60 ವರ್ಷ ಮೇಲ್ಪಟ್ಟ ಹಾಗೂ 45 ವರ್ಷಕ್ಕಿಂತ ಹೆಚ್ಚು ವಯಸ್ಸಿನ ಇತರೆ ಆನಾರೋಗ್ಯ (ಕೋಮಾರ್ಬಿಡಿಟಿ) ಹೊಂದಿರುವವರಿಗೆ ಲಸಿಕೆ ನೀಡಲು ಸಜ್ಜಾ
ನವದೆಹಲಿ:
ಕೋವಿಡ್-19 ವ್ಯಾಕ್ಸಿನೇಷನ್ ನೋಂದಣಿ ಸೋಮವಾರ ಬೆಳಿಗ್ಗೆ 9 ಗಂಟೆಯಿಂದ ಪ್ರಾರಂಭಿಸಲಾಗಿದೆ.
ತಮ್ಮ ಮೊಬೈಲ್ ಸಂಖ್ಯೆಯನ್ನು ಹಂಚಿಕೊಳ್ಳುವ ಮೂಲಕ ನೋಂದಾಯಿಸಲು https://selfregistration.cowin.gov.in/ ಗೆ ಭೇಟಿ ನೀಡಬೇಕಾಗಿದೆ.
60 ವರ್ಷ ಮೇಲ್ಪಟ್ಟ ಹಾಗೂ 45 ವರ್ಷಕ್ಕಿಂತ ಹೆಚ್ಚು ವಯಸ್ಸಿನ ಇತರೆ ಆನಾರೋಗ್ಯ (ಕೋಮಾರ್ಬಿಡಿಟಿ) ಸಮಸ್ಯೆಗಳನ್ನು ಹೊಂದಿರುವವರಿಗೆ ಲಸಿಕೆ ನೀಡಲು ಕೇಂದ್ರ ಸರ್ಕಾರ ಸಜ್ಜಾಗಿದ್ದು, ಇದಕ್ಕಾಗಿ ಅರ್ಹ ಫಲಾನುಭವಿಗಳ ನೋಂದಣಿ ಕಾರ್ಯವನ್ನು ಇಂದಿನಿಂದ ಆರಂಭಿಸಲಾಗಿದೆ.
ಪ್ರಧಾನಮಂತ್ರಿ ಜನ ಆರೋಗ್ಯ ಯೋಜನೆ ಅಡಿಯಲ್ಲಿ ಗೊತ್ತುಪಡಿಸಿದ 10,000 ಆಸ್ಪತ್ರೆಗಳಿವೆ. ಕೇಂದ್ರ ಸರ್ಕಾರದ ಆರೋಗ್ಯ ಯೋಜನೆಯಡಿ ಸುಮಾರು 600 ಆಸ್ಪತ್ರೆಗಳನ್ನು ಗೊತ್ತು ಮಾಡಲಾಗಿದೆ.
ಒಂದು ಮೊಬೈಲ್ ಸಂಖ್ಯೆ ಗರಿಷ್ಠ 4 ಮಂದಿಗೆ ಮಾತ್ರ ನೋಂದಣಿ
ಇನ್ನು ಒಂದು ಮೊಬೈಲ್ ಸಂಖ್ಯೆ ನೀಡಿ ಗರಿಷ್ಠ ನಾಲ್ಕು ಫಲಾನುಭವಿಗಳು ನೋಂದಣಿ ಮಾಡಿಕೊಳ್ಳಬಹುದು. ಆಧಾರ್ ಕಾರ್ಡ್, ಮತದಾರರ ಗುರುತಿನ ಚೀಟಿ, ಪಾಸ್‌ಪೋರ್ಟ್, ಚಾಲನಾ ಪರವಾನಗಿ, ಪ್ಯಾನ್ ಕಾರ್ಡ್, ಎನ್‌ಪಿಆರ್ ಸ್ಮಾರ್ಟ್ ಕಾರ್ಡ್, ಭಾವಚಿತ್ರ ಇರುವ ಪೆನ್ಶನ್ ಪತ್ರದಲ್ಲಿ ಯಾವುದಾದರೂ ಒಂದನ್ನು ಬಳಸಿ ನೋಂದಣಿ ಮಾಡಬಹುದು. ಕೇಂದ್ರ ಸರ್ಕಾರವು ಗುರುತಿಸಿರುವ 8,600ಕ್ಕೂ ಹೆಚ್ಚು ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳಲ್ಲಿ ಲಸಿಕೆ ನೀಡಿಕೆ ನಡೆಯಲಿದೆ. ಪ್ರತಿ ದಿನ ಸಂಜೆ 3 ಗಂಟೆಯವರೆಗೆ ಈ ಆಸ್ಪತ್ರೆಗೆ ಭೇಟಿ ನೀಡಿಯೂ ಲಸಿಕೆಗಾಗಿ ನೋಂದಣಿ ಮಾಡಿಕೊಳ್ಳಬಹುದು.
ಇದನ್ನು ಓದು: ಸರ್ಕಾರಿ ಆಸ್ಪತ್ರೆಗಳಲ್ಲಿ ಕೋವಿಡ್ ಲಸಿಕೆ ಉಚಿತ, ಖಾಸಗಿ ಆಸ್ಪತ್ರೆಗಳಲ್ಲಿ 250ರೂ ಗೆ ದರ ನಿಗದಿ https://kannada.thebengalurulive.com/covid19-vaccine-is-free-in-government-hospitals-and-is-priced-at-rs-250-in-private-hospital/
ಇದನ್ನು ಓದು: ಕೋವಿಡ್-19 ಲಸಿಕೆ ಹಾಕಿಸಿಕೊಂಡ ಪ್ರಧಾನಿ https://kannada.thebengalurulive.com/prime-minister-narendra-modi-gets-covid-19-vaccinated/