ಹಾವೇರಿ:
ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಮತ್ತೆ ಎರಡು ವಾರಗಳ ಕಾಲ ರಾಜ್ಯದಲ್ಲಿನ ಲಾಕ್ಡೌನ್ ವಿಸ್ತರಣೆ ಮಾಡಿರುವುದರಿಂದ ಕೋವಿಡ್ ನಿಯಂತ್ರಣ ಮಾಡಲು ಸಹಕಾರಿಯಾಗುತ್ತದೆ ಎಂದು ಗೃಹ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದರು.
ಹಾವೇರಿಯಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲಾಕ್ಡೌನ್ ಆರಂಭವಾದಾಗಿನಿಂದ ಇಲ್ಲಿಯವರೆಗೆ ಪರಿಸ್ಥಿತಿಯನ್ನು ಗಮನಿಸಿದರೆ ಕೋವಿಡ್ ನಿಯಂತ್ರಣಕ್ಕೆ ಬಂದಿದೆ ಎಂದು ಅಭಿಪ್ರಾಯಪಟ್ಟರು.
ಲಾಕ್ಡೌನ್ ವಿಸ್ತರಣೆಯಾಗಿರುವುದರಿಂದ ಆಸ್ಪತ್ರೆಗಳನ್ನು ವ್ಯವಸ್ಥಿತವಾಗಿ ಸಜ್ಜುಗೊಳಿಸಲು ಸಾದ್ಯವಾಗುತ್ತದೆ. ಸೋಂಕಿತರನ್ನು ಸಂಪೂರ್ಣವಾಗಿ ಗುಣಮುಖರನ್ನಾಗಿ ಮಾಡಿ ಡಿಸ್ಚಾರ್ಜ್ ಮಾಡಲು ಅನುಕೂಲವಾಗುತ್ತದೆ. ಸಾವು ನೋವುಗಳ ಸಂಖ್ಯೆ ಕಡಿಮೆ ಮಾಡಲು ಸಾಧ್ಯ. ಅದರ ಜತೆ ಕೋವಿಡ್ ನಿಯಂತ್ರಣ ಮಾಡಲು ಈ ಕ್ರಮ ಸಹಕಾರಿಯಾಗಿದೆ ಎಂದು ಅವರು ಹೇಳಿದರು.
ಇದನ್ನೂ ಓದಿ: ಕರ್ನಾಟಕ ಕರ್ಫ್ಯೂ ಇನ್ನೂ 14 ದಿನ, ಜೂನ್ 7 ರವರೆಗೆ ಕಠಿಣ ನಿರ್ಬಂಧ ಜಾರಿ https://kannada.thebengalurulive.com/karnataka-curfew-cum-curbs-extended-till-june-7/