ತಾಳ್ಮೆಯಿಂದ ಕಾಯಿರಿ. ಖಂಡಿತವಾಗಿ ತಮಗೆ ಲಸಿಕೆ ಸಿಗುತ್ತದೆ ಎಂದು ಆರೋಗ್ಯ ಸಚಿವ ಡಾ.ಕೆ ಸುಧಾಕರ್‌ ಮನವಿ ಮಾಡಿಕೊಂಡಿದ್ದಾರೆ. ಈ ಕುರಿತಾಗಿ ಸರಣಿ ಟ್ವೀಟ್‌ಗಳನ್ನು ಮಾಡಿರುವ ಅವರು ಅಗತ್ಯ ಲಸಿಕೆ ಪೂರೈಕೆ ಮಾಡಿಕೊಳ್ಳಲು ನಿರಂತರ ಪ್ರಯತ್ನವನ್ನು ಸರ್ಕಾರ ನಡೆಸುತ್ತಿದೆ ಎಂದಿದ್ದಾರೆ.

ಪ್ರತಿಯೊಬ್ಬ ವ್ಯಕ್ತಿಗೂ ಆದಷ್ಟು ಶೀಘ್ರದಲ್ಲಿ ಲಸಿಕೆ ಒದಗಿಸಲು ಸರ್ಕಾರ ಬದ್ದವಾಗಿದ್ದು, ಆಗತ್ಯ ಲಸಿಕೆ ಪೂರೈಕೆ ಮಾಡಿಕೊಳ್ಳಲು ನಿರಂತರ ಪ್ರಯತ್ನ ನಡೆಸುತ್ತಿದೆ. ಆದ್ದರಿಂದ ಎಲ್ಲ ನಾಗರೀಕರಲ್ಲಿ, ಅದರಲ್ಲೂ ವಿಶೇಷವಾಗಿ ನನ್ನ ಯುವ ಮಿತ್ರರಲ್ಲಿ ನನ್ನ ಮನವಿ, ತಮ್ಮ ಸರದಿಗಾಗಿ ತಾಳ್ಮೆಯಿಂದ ಕಾಯಿರಿ. ಖಂಡಿತವಾಗಿ ತಮಗೆ ಲಸಿಕೆ ಸಿಗುತ್ತದೆ ಎಂದು ತಿಳಿಸಿದ್ದಾರೆ.

ರಾಜ್ಯಕ್ಕೆ ತಲುಪಿದ 3.5 ಲಕ್ಷ ಡೋಸ್ ಕೋವಿಶೀಲ್ಡ್‌ ಲಸಿಕೆ

ರಾಜ್ಯ ಸರ್ಕಾರ ಖರೀದಿಸುತ್ತಿರುವ 2 ಕೋಟಿ ಡೋಸ್ ಕೋವಿಶೀಲ್ಡ್ ಪೈಕಿ ಶನಿವಾರ ರಾತ್ರಿ 3.5 ಲಕ್ಷ ಡೋಸ್ ರಾಜ್ಯಕ್ಕೆ ತಲುಪಿದ್ದು, ಈವರೆಗೂ ಒಟ್ಟು 6.5 ಲಕ್ಷ ಡೋಸ್ ಪೂರೈಕೆಯಾಗಿದೆ ಎಂದು ತಿಳಿಸಿದ್ದಾರೆ.

ಕೇಂದ್ರ ಸರ್ಕಾರ ಈವರೆಗೂ 99,58,190 ಕೋವಿಶೀಲ್ಡ್, 10,91,280 ಕೋವ್ಯಾಕ್ಸಿನ್ ಸೇರಿ ಒಟ್ಟು 1,10,49,470 ಡೋಸ್ ಲಸಿಕೆಗಳನ್ನು ರಾಜ್ಯಕ್ಕೆ ಪೂರೈಕೆ ಮಾಡಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

LEAVE A REPLY

Please enter your comment!
Please enter your name here