Home ಆರೋಗ್ಯ Covid test is mandatory for those with ‘high risk’ symptoms: Minister Dinesh...

Covid test is mandatory for those with ‘high risk’ symptoms: Minister Dinesh Gundurao | ‘ಹೈ ರಿಸ್ಕ್ʼ ರೋಗಲಕ್ಷಣ ಇರುವವರಿಗೆ ಕೋವಿಡ್ ಟೆಸ್ಟ್ ಕಡ್ಡಾಯ: ಸಚಿವ ದಿನೇಶ್ ಗುಂಡೂರಾವ್

14
0
Covid test is mandatory for those with 'high risk' symptoms: Minister Dinesh Gundurao

ಬೆಂಗಳೂರು:

ಕೋವಿಡ್ ಪಾಸಿಟಿವ್ ಇರುವವರ ಸಂಪರ್ಕದಲ್ಲಿದ್ದ ಹೈ ರಿಸ್ಕ್ ರೋಗಲಕ್ಷಣ ಹೊಂದಿರುವವರಿಗೆ, ಕಡ್ಡಾಯವಾಗಿ ಕೋವಿಡ್ ಟೆಸ್ಟ್ ನಡೆಸಲು ಸಂಪುಟ ಉಪ ಸಮಿತಿ ಸಭೆಯಲ್ಲಿ ತೀರ್ಮಾನಿಸಲಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದರು.

ಬುಧವಾರ ವಿಧಾನಸೌಧದಲ್ಲಿ ತಮ್ಮ ಅಧ್ಯಕ್ಷತೆಯಲ್ಲಿ ನಡೆದ ಸಂಪುಟ ಉಪ ಸಮಿತಿಯ ಎರಡನೆ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೇಶದಲ್ಲಿಯೆ ಕರ್ನಾಟಕದಲ್ಲಿ ಹೆಚ್ಚು ಕೋವಿಡ್ ಟೆಸ್ಟ್ ಗಳನ್ನು ನಡೆಸಲಾಗುತ್ತಿದೆ. ಕೋವಿಡ್ ಇಳಿಮುಖ ಕಾಣುವವರೆಗೂ ಹೆಚ್ಚಿನ ಸಂಖ್ಯೆಯಲ್ಲಿ ಕೋವಿಡ್ ಟೆಸ್ಟಿಂಗ್ ಮುಂದುವರಿಸುವುದಾಗಿ ಹೇಳಿದರು.

ಕೋವಿಡ್ ಪಾಸಿಟಿವ್ ಪ್ರಕರಣಗಳು ಹೆಚ್ಚು ಬರುತ್ತೆ ಎನ್ನುವ ಕಾರಣಕ್ಕೆ ಟೆಸ್ಟಿಂಗ್ ಕಡಿಮೆ ಮಾಡಿ ಕೋವಿಡ್ ಪಾಸಿಟಿವ್ ಪ್ರಕರಣಗಳನ್ನ ಮುಚ್ವಿಡುವ ಕೆಲಸವನ್ನ ಸರಕಾರ ಮಾಡುವುದಿಲ್ಲ. ಹೆಚ್ಚಿನ ಸಂಖ್ಯೆಯಲ್ಲಿಯೇ ಟೆಸ್ಟಿಂಗ್ ನಡೆಸಿ, ಅಗತ್ಯ ಚಿಕಿತ್ಸೆ ಕೊಡುವುದು ಮುಖ್ಯ. ಈ ನಿಟ್ಟಿನಲ್ಲಿ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ದಿನೇಶ್ ಗುಂಡೂರಾವ್ ತಿಳಿಸಿದರು.

ಪ್ರಸ್ತುತ ಐ.ಸಿ.ಯು ನಲ್ಲಿ 19 ಕೋವಿಡ್ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದು, ಇವರ ಮೇಲೆ ಹೆಚ್ವಿನ ನಿಗಾ ಇಡಲು ಸೂಚಿಸಲಾಗಿದೆ. ಅಲ್ಲದೆ ಕೋವಿಡ್ ಪಾಸಿಟಿವ್ ಬಂದವರ ಸಂಪರ್ಕದಲ್ಲಿದ್ದವರಲ್ಲಿ ಹೈ ರಿಸ್ಕ್ ರೋಗಲಕ್ಷಣ ಕಂಡುಬಂದರೆ ಕಡ್ಡಾಯವಾಗಿ ಕೋವಿಡ್ ಟೆಸ್ಟಿಂಗ್ ಮಾಡುವಂತೆ ತಿಳಿಸಲಾಗಿದೆ ಎಂದು ಅವರು ಹೇಳಿದರು.

ಕೋವಿಡ್ ಪಾಸಿಟಿವ್ ಬಂದವರಲ್ಲಿ 26 ಜನರು ಸಾವನ್ನಪ್ಪಿದ್ದಾರೆ. ಈ ಬಗ್ಗೆ ಡೆತ್ ಆಡಿಟ್ ಮಾಡಲು ಸೂಚಿಸಲಾಗಿತ್ತು. 26 ಪ್ರಕರಣಗಳಲ್ಲಿ 21 ಜನರ ಡೆತ್ ಆಡಿಟ್ ನಡೆಸಲಾಗಿದ್ದು, ನೈಜವಾಗಿ ಕೋವಿಡ್ ಕಾರಣದಿಂದ 2 ಜನ ಮಾತ್ರ ಸಾವಿಗಿಡಾಗಿದ್ದಾರೆ. ಉಳಿದವರು ಇತರ ಕಾಯಿಲೆಗಳಿಂದ ಬಳಲುತ್ತಿದ್ದರು ಎಂದು ತಾಂತ್ರಿಕ ಸಲಹಾ ಸಮಿತಿ ತಿಳಿಸಿದೆ. ಆದರೆ ಇವರಿಗೆ ಕೋವಿಡ್ ಪಾಸಿಟಿವ್ ಬಂದಿತ್ತು. ಜನರು ಆತಂಕಕ್ಕೆ ಈಡಾಗುವ ಅಗತ್ಯವಿಲ್ಲ. ಎಲ್ಲ ರೀತಿಯ ಅಗತ್ಯ ಕ್ರಮಗಳನ್ನ ಕೈಗೊಳ್ಳಲಾಗಿದೆ ಎಂದು ದಿನೇಶ್ ಗುಂಡೂರಾವ್ ಹೇಳಿದರು.

ಸಭೆಯಲ್ಲಿ ಸಮಾಜ ಕಲ್ಯಾಣ ಸಚಿವ ಡಾ.ಎಚ್.ಸಿ.ಮಹದೇವಪ್ಪ, ಕೋವಿಡ್ ತಾಂತ್ರಿಕ ಸಲಹಾ ಸಮಿತಿ ಅಧ್ಯಕ್ಷ ಡಾ.ರವಿ, ಆರೋಗ್ಯ ಇಲಾಖೆ ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆಯ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here