Home ಆರೋಗ್ಯ ಕೋವಿಡ್ : ಎಲ್ಲ ಪ್ರಯಾಣಿಕರ ತಪಾಸಣೆ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಕೋವಿಡ್ : ಎಲ್ಲ ಪ್ರಯಾಣಿಕರ ತಪಾಸಣೆ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

106
0

ಹುಬ್ಬಳ್ಳಿ :

ಕೋವಿಡ್ ಹಿನ್ನೆಲೆಯಲ್ಲಿ ವಿಮಾನ ನಿಲ್ದಾಣಕ್ಕೆ ಆಗಮಿಸುವ ಎಲ್ಲ ಅಂತರರಾಷ್ಟ್ರೀಯ ಪ್ರಯಾಣಿಕರ ತಪಾಸಣೆ ಕೈಗೊಳ್ಳಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದರು.

ಅವರು ಇಂದು ಹುಬ್ಬಳ್ಳಿಯಲ್ಲಿ ಮಾಧ್ಯಮದವರೊಂದಿಗೆ ಮಾತಮಾಡುತ್ತಿದ್ದರು.

ಸುಮಾರು 2500 ಅಂತರರಾಷ್ಟ್ರೀಯ ಪ್ರಯಾಣಿಕರು ಬೆಂಗಳೂರು ವಿಮಾನ ನಿಲ್ದಾಣಕ್ಕೆ ಪ್ರತಿನಿತ್ಯ ಆಗಮಿಸುತ್ತಾರೆ. ಕೆಲವರು ಮಂಗಳೂರು ವಿಮಾನ ನಿಲ್ದಾಣಕ್ಕೂ ಬರುತ್ತಾರೆ. ಕಳೆದ ಬಾರಿಯ ಅನುಭವದ ಮೇರೆಗೆ ಈಗಿನಿಂದಲೇ ಕಠಿಣ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ ಎಂದರು.

ಅನಗತ್ಯ ಆತಂಕ ಬೇಡ ಜನರು ಕೋವಿಡ್ ಹೊಸ ತಳಿಯ ಕುರಿತು ಅನಗತ್ಯ ವಾಗಿ ಆತಂಕಕ್ಕೆ ಒಳಗಾಗಬಾರದು. ಜನರು ಈಗ ತಾನೇ ಆರ್ಥಿಕವಾಗಿ, ಸಾಮಾಜಿಕ ವಾಗಿ ಸುಧಾರಿಸಿಕೊಂಡು ಕೆಲಸ ಮಾಡುತ್ತಿದ್ದಾರೆ. ಲಾಕ್ ಡೌನ್ ಪ್ರಸ್ತಾವ ನಮ್ಮ ಮುಂದಿಲ್ಲ ಎಂದು ಸ್ಪಷ್ಟಪಡಿಸಿದರು.

ಇದನ್ನೂ ಓದಿ: ಕೋವಿಡ್ ಲಸಿಕೆಯ ಬೂಸ್ಟರ್ ಡೋಸ್ ಬಗ್ಗೆ ಚರ್ಚಿಸಲು ಬೊಮ್ಮಾಯಿ ಅವರಿಂದ ನಾಳೆ ಕೇಂದ್ರ ಆರೋಗ್ಯ ಸಚಿವರ ಭೇಟಿ

Also Read: Karnataka CM to meet Union Health Minister to discuss administration of booster dose of COVID vaccine

LEAVE A REPLY

Please enter your comment!
Please enter your name here