ಬೆಂಗಳೂರು:
ಜೂನ್ 21 ರಿಂದ ಪ್ರಾರಂಭವಾಗಬೇಕಿರುವ ಎಸ್.ಎಸ್.ಎಲ್.ಸಿ ಪರೀಕ್ಷೆಗಳನ್ನು ಮುಂದಿನ ಆದೇಶದವರೆಗೆ ಮುಂದೂಡಲಾಗಿದೆ ಎಂದು ಸಚಿವ ಸುರೇಶ್ ಕುಮಾರ್ ಪ್ರಕಟಿಸಿದ್ದಾರೆ.
ಹೆಚ್ಚುತ್ತಿರುವ ಕೊರೋನಾ ಪ್ರಕರಣಗಳು, ವಿದ್ಯಾರ್ಥಿ-ಪೋಷಕರ, ವಿವಿಧ ಶಾಲಾ ಸಂಘಟನೆಗಳ ಆತಂಕಗಳನ್ನು ಗಮನದಲ್ಲಿರಿಸಿ ಈ ನಿರ್ಣಯ ತೆಗೆದುಕೊಳ್ಳಲಾಗಿದೆ. ಕೋವಿಡ್19ರ ಎರಡನೇ ಅಲೆಯ ಪ್ರಸರಣ ಸಂಪೂರ್ಣ ತಹಬಂದಿಗೆ ಬಂದ ಸಂದರ್ಭದಲ್ಲಿ, ಸಾಕಷ್ಟು ಮುಂಚಿತವಾಗಿ ದಿನಾಂಕಗಳನ್ನು ಪ್ರಕಟಿಸಲಾಗುತ್ತದೆ ಎಂದು ಅವರು ಹೇಳಿದ್ದಾರೆ.
#BreakingNews#SSLC exams, Class 10 stand slated to start from June 21 stands postponed in Karnataka announces #EducationMinister #SureshKumar @nimmasuresh
— Atul Chaturvedi (@Atulchaturvedii) May 13, 2021
Revised dates will be announced much ahead of schedule.#Bangalore #Bengaluru #Karnataka #educationmatters #Education
ವಿದ್ಯಾರ್ಥಿಗಳು ವಿಚಲಿತರಾಗದೇ ಏಕಾಗ್ರತೆಯಿಂದ ಪರೀಕ್ಷೆಯ ಸಿದ್ಧತೆಯಲ್ಲಿ ತೊಡಗಿಸಿಕೊಳ್ಳಬೇಕು, ಪರೀಕ್ಷೆಯ ಕುರಿತಂತೆ ಯಾವುದೇ ಕಾರಣಕ್ಕೂ ಆತಂಕಕ್ಕೊಳಗುವ ಅವಶ್ಯಕತೆ ಇಲ್ಲ ಎಂದು ಅವರು ವಿದ್ಯಾರ್ಥಿಗಳಿಗೆ ಕರೆ ನೀಡಿದ್ದಾರೆ.