Home ಬೆಂಗಳೂರು ನಗರ ಕರ್ನಾಟಕದಲ್ಲಿ ಕೊರೋನಾಗೆ 344 ಬಲಿ, ಬೆಂಗಳೂರಿನಲ್ಲಿ 15,191 ಮಂದಿಗೆ ಪಾಸಿಟಿವ್

ಕರ್ನಾಟಕದಲ್ಲಿ ಕೊರೋನಾಗೆ 344 ಬಲಿ, ಬೆಂಗಳೂರಿನಲ್ಲಿ 15,191 ಮಂದಿಗೆ ಪಾಸಿಟಿವ್

54
0

ಬೆಂಗಳೂರು:

ಕರ್ನಾಟಕದಲ್ಲಿ ಇಂದು ಒಂದೇ ದಿನ ಬರೋಬ್ಬರಿ 344 ಮಂದಿ ಕೊರೋನಾ ಮಹಾಮಾರಿಗೆ ಬಲಿಯಾಗಿದ್ದಾರೆ. ಇದರೊಂದಿಗೆ ಸಾವಿನ ಸಂಖ್ಯೆ 20712ಕ್ಕೆ ಏರಿಕೆಯಾಗಿದೆ.

ಬೆಂಗಳೂರಿನಲ್ಲಿ ಇಂದು 15,191 ಮಂದಿಗೆ ಸೋಂಕು ದೃಢಪಟ್ಟಿದ್ದು, ಇದರೊಂದಿಗೆ ಸೋಂಕಿತರ ಸಂಖ್ಯೆ 10,14,996ಕ್ಕೆ ಏರಿಕೆಯಾಗಿದೆ. ಇನ್ನು ನಗರದಲ್ಲಿ ಸೋಂಕಿಗೆ 161 ಮಂದಿ ಬಲಿಯಾಗಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

ಇನ್ನು ಕಳೆದ 24 ಗಂಟೆಯಲ್ಲಿ ರಾಜ್ಯದಲ್ಲಿ 35,297 ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ. ಇದರೊಂದಿಗೆ ಸೋಂಕಿತರ ಸಂಖ್ಯೆ 20,88,488ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

LEAVE A REPLY

Please enter your comment!
Please enter your name here