Home ಆರೋಗ್ಯ ಸೋಮವಾರದಿಂದ ಹೆಚ್ಚಿನ ಕೇಂದ್ರಗಳಲ್ಲಿ ಲಸಿಕೆ ಅಭಿಯಾನ: ಸುಧಾಕರ್

ಸೋಮವಾರದಿಂದ ಹೆಚ್ಚಿನ ಕೇಂದ್ರಗಳಲ್ಲಿ ಲಸಿಕೆ ಅಭಿಯಾನ: ಸುಧಾಕರ್

38
0
Advertisement
bengaluru

ಯಾರಿಗೂ ಅಡ್ಡ ಪರಿಣಾಮವಾಗಿಲ್ಲ

ಬೆಂಗಳೂರು/ಚಿಕ್ಕಬಳ್ಳಾಪುರ:

ಸೋಮವಾರದಿಂದ ರಾಜ್ಯಾದ್ಯಂತ ಹೆಚ್ಚಿನ ಕೇಂದ್ರಗಳಲ್ಲಿ ಲಸಿಕೆ ಅಭಿಯಾನ ನಡೆಯಲಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು.

IMG 20210117 WA0031

ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಲಸಿಕೆ ಅಭಿಯಾನ ಪರಿಶೀಲಿಸಿದ ಬಳಿಕ ಮಾತನಾಡಿದ ಅವರು, ರಾಜ್ಯದಲ್ಲಿ ಮೊದಲ ದಿನವೇ 62% ಮಂದಿಗೆ ಲಸಿಕೆ ನೀಡಿರುವುದು ಆಶಾದಾಯಕವಾಗಿದೆ. ಲಸಿಕೆ ಪಡೆದವರಲ್ಲಿ ಯಾರಿಗೂ ಅಡ್ಡ ಪರಿಣಾಮ ಉಂಟಾಗಿಲ್ಲ. ಡಾ.ಸುದರ್ಶನ್ ಬಲ್ಲಾಳ್ ಅವರು ಲಸಿಕೆ ಪಡೆದಿದ್ದು, ಅವರಿಗೆ ಯಾವುದೇ ಸಮಸ್ಯೆಯಾಗಿಲ್ಲ. ಹೀಗಾಗಿ ಜನರು ಲಸಿಕೆಯ ಮೇಲೆ ವಿಶ್ವಾಸವಿಡಬೇಕು. ಲಸಿಕೆ ಪಡೆದರೂ ಕೋವಿಡ್ ಸುರಕ್ಷತಾ ಕ್ರಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ಎರಡನೇ ಡೋಸ್ ಪಡೆದ 10 ದಿನಗಳ ಬಳಿಕ ರೋಗ ನಿರೋಧಕ ಶಕ್ತಿ ಬರುತ್ತದೆ. ಅಲ್ಲಿಯವರೆಗೂ ಸುರಕ್ಷತಾ ಕ್ರಮ ಪಾಲಿಸಬೇಕು ಎಂದರು.

IMG 20210117 WA0033

ಮಣಿಪಾಲ್ ಆಸ್ಪತ್ರೆಯಲ್ಲಿ 4,200 ಸಿಬ್ಬಂದಿಗೆ ಲಸಿಕೆ ನೀಡಲಾಗುತ್ತಿದೆ. ಚುನಾವಣೆಯಲ್ಲಿ ಮಾಡುವಂತೆ ಬೂತ್ ಗಳನ್ನು ರೂಪಿಸಿ ವ್ಯವಸ್ಥಿತವಾಗಿ ಲಸಿಕೆ ನೀಡಲಾಗುತ್ತಿದೆ. ಶೇ.70 ರಷ್ಟು ಮಂದಿಗೆ ಲಸಿಕೆ ನೀಡಲು ಸಾಧ್ಯವಿದೆ ಎಂದು ಆಸ್ಪತ್ರೆಯವರು ತಿಳಿಸಿದ್ದಾರೆ. ಕಾರಣಾಂತರಗಳಿಂದ ಲಸಿಕೆ ಪಡೆಯದವರು ಮತ್ತೆ ಲಸಿಕೆ ಪಡೆಯಲು ಅವಕಾಶವಿದೆ ಎಂದರು.

bengaluru bengaluru

bengaluru

LEAVE A REPLY

Please enter your comment!
Please enter your name here