Home ಶಿಕ್ಷಣ ಎಸ್.ಎಸ್.ಎಲ್.ಸಿ ಪರೀಕ್ಷೆಗಳು ಮುಂದೂಡಿಕೆ: ಸುರೇಶ್ ಕುಮಾರ್

ಎಸ್.ಎಸ್.ಎಲ್.ಸಿ ಪರೀಕ್ಷೆಗಳು ಮುಂದೂಡಿಕೆ: ಸುರೇಶ್ ಕುಮಾರ್

81
0

ಬೆಂಗಳೂರು:

ಜೂನ್ 21 ರಿಂದ ಪ್ರಾರಂಭವಾಗಬೇಕಿರುವ ಎಸ್.ಎಸ್‌.ಎಲ್.ಸಿ ಪರೀಕ್ಷೆಗಳನ್ನು ಮುಂದಿನ ಆದೇಶದವರೆಗೆ ಮುಂದೂಡಲಾಗಿದೆ ಎಂದು ಸಚಿವ ಸುರೇಶ್ ಕುಮಾರ್ ಪ್ರಕಟಿಸಿದ್ದಾರೆ.

ಹೆಚ್ಚುತ್ತಿರುವ ಕೊರೋನಾ ಪ್ರಕರಣಗಳು, ವಿದ್ಯಾರ್ಥಿ-ಪೋಷಕರ, ವಿವಿಧ ಶಾಲಾ ಸಂಘಟನೆಗಳ ಆತಂಕಗಳನ್ನು ಗಮನದಲ್ಲಿರಿಸಿ ಈ ನಿರ್ಣಯ ತೆಗೆದುಕೊಳ್ಳಲಾಗಿದೆ. ಕೋವಿಡ್19ರ ಎರಡನೇ‌ ಅಲೆಯ ಪ್ರಸರಣ ಸಂಪೂರ್ಣ ತಹಬಂದಿಗೆ ಬಂದ ಸಂದರ್ಭದಲ್ಲಿ, ಸಾಕಷ್ಟು ಮುಂಚಿತವಾಗಿ ದಿನಾಂಕಗಳನ್ನು ಪ್ರಕಟಿಸಲಾಗುತ್ತದೆ ಎಂದು ಅವರು ಹೇಳಿದ್ದಾರೆ.

Covid effect Karnataka SSLC exam postponed

ವಿದ್ಯಾರ್ಥಿಗಳು ವಿಚಲಿತರಾಗದೇ ಏಕಾಗ್ರತೆಯಿಂದ‌ ಪರೀಕ್ಷೆಯ ಸಿದ್ಧತೆಯಲ್ಲಿ ತೊಡಗಿಸಿಕೊಳ್ಳಬೇಕು, ಪರೀಕ್ಷೆಯ ಕುರಿತಂತೆ ಯಾವುದೇ ಕಾರಣಕ್ಕೂ ಆತಂಕಕ್ಕೊಳಗುವ ಅವಶ್ಯಕತೆ ಇಲ್ಲ ಎಂದು ಅವರು ವಿದ್ಯಾರ್ಥಿಗಳಿಗೆ ಕರೆ ನೀಡಿದ್ದಾರೆ.

LEAVE A REPLY

Please enter your comment!
Please enter your name here