Home ಅಪರಾಧ ಕ್ರಿಕೆಟ್ ಬೆಟ್ಟಿಂಗ್; ಆರೋಪಿಯ ಬಂಧನ, 4.5 ಲಕ್ಷ ರೂ.ನಗದು ವಶ

ಕ್ರಿಕೆಟ್ ಬೆಟ್ಟಿಂಗ್; ಆರೋಪಿಯ ಬಂಧನ, 4.5 ಲಕ್ಷ ರೂ.ನಗದು ವಶ

29
0

ಬೆಂಗಳೂರು:

ಕ್ರಿಕೆಟ್ ಬೆಟ್ಟಿಂಗ್ ಜೂಜಾಟದಲ್ಲಿ ತೊಡಗಿದ್ದ ಆರೋಪಿಯೊಬ್ಬನನ್ನು ಬಂಧಿಸಿರುವ ಸಿಸಿಬಿ ಪೊಲೀಸರು, 4.5 ಲಕ್ಷ ರೂ.ನಗದು ಮತ್ತು 1 ಮೊಬೈಲ್ ಫೋನ್ ವಶಪಡಿಸಿಕೊಂಡಿದ್ದಾರೆ.

ಭುವನೇಶ್ವರಿ ನಗರ, ಚಲುವಪ್ಪ ಗಾರ್ಡನ್ 4ನೇ ಕ್ರಾಸ್ ನಿವಾಸಿ ಪ್ರಭು (33) ಬಂಧಿತ ಆರೋಪಿ.
ಈತನಿಂದ ಕ್ರಿಕೆಟ್ ಬೆಟ್ಟಿಂಗ್ ಜೂಜಾಟಕ್ಕೆ ಸಂಬಂಧಿಸಿ 4,50,000 ರೂ.ನಗದು, 1 ಮೊಬೈಲ್ ಫೋನ್ ವಶಪಡಿಸಿಕೊಂಡು, ಆರೋಪಿಯ ವಿರುದ್ಧ ಕೆ.ಪಿ.ಅಗ್ರಹಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಶ್ರೀಲಂಕಾದಲ್ಲಿ ನಡೆಯುತ್ತಿರುವ ಕ್ರಿಕೆಟ್ ಪಂದ್ಯಾವಳಿಗೆ ಸಂಬಂಧಪಟ್ಟಂತೆ ಡಿಸೆಂಬರ್ 8ರಂದು ಆಸ್ಟ್ರೇಲಿಯಾ-ಭಾರತ ತಂಡಗಳ ನಡುವಿನ ಕ್ರಿಕೆಟ್ ಪಂದ್ಯಕ್ಕೆ ಸಂಬಂಧಪಟ್ಟಂತೆ ತಂಡಗಳ ಸೋಲು-ಗೆಲುವಿನ ಬಗ್ಗೆ ಸಾರ್ವಜನಿಕರಿಂದ LORDSEXH.COM ಎಂಬ ಮೊಬೈಲ್ ಆಪ್, ವೆಬ್ ಸೈಟ್ ಮೂಲಕ ಬೆಟ್ಟಿಂಗ್ ಕಟ್ಟಿಸಿಕೊಂಡು ಕ್ರಿಕೆಟ್ ಬೆಟ್ಟಿಂಗ್ ಜೂಜಾಟ ನಡೆಸಲಾಗುತ್ತಿದೆ. ಮಾತ್ರವಲ್ಲ ಹಿಂದಿನ ಪಂದ್ಯಗಳಿಗೆ ಸಂಬಂಧಪಟ್ಟಂತೆ ಗೆದ್ದವರಿಗೆ ಹಣ ಕೊಡಲು ಮತ್ತು ಸೋತವರಿಂದ ಹಣ ಪಡೆಯಲು ಬೆಂಗಳೂರು ನಗರ, ರಾಮದಾಸ ಲೇಔಟ್, ಎ ಬ್ಲಾಕ್, ಟೆಲಿಕಾಂ ಲೇಔಟ್, ಭುವನೇಶ್ವರಿ ನಗರ 2ನೇ ಕ್ರಾಸ್, ಮಾರ್ಟ್ ಅಟ್ ಡೋರ್ ಅಂಗಡಿಯ ಮುಂಭಾಗಕ್ಕೆ ವ್ಯಕ್ತಿಯೊಬ್ಬ ಬರುತ್ತಿದ್ದಾನೆ ಎಂಬ ಖಚಿತ ಮಾಹಿತಿ ಸಂಗ್ರಹಿಸಿದ ಸಿಸಿಬಿಯ ವಿಶೇಷ ವಿಚಾರಣಾ ದಳದ ಪೊಲೀಸ್ ಇನ್ಸ್ ಪೆಕ್ಟರ್ ಮತ್ತು ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ.

ಅಪರಾಧ ವಿಭಾಗದ ಜಂಟಿ ಪೊಲೀಸ್ ಆಯುಕ್ತ ಸಂದೀಪ್ ಪಾಟೀಲ್, ಉಪ ಪೊಲೀಸ್ ಆಯುಕ್ತ ಕೆ.ಪಿ.ರವಿಕುಮಾರ್ ಮಾರ್ಗದರ್ಶನದಲ್ಲಿ ಸಿಸಿಬಿ ವಿಶೇಷ ವಿಚಾರಣಾ ದಳದ ಸಹಾಯಕ ಪೊಲೀಸ್ ಆಯುಕ್ತ ಎನ್.ಹನುಮಂತರಾಯ ನೇತೃತ್ವದಲ್ಲಿ ಪೊಲೀಸ್ ಇನ್ಸ್ ಪೆಕ್ಟರ್ ಹಾಗೂ ಸಿಬ್ಬಂದಿ ಈ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.

LEAVE A REPLY

Please enter your comment!
Please enter your name here