Home ಆರೋಗ್ಯ ಸರ್ಕಾರಿ ಆಸ್ಪತ್ರೆಗಳಲ್ಲಿ ಕೋವಿಡ್ ಲಸಿಕೆ ಉಚಿತ, ಖಾಸಗಿ ಆಸ್ಪತ್ರೆಗಳಲ್ಲಿ 250ರೂ ಗೆ ದರ ನಿಗದಿ

ಸರ್ಕಾರಿ ಆಸ್ಪತ್ರೆಗಳಲ್ಲಿ ಕೋವಿಡ್ ಲಸಿಕೆ ಉಚಿತ, ಖಾಸಗಿ ಆಸ್ಪತ್ರೆಗಳಲ್ಲಿ 250ರೂ ಗೆ ದರ ನಿಗದಿ

183
0
ಫೈಲ್ ಚಿತ್ರ
bengaluru

ಮಾರ್ಚ್ 1 ರಿಂದ 60 ವರ್ಷಕ್ಕಿಂತ ಮೇಲ್ಪಟ್ಟವರಿಗೆ ಮತ್ತು 45 ವರ್ಷಕ್ಕಿಂತ ಮೇಲ್ಪಟ್ಟ ಇತರೆ ಅನಾರೋಗ್ಯದಿಂದ ಬಳಲುತ್ತಿರುವವರಿಗೆ ಲಸಿಕೆ ಹಾಕಲು ಸಿದ್ಧತೆ.

ನವದೆಹಲಿ:

ಮಾರಕ ಕೊರೋನಾ ವೈರಸ್ ನಿಯಂತ್ರಣದ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಮಹತ್ವದ ಹೆಜ್ಜೆಯನ್ನಿರಿಸಿದ್ದು, ಸರ್ಕಾರಿ ಆಸ್ಪತ್ರೆಗಳಲ್ಲಿ ಲಸಿಕೆ ಪಡೆಯಲಿಚ್ಛಿಸುವವರಿಗೆ ಉಚಿತವಾಗಿ ಲಸಿಕೆ ನೀಡುವುದಾಗಿ ಘೋಷಿಸಲಾಗಿದೆ.

ಖಾಸಗಿ ಆಸ್ಪತ್ರೆಗಳಲ್ಲಿ ಪಡೆಯಲಿಚ್ಛಿಸುವವರು ಪ್ರತೀ ಡೋಸ್ ಗೆ 250 ರೂ ನೀಡಿ ಲಸಿಕೆ ಪಡೆಯಬೇಕಾಗಿದೆ. ಮೂಲಗಳ ಪ್ರಕಾರ ಲಸಿಕೆ ದರ 150 ರೂ ಇದ್ದು 100 ರೂ ಸೇವಾ ಶುಲ್ಕ ಸೇರಿ ಒಟ್ಟು 250 ರೂಗಳನ್ನು ದರವಾಗಿ ಕೇಂದ್ರ ಸರ್ಕಾರ ನಿಗದಿ ಮಾಡಿದೆ. ಈ ದರ ಸರ್ಕಾರದ ಮುಂದಿನ ಆದೇಶದವರೆಗೂ ಜಾರಿಯಲ್ಲಿರುತ್ತದೆ ಎಂದು ಹೇಳಲಾಗಿದೆ.

ಭಾರತವು 60 ವರ್ಷಕ್ಕಿಂತ ಮೇಲ್ಪಟ್ಟವರಿಗೆ ಮತ್ತು 45 ವರ್ಷಕ್ಕಿಂತ ಮೇಲ್ಪಟ್ಟ ಇತರೆ ಅನಾರೋಗ್ಯದಿಂದ ಬಳಲುತ್ತಿರುವವರಿಗೆ ಮಾರ್ಚ್ 1 ರಿಂದ ಲಸಿಕೆ ಹಾಕಲು ಸಿದ್ಧತೆ ನಡೆಸಿದೆ. ಅದರಂತೆ ದೇಶದ ಸುಮಾರು 27 ಕೋಟಿ ಜನರಿಗೆ ಕೋವಿಡ್‌ ಲಸಿಕೆ ನೀಡುವ, ಜಗತ್ತಿನ ಅತಿ ದೊಡ್ಡ ಲಸಿಕಾ ಅಭಿಯಾನ ಆರಂಭಿಸಲು ಕೇಂದ್ರ ಸರ್ಕಾರ ಸಿದ್ಧತೆ ಮಾಡಿಕೊಳ್ಳುತ್ತಿದೆ.

bengaluru
Screenshot 176
Screenshot 177
Screenshot 178
Screenshot 179
Screenshot 180
Screenshot 181
Screenshot 182
Screenshot 183
Screenshot 184
Screenshot 185
Screenshot 186
Screenshot 187
bengaluru

LEAVE A REPLY

Please enter your comment!
Please enter your name here