Home ಬೆಂಗಳೂರು ನಗರ ಬೆಂಗಳೂರು ಮೆಟ್ರೋ ಹಳಿಯಲ್ಲಿ ಬಿರುಕು, ತಡವಾಗಿ ವಿಷಯ ಬಹಿರಂಗ!

ಬೆಂಗಳೂರು ಮೆಟ್ರೋ ಹಳಿಯಲ್ಲಿ ಬಿರುಕು, ತಡವಾಗಿ ವಿಷಯ ಬಹಿರಂಗ!

29
0
metro rail crack
ಚಿತ್ರ ಮೂಲ: https://kannada.asianetnews.com/karnataka-districts/bengaluru-namma-metro-track-crack-in-mysore-road-major-disaster-missed-sat-rpp55l
bengaluru

ಬೆಂಗಳೂರು:

ಬೆಂಗಳೂರಿನ ನಮ್ಮ ಮೆಟ್ರೋ ರೈಲು ಮಾರ್ಗದಲ್ಲಿ ಹಳಿ ಬಿರುಕು ಬಿಟ್ಟ ವಿಚಾರ ತಡವಾಗಿ ಬೆಳಕಿಗೆ ಬಂದಿದೆ.

ಮೆಜೆಸ್ಟಿಕ್‌ನಿಂದ ಕೆಂಗೇರಿ ಕಡೆಗೆ ಸಾಗುವ ನೇರಳೆ ಮಾರ್ಗದ ಮೈಸೂರು ರಸ್ತೆಯಲ್ಲಿ ಹಳಿಯಲ್ಲಿ ಬಿರುಕು ಕಾಣಿಸಿಕೊಂಡಿದೆ. ಪಟ್ಟಣಗೆರೆ ಮೆಟ್ರೋ ನಿಲ್ದಾಣದ ಕೂಗಳತೆ ದೂರದ ಹಳಿಯಲ್ಲಿ ಬಿರುಕು ಬಿಟ್ಟಿರುವುದು ಪತ್ತೆಯಾಗಿದೆ.

ಹಳಿ ಬಿರುಕು ಕಾಣಿಸಿಕೊಂಡಿದ್ದನ್ನು ಮೆಟ್ರೋ ಪೈಲೆಟ್ ಹಾಗೂ ಕೆಳಮಟ್ಟದ ಸಿಬ್ಬಂದಿ ಗಮನಿಸಿದ್ದಾರೆ. ಮೆಟ್ರೋ ಹಳಿ ಬಿರುಕು ಕಾಣಿಸಿಕೊಂಡ ಹಿನ್ನೆಲೆ ಕೂಡಲೇ ಎಚ್ಚೆತ್ತುಕೊಂಡ ಬಿಎಂಆರ್‌ಸಿಎಲ್‌ ಸಿಬ್ಬಂದಿ ಟ್ರ್ಯಾಕ್‌ ಅನ್ನು ದುರಸ್ತಿ ಮಾಡಿದ್ದಾರೆ. ಈ ವೇಳೆ ಇಡೀ ದಿನ ಮತ್ತೊಂದು ಟ್ರ್ಯಾಕ್ ನಲ್ಲಿ ಮೆಟ್ರೋ ಓಡಾಟ ಮಾಡುವಂತೆ ವ್ಯವಸ್ಥೆ ಮಾಡಲಾಗಿತ್ತು. ಟ್ರ್ಯಾಕ್ ಸರಿಪಡಿಸಿದ ನಂತರ ಎರಡು ಹಳಿಯಲ್ಲಿ‌ ಎಂದಿನಂತೆ ಮೆಟ್ರೋ ರೈಲು ಆಪರೇಷನ್‌ ಮುಂದುವರೆಸಲಾಗಿದೆ.

LEAVE A REPLY

Please enter your comment!
Please enter your name here