ನವದೆಹಲಿ: ವಿಶ್ವಕಪ್ ಆರಂಭಿಕ ಪಂದ್ಯದಲ್ಲಿ ಸ್ಪಿನ್ ಸ್ನೇಹಿ ಪಿಚ್‌ನಲ್ಲೂ ಆಸೀಸ್ ವಿರುದ್ಧ ಗೆದ್ದು, ವಿಶ್ವಕಪ್ ಟೂರ್ನಿಯಲ್ಲಿ ಗೆಲುವಿನ ಖಾತೆ ತೆರೆದಿರುವ ಭಾರತ ಇಂದು ಅಫ್ಘಾನಿಸ್ತಾನ (Afghanistan) ತಂಡದ ವಿರುದ್ಧ ಸೆಣಸಲಿದೆ.
ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ಮಧ್ಯಾಹ್ನ 2 ಗಂಟೆಗೆ ಪಂದ್ಯ ಆರಂಭಗೊಳ್ಳಲಿದ್ದು, ಭಾರತ ತಂಡ ನಿರಾಯಾಸವಾಗಿ ಗೆಲ್ಲುವ ಗುರಿ ಹೊಂದಿದೆ. ಅದರಲ್ಲೂ ಮುಖ್ಯವಾಗಿ ಅಫ್ಘಾನ್ ಬೌಲರ್ ನವೀನ್ ಉಲ್ ಹಕ್‌ನನ್ನ ಕೆಣಕುವ ಸಲುವಾಗಿಯೇ ಮೈದಾನದಲ್ಲಿ ಕೊಹ್ಲಿ (Virat Kohli) ಅಬ್ಬರಿಸೋದನ್ನ ನೋಡಲು ಕಾದು ಕುಳಿತಿದ್ದಾರೆ.
ವಿಶ್ವಕಪ್ ಟೂರ್ನಿಯಲ್ಲಿ ಭಾರತ ಮತ್ತು ಅಫ್ಘಾನಿಸ್ತಾನ ತಂಡಗಳು ಮೂರು ಬಾರಿ ಮುಖಾಮುಖಿಯಾಗಿದ್ದು, ಭಾರತ 2 ಬಾರಿ ಗೆಲುವು ಸಾಧಿಸಿದೆ. ಒಂದು ಬಾರಿ ಪಂದ್ಯ ಡ್ರಾನಲ್ಲಿ ಅಂತ್ಯಗೊಂಡಿದೆ.
ಪಿಚ್ ರಿಪೋರ್ಟ್ ಹೇಗಿದೆ?
ಅರುಣ್ ಜೇಟ್ಲಿ ಕ್ರೀಡಾಂಗಣವು ಬ್ಯಾಟಿಂಗ್ ಸ್ನೇಹಿ ಪಿಚ್ ಆಗಿದ್ದು, ಟಾಸ್ ಗೆದ್ದ ತಂಡವು ಬ್ಯಾಟಿಂಗ್ ಆಯ್ದುಕೊಳ್ಳುವ ಸಾಧ್ಯತೆಗಳು ಹೆಚ್ಚಿದೆ. ಇದೇ ಕ್ರೀಡಾಂಗಣದಲ್ಲಿ ಶ್ರೀಲಂಕಾ ವಿರುದ್ಧ ದಕ್ಷಿಣ ಆಫ್ರಿಕಾ ತಂಡ 428 ರನ್ ಸಿಡಿಸಿ ವಿಶ್ವದಾಖಲೆ ಬರೆದಿತು. ದಕ್ಷಿಣ ಆಫ್ರಿಕಾದ ಮೂವರು ಬ್ಯಾಟರ್‌ಗಳು ಶತಕ ಸಿಡಿಸಿ ಮಿಂಚಿದ್ದರು. ಈ ಪಂದ್ಯದಲ್ಲಿ ಬರೋಬ್ಬರಿ 31 ಸಿಕ್ಸರ್‌ಗಳು ದಾಖಲಾಗಿದ್ದವು. ಹಾಗಾಗಿ ಉತ್ತಮ ಬ್ಯಾಟಿಂಗ್ ಹಾಗೂ ಬೌಲಿಂಗ್ ಪಡೆಯನ್ನು ಹೊಂದಿರುವ ಭಾರತ ಗೆಲುವಿನ ವಿಶ್ವಾಸದಲ್ಲಿದೆ
ಅಫ್ಘಾನ್ ವಿರುದ್ಧ ಭಾರತ ಪ್ಲೇಯಿಂಗ್-11: ರೋಹಿತ್ ಶರ್ಮಾ (ನಾಯಕ), ಇಶಾನ್ ಕಿಶನ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆ.ಎಲ್ ರಾಹುಲ್, ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ರವಿಚಂದ್ರನ್ ಅಶ್ವಿನ್, ಕುಲ್ದೀಪ್ ಯಾದವ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್.
The post Cricket World Cup 2023: ಇಂದು ಭಾರತ – ಅಫ್ಘಾನ್ ತಂಡದ ನಡುವೆ ಹಣಾಹಣಿ: ಪಿಚ್ ರಿಪೋರ್ಟ್ ಹೇಗಿದೆ? appeared first on Ain Live News.