Creation of fake WhatsApp account in the name of Bangalore District Collector: Case registered |ಬೆಂಗಳೂರು ಜಿಲ್ಲಾಧಿಕಾರಿ ಹೆಸರಿನಲ್ಲಿ ನಕಲಿ ವಾಟ್ಸ್ಆ್ಯಪ್ ಖಾತೆ ಸೃಷ್ಟಿ: ಪ್ರಕರಣ ದಾಖಲು
ಬೆಂಗಳೂರು:
ರಾಜಧಾನಿ ಬೆಂಗಳೂರು ನಗರ ಜಿಲ್ಲೆಯ ಜಿಲ್ಲಾಧಿಕಾರಿ ಕೆ.ಎ.ದಯಾನಂದ್ ಅವರ ಪೊಟೋ ಬಳಸಿಕೊಂಡು ಅವರ ಹೆಸರಿನಲ್ಲಿ ದುಷ್ಕರ್ಮಿಗಳು ನಕಲಿ ವಾಟ್ಸ್ಆ್ಯಪ್ ಖಾತೆ ಸೃಷ್ಠಿಸಿರುವ ಬಗ್ಗೆ ಸಂಬಂಧ ಕೇಂದ್ರ ವಿಭಾಗದ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಜಿಲ್ಲಾಧಿಕಾರಿ ಕೆ.ಎ.ದಯಾನಂದ್ ಅವರು ನೀಡಿದ ದೂರಿನನ್ವಯ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿ ಪತ್ತೆಗಾಗಿ ಶೋಧ ಕೈಗೊಂಡಿರುವುದಾಗಿ ತಿಳಿಸಿದ್ದಾರೆ.
ನಕಲಿ ವಾಟ್ಸ್ಆ್ಯಪ್ ಖಾತೆ ಸೃಷ್ಠಿಸಿರುವ ಆರೋಪಿಯು ಜಿಲ್ಲಾ ವ್ಯಾಪ್ತಿಯ ಹಲವು ಇಲಾಖೆಯ ಅಧಿಕಾರಿಗಳಿಗೆ ಹಣ ನೀಡುವಂತೆ ಸಂದೇಶ ಕಳುಹಿಸಿದ್ದಾನೆ. ತುರ್ತು ಕಾರ್ಯಕ್ಕೆ ಹಣ ಬೇಕಿದೆ ತಕ್ಷಣ ಕಳುಹಿಸಿ ಎಂದು ಸಂದೇಶ ರವಾನಿಸಿರುವುದನ್ನು ಕಂಡ ಅಧಿಕಾರಿಗಳು, ಅನುಮಾನಗೊಂಡು ಜಿಲ್ಲಾಧಿಕಾರಿಗಳ ಗಮನಕ್ಕೆ ತಂದಿದ್ದಾರೆ ಎಂದು ಗೊತ್ತಾಗಿದೆ.
