Home ಆರೋಗ್ಯ ಬೆಂಗಳೂರಿನಲ್ಲಿ ಕೋವಿಡ್ ನಿಯಂತ್ರಣಕ್ಕೆ ಕೆಲ ಬಿಗಿ ಕ್ರಮ ಅವಶ್ಯ : ಸುಧಾಕರ್

ಬೆಂಗಳೂರಿನಲ್ಲಿ ಕೋವಿಡ್ ನಿಯಂತ್ರಣಕ್ಕೆ ಕೆಲ ಬಿಗಿ ಕ್ರಮ ಅವಶ್ಯ : ಸುಧಾಕರ್

61
0

ಕರ್ನಾಟಕದಲ್ಲಿ ಆಮ್ಲಜನಕ ಕೊರತೆ ಇಲ್ಲ ಎಂದು ಹೇಳಿದ ಸಚಿವ

ಬೆಂಗಳೂರು:

ರಾಜ್ಯದಲ್ಲಿ ಆಮ್ಲಜನಕ (Oxygen) ಕೊರತೆ ಇಲ್ಲ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಹೇಳಿದ್ದಾರೆ.

ಆಮ್ಲಜನಕ ಕೊರತೆ ಸಂಬಂಧಿಸಿದಂತೆ ವಲಯವಾರು ಅಧಿಕಾರಿಗಳನ್ನು ನಿಯೋಜಿಸಲಾಗಿದೆ. ಈಗ ಇರುವ 800 ಮೆಟ್ರಿಕ್ ಟನ್ ಆಮ್ಲಜನಕ ಜೊತೆಗೆ 300 ಟನ್ ಗೆ ಕೇಂದ್ರ ಸರ್ಕಾರ ಅನುಮೋದನೆ ನೀಡಿದೆ. ಅಗತ್ಯವಿರುವಷ್ಟು ಆಮ್ಲಜನಕ ನೀಡಲಾಗುವುದು ಎಂದು ಕೈಗಾರಿಕಾ ವಲಯದವರು ಕೂಡ ಹೇಳಿದ್ದಾರೆ ಎಂದರು.

ಗೃಹಸಚಿವ ಬಸವರಾಜ ಬೊಮ್ಮಾಯಿ ಹಾಗೂ ಕಂದಾಯ ಸಚಿವ ಆರ್.ಅಶೋಕ್ ಅವರು ಅನೌಪಚಾರಿಕವಾಗಿ ನಾಳೆಯ ಸಭೆಗೆ ಪೂರ್ವಭಾವಿಯಾಗಿ ಚರ್ಚೆ ನಡೆಸಿದ್ದಾರೆ. ಬೆಂಗಳೂರಿನ ಕೋವಿಡ್ ಸ್ಥಿತಿಗತಿ ಬಗ್ಗೆ ವಿವರ ಪಡೆದಿದ್ದಾರೆ ಎಂದು ತಿಳಿಸಿದರು.

ಬೆಂಗಳೂರಿನಲ್ಲಿ ಕೋವಿಡ್ ನಿಯಂತ್ರಣಕ್ಕೆ ಕೆಲ ಬಿಗಿ ಕ್ರಮ ಕೈಗೊಳ್ಳುವುದು ಅವಶ್ಯ. ನಾಳೆಯ ಸರ್ವಪಕ್ಷ ಸಭೆ ಬಳಿಕ ಎಲ್ಲವೂ ನಿರ್ಧಾರವಾಗಲಿದೆ. ಮುಖ್ಯಮಂತ್ರಿಗಳ ನೇತೃತ್ವದಲ್ಲಿ ಚರ್ಚೆ ನಡೆದ ಬಳಿಕ ಅಂತಿಮ ನಿರ್ಧಾರವನ್ನು ಸರ್ಕಾರ ಕೈಗೊಳ್ಳಲಿದೆ ಎಂದು ತಿಳಿಸಿದರು.

ಎರಡನೇ ಅಲೆ ವೇಗವಾಗಿದ್ದು, ಜನರು ಮುನ್ನೆಚ್ಚರಿಕೆ ಕ್ರಮ ವಹಿಸಲೇಬೇಕು. ವಾಸ್ತವ ಅರ್ಥ ಮಾಡಿಕೊಳ್ಳಬೇಕು, ನಿರ್ಲಕ್ಷ್ಯ ತೋರಬಾರದು ಹೇಳಿದ ಸಚಿವರು: “ಕೊರೊನಾ ಪ್ರಕರಣ ಸಂಖ್ಯೆ ನೋಡಿಕೊಂಡು ಹಾಸಿಗೆ ಎಷ್ಟು ಬೇಕೆಂದು ನಿರ್ಧರಿಸಲಾಗುತ್ತದೆ. ಜನರ ಕಷ್ಟದಲ್ಲಿ, ಸರ್ಕಾರದ ಹೋರಾಟದಲ್ಲಿ ಖಾಸಗಿ ಆಸ್ಪತ್ರೆಗಳು ಭಾಗಿಯಾಗಬೇಕು.”

LEAVE A REPLY

Please enter your comment!
Please enter your name here