Skip to content
Bengaluru/Bangalore News – Read latest news and live updates. TheBengaluruLive.com brings you the latest Bengaluru/Bangalore breaking news related to politics, crime, city updates, Corona, Crime, Education, Entertainment, Health, Karnataka High Court.

It's Your Voice

Primary Menu
  • ಅಪರಾಧ
  • ಕರ್ನಾಟಕ
    • ನಗರ
      • ಉಡುಪಿ
      • ಉತ್ತರ ಕನ್ನಡ
      • ಕಲಬುರ್ಗಿ
      • ಕೊಡಗು
      • ಕೊಪ್ಪಳ
      • ಕೋಲಾರ
      • ಗದಗ
      • ಚಾಮರಾಜನಗರ
      • ಚಿಕ್ಕಬಳ್ಳಾಪುರ
      • ಚಿಕ್ಕಮಗಳೂರು
      • ಚಿತ್ರದುರ್ಗ
      • ತುಮಕೂರು
      • ದಕ್ಷಿಣ ಕನ್ನಡ
      • ದಾವಣಗೆರೆ
      • ಧಾರವಾಡ
      • ಬಳ್ಳಾರಿ
      • ಬಾಗಲಕೋಟ
      • ಬೀದರ್
      • ಬೆಂಗಳೂರು ಗ್ರಾಮಾಂತರ
      • ಬೆಂಗಳೂರು ನಗರ
      • ಬೆಳಗಾವಿ
      • ಮಂಡ್ಯ
      • ಮೈಸೂರು
      • ಯಾದಗಿರಿ
      • ರಾಮನಗರ
      • ರಾಯಚೂರು
      • ವಿಜಯಪುರ
      • ಶಿವಮೊಗ್ಗ
      • ಹಾವೇರಿ
      • ಹಾಸನ
  • ಕ್ರೀಡೆ
  • ತಂತ್ರಜ್ಞಾನ
  • ರಾಜಕೀಯ
  • ರಿಯಲ್ ಎಸ್ಟೇಟ್
  • ಶಿಕ್ಷಣ
  • ಸಾರ್ವಜನಿಕ ಕುಂದುಕೊರತೆಗಳು
  • ಸಿನಿಮಾ
  • Home
  • ಕರ್ನಾಟಕ
  • ನಗರ
  • ಬೆಂಗಳೂರು ನಗರ
  • ಬೆಳೆಹಾನಿಯಾದ ರೈತರ ಖಾತೆಗೆ ಪರಿಹಾರಧನ: ಸಿಎಂ ಬಸವರಾಜ ಬೊಮ್ಮಾಯಿ
  • ಕೋಲಾರ
  • ಬೆಂಗಳೂರು ನಗರ

ಬೆಳೆಹಾನಿಯಾದ ರೈತರ ಖಾತೆಗೆ ಪರಿಹಾರಧನ: ಸಿಎಂ ಬಸವರಾಜ ಬೊಮ್ಮಾಯಿ

The Bengaluru Live November 22, 2021 8:00 PM
Crop Loss Compensation in Farmer's Account says Karnataka Chief Minister

ರಸ್ತೆ ಹಾಗೂ ಸೇತುವೆ ದುರಸ್ತಿಗೆ 500 ಕೋಟಿ ರೂ. ಬಿಡುಗಡೆ

ಕೋಲಾರ/ಬೆಂಗಳೂರು :

ರಾಜ್ಯದಲ್ಲಿ ಅತಿವೃಷ್ಟಿಯಿಂದ ಅಪಾರ ಬೆಳೆ ನಷ್ಟವಾಗಿದ್ದು, ಜಿಪಿಎಸ್ ಆಧಾರಿತ ಸರ್ವೇ ಮಾಡಿ ವಿವರಗಳನ್ನು ಪರಿಹಾರದ ಆ್ಯಪ್ ಗೆ ಅಪಲೋಡ್ ಮಾಡಲು ಸೂಚನೆ ನೀಡಲಾಗಿದೆ. ವಿವರಗಳು ಅಪಲೋಡ್ ಆದ ಕೂಡಲೇ ತ್ವರಿತವಾಗಿ ರೈತರ ಖಾತೆಗೆ ಪರಿಹಾರ ಹಣ ನೀಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಅವರು ಇಂದು ಕೋಲಾರ ಜಿಲ್ಲೆಯ ಮಳೆ ಹಾನಿ ಪ್ರದೇಶಗಳಿಗೆ ಭೇಟಿ ನೀಡಿ ನಂತರ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದರು.

Crop Loss Compensation in Farmer's Account says Karnataka Chief Minister

ಕೋಲಾರ ಪ್ರದೇಶದಲ್ಲಿ ಮಳೆಯಿಂದಾಗಿ 90% ರಷ್ಟು ರಾಗಿ ಬೆಳೆ ನಾಶ ಆಗಿದೆ. ಅದಕ್ಕೆ ಕೃಷಿ, ತೋಟಗಾರಿಕೆ,ಕಂದಾಯ, ಆರ್ ಡಿಪಿಆರ್ ಇಲಾಖೆಗಳು ಕೂಡಲೇ ಸಮೀಕ್ಷೆ ಕೈಗೊಳ್ಳಲು ಸೂಚನೆ ನೀಡಲಾಗಿದ್ದು, ತಕ್ಷಣ ಪರಿಹಾರ ನೀಡುವ ವ್ಯವಸ್ಥೆಯನ್ನು ಸರ್ಕಾರ ಮಾಡಲಾಗುವುದು ಎಂದರು.

ಇಂದು ನರಸಾಪುರದಿಂದ ಕೋಲಾರದವರೆಗೂ ಬೆಳೆ ನಷ್ಟವನ್ನು ಗಮನಿಸಲಾಗಿದೆ. ರಾಗಿ ಬೆಳೆ, ತೋಟಗಾರಿಕೆ ಬೆಳೆ, ಕಾಯಿಪಲ್ಲೆ, ಹೂವಿನ ತೋಟ ನಷ್ಟವಾಗಿದೆ. ಗಮನಿಸಿದ್ದೇನೆ. ಕೋಲಾರದ ಮುದವಾಡಿ ಕೆರೆ ತುಂಬಿಹರಿದು,ರಸ್ತೆ ಸಂಪರ್ಕ ಸಂಪೂರ್ಣ ಬಂದ್ ಆಗಿದೆ. ಪ್ರಾಥಮಿಕ ವರದಿಯ ಪ್ರಕಾರ 9 ಮನೆ ಪೂರ್ಣ ಹಾನಿಯಾಗಿದ್ದು, 790 ಮನೆಗಳಿಗೆ ಭಾಗಶ: ಹಾನಿಯಾಗಿದೆ. 48333 ಹೆ.ಪ್ರದೇಶದಲ್ಲಿ ಬೆಳೆ ನಾಶ ಹಾಗೂ 6966 ಹೆ.ಪ್ರದೇಶದಲ್ಲಿ ತೋಟಗಾರಿಕೆ ಬೆಳೆ ನಷ್ಟವಾಗಿದೆ. 189 ಕಿ.ಮೀ.ರಸ್ತೆಗಳು ಹಾಗೂ 34 ಸೇತುವೆಗಳು ಹಾಳಾಗಿರುವುದನ್ನು ಗಮನಿಸಲಾಗಿದೆ ಎಂದು ತಿಳಿಸಿದರು.

Crop Loss Compensation in Farmer's Account says Karnataka Chief Minister

ಜಿಲ್ಲಾಧಿಕಾರಿಗಳ ಪಿಡಿ ಖಾತೆಯಲ್ಲಿನ ಹಣ ಪರಿಹಾರಕ್ಕೆ ಬಳಕೆ:

ಪೂರ್ಣ ಮನೆ ಹಾನಿಗೆ 5 ಲಕ್ಷ ಪರಿಹಾರ ಮೊತ್ತದಲ್ಲಿ ಮೊದಲನೇ ಕಂತಾಗಿ 1 ಲಕ್ಷ ರೂ. ಕೂಡಲೇ ಬಿಡುಗಡೆ ನಂತರ ಮನೆ ನಿರ್ಮಾಣದ ವಿವಿಧ ಹಂತಗಳಲ್ಲಿ 3 ಕಂತಿನಲ್ಲಿ ಹಣ ಬಿಡುಗಡೆ ಮಾಡಲಾಗುವುದು. ಅಂತೆಯೇ ಬಿ ವರ್ಗದಲ್ಲಿ ಹಾನಿಯಾಗಿರುವ ಮನೆಗೆ 3 ಲಕ್ಷ ಪರಿಹಾರದಲ್ಲಿ 1 ಲಕ್ಷ ರೂ. ಕೂಡಲೇ ಬಿಡುಗಡೆ ಡಿಸಿಗಳಿಗೆ ಸೂಚನೆ ನೀಡಲಾಗಿದೆ. ಒಟ್ಟಾರೆ ರಾಜ್ಯದಲ್ಲಿ ಜಿಲ್ಲಾದಿಕಾರಿಗಳ ಪಿಡಿ ಖಾತೆಯಲ್ಲಿ ಸುಮಾರು 685 ಕೋಟಿ ಇದ್ದು, ಇದಕ್ಕಾಗಿ ಬಳಕೆ ಮಾಡಲು ಸೂಚನೆ ನೀಡಲಾಗಿದೆ.

Crop Loss Compensation in Farmer's Account says Karnataka Chief Minister

ರಸ್ತೆ ಹಾಗೂ ಸೇತುವೆ ದುರಸ್ತಿಗೆ 500 ಕೋಟಿ ರೂ. ಬಿಡುಗಡೆ:

ರಸ್ತೆ ಮತ್ತು ಸೇತುವೆ ದುರಸ್ತಿಗೆ 500 ಕೋಟಿ ರೂ. ಬಿಡುಗಡೆ ಮಾಡಲಾಗಿದೆ. ಜಿಲ್ಲೆಗೆ ತುರ್ತು ಕಾಮಗಾರಿಗೆ ಬಳಕೆ ಮಾಡಿಕೊಳ್ಳಲು, ಒಂದು ಭಾಗ ಎನ್ ಡಿಆರ್ ಎಫ್ ಮಾರ್ಗಸೂಚಿಯಂತೆ ರಿಪೇರಿ ವೆಚ್ಚ , ದೊಡ್ಡ ಪ್ರಮಾಣದ ಕಾಮಗಾರಿಗೆ ರಾಜ್ಯ ಸರ್ಕಾರವೇ ವೆಚ್ಚ ಭರಿಸಲಿದೆ. ಈ ಬಗ್ಗೆ ಕೂಡಲೇ ಅಂದಾಜು ಕಳಿಸಲು ಸೂಚಿಸಲಾಗಿದೆ ಎಂದು ತಿಳಿಸಿದರು.

ಶಾಲೆ, ಅಂಗನವಾಡಿಗಳು ಹಾನಿಯಾಗಿದ್ದು, ಅದರ ರಿಪೇರಿ ಗೆ ಎನ್ ಡಿಆರ್ ಎಫ್ ನಲ್ಲಿ ಹಣ ನೀಡಲು ಅವಕಾಶವಿದೆ. ಅದನ್ನು ಬಳಸಿಕೊಂಡು ದುರಸ್ತಿ ಕಾರ್ಯ ಕೈಗೊಳ್ಳಲು ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದರು.

Crop Loss Compensation in Farmer's Account says Karnataka Chief Minister

ಕೆರೆಗಳನ್ನು ಉಳಿಸುವುದು ಸರ್ಕಾರದ ಪ್ರಥಮ ಆದ್ಯತೆ

ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳು ದೊಡ್ಡ ಪ್ರಮಾಣದ ಕೆರೆ, ಕೆರೆ ಅಂಗಳ ಇರುವ ಪ್ರದೇಶ. ಇವುಗಳು ರಾಜ್ಯದ ಆಸ್ತಿ. ಇವುಗಳನ್ನು ದುರಸ್ತಿ, ಸ್ವಚ್ಛ ಮಾಡಲು ಕೂಡಲೇ ಕ್ರಮ ಕೈಗೊಳ್ಳಲು ಹಾಗೂ ಕೋಡಿಗಳು, ಗೇಟುಗಳು ಶಿಥಿಲಗೊಂಡಿದ್ದಲ್ಲಿ ಕೂಡಲೇ ಅಂದಾಜು ಕಳಿಸಿದ್ದಲ್ಲಿ ಹಣ ಬಿಡುಗಡೆಗೊಳಿಸಲಾಗುವುದು. ಕೆರೆಗಳನ್ನು ಉಳಿಸುವುದು ನಮ್ಮ ಪ್ರಥಮ ಆದ್ಯತೆ ಎಂದು ಮುಖ್ಯಮಂತ್ರಿಗಳು ತಿಳಿಸಿದರು.

Crop Loss Compensation in Farmer's Account says Karnataka Chief Minister

ಕೆರೆ ಒತ್ತುವರಿ, ರಾಜಾಕಾಲುವೆ ಒತ್ತುವರಿ ಕೂಡಲೇ ತೆರವು:

ಕೆರೆ ಒತ್ತುವರಿ, ರಾಜಾಕಾಲುವೆ ಒತ್ತುವರಿಯನ್ನು ಕೂಡಲೇ ಗುರುತಿಸಿ, ಒತ್ತುವರಿಯಾದ ಪ್ರದೇಶವನ್ನು ಕೂಡಲೇ ತೆರೆವುಗೊಳಿಸಲು ಆದೇಶ ನೀಡಲಾಗಿದೆ. ಕೆರೆಗಳ ಬಗ್ಗೆ ಸರ್ವೇ ನಂತರ ಬೌಂಡರಿ ನಿಗದಿ ಮಾಡಿಸಿ, ಬೇಲಿ ಅಥವಾ ಗ್ರೀನ್ ಬೇಲಿ ಹಾಕುವ ಮೂಲಕ ಅವುಗಳ ರಕ್ಷಣೆ ಮಾಡಲು ಆದೇಶ ನೀಡಲಾಗಿದೆ.

ವಿದ್ಯುತ್ ಕಂಬಗಳು, ಟ್ರಾನ್ಸ್ ಫಾರ್ಮರ್ ಗಳ ದುರಸ್ತಿಯನ್ನು ಮಳೆ ನಿಂತ 24 ಗಂಟೆಗಳಲ್ಲಿ ಗೆ ಬೆಸ್ಕಾಂಗೆ ಈಗಾಗಲೇ ಸೂಚನೆ ನೀಡಲಾಗಿದೆ ಎಂದು ತಿಳಿಸಿದರು.

ಒಟ್ಟಾರೆ ರಾಜ್ಯದಲ್ಲಿ ನವೆಂಬರ್ ನಲ್ಲಿ ಅಕಾಲಿಕ ಮಳೆಯಿಂದಾಗಿ ಕಟಾವಿಗೆ ಬಂದ ಬೆಳೆ ಹಾನಿಯಾಗಿದೆ. ಕೆರೆ ಕಟ್ಟೆ ಒಡೆದು,ತಗ್ಗು ಪ್ರದೇಶದಲ್ಲಿ ಮಳೆ ನೀರು ನುಗ್ಗಿರುವ ಮನೆಗಳಿಗೆ ಕೂಡಲೇ 10,000 ನೀಡಲು ಸೂಚನೆ ನೀಡಿದೆ. ನಂತರ ಹಾನಿಯಾದ ಪ್ರಮಾಣದ ಪ್ರಕಾರ ಪರಿಹಾರವನ್ನು ನೀಡಲಾಗುವುದು ಇನ್ನೂ 4 ದಿನ ಮಳೆ ಬರುವ ಸೂಚನೆ ಇದ್ದು, ರಕ್ಷಣಾ ಕಾರ್ಯಾಚರಣೆಗೆ ಜಿಲ್ಲಾಡಳಿತಗಳು ಸನ್ನದ್ಧರಾಗಬೇಕು ಎಂದು ಈಗಾಗಲೇ ಸೂಚನೆ ನೀಡಲಾಗಿದೆ ಎಂದರು ತಿಳಿಸಿದರು.

ಭಾರಿ ಮಳೆಯಿಂದ ಹಾನಿಗೊಳಗಾದ ಹೊಸಕೋಟೆಯ ವರದಾಪುರ ಕಾಲೋನಿಗೆ ಇಂದು ಮುಖ್ಯಮಂತ್ರಿ @BSBommai ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಸಚಿವ @MtbNagaraju, ಅಧಿಕಾರಿಗಳು ಮತ್ತಿತರರು ಉಪಸ್ಥಿತರಿದ್ದರು. pic.twitter.com/H1tTA2KGSk

— CM of Karnataka (@CMofKarnataka) November 22, 2021

ಈ ಅನಿರೀಕ್ಷಿತ ಮಳೆಯಿಂದ ಆಗಿರುವ ತೊಂದರೆಯಿಂದ ಜನರಿಗೆ ಕೂಡಲೇ ಪರಿಹಾರ ಹಾಗೂ ಅವರ ಸಹಾಯಕ್ಕೆ ಧಾವಿಸುವ ಮುಖಾಂತರ ಅತ್ಯಂತ ದಕ್ಷತೆ ಹಾಗೂ ಕ್ಷಮತೆಯಿಂದ ಈ ಸಂದರ್ಭವನ್ನು ನಿಭಾಯಿಸುತ್ತೇವೆ ಎಂದು ಭರವಸೆ ಇರುವುದಾಗಿ ಮುಖ್ಯಮಂತ್ರಿಗಳು ತಿಳಿಸಿದರು.

ರೈತರು ಪರಿಹಾರ ಮೊತ್ತ ಹೆಚ್ಚಿಸುವ ಬಗ್ಗೆ ಪ್ರತಿಕ್ರಿಯೆ ನೀಡಿ, ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ನಡುವೆ ಚರ್ಚೆ ಆಗಿದ್ದು, ಕೇಂದ್ರ ಈ ಬಗ್ಗೆ ಶೀಘ್ರದಲ್ಲಿ ನಿರ್ಣಯ ಕೈಗೊಳ್ಳಲಿದೆ.

ಕಳೆದ ವರ್ಷ ಬೆಳೆದ ಬೆಳೆಗಳನ್ನು ಕೆಲ ರೈತರು ದಾಸ್ತಾನು ಮಾಡಿದ್ದು, ನೀರು ನುಗ್ಗಿ ಹಾಳಾಗಿದೆ ಎಂಬುದಕ್ಕೆ ಪ್ರತಿಕ್ರಿಯೆ ನೀಡಿ, ಎನ್ ಡಿ ಆರ್ ಎಫ್ ಮಾರ್ಗಸೂಚಿಯಂತೆ ಜಮೀನನಲ್ಲಿರುವ ಬೆಳೆದು ನಿಂತ ಹಾಗೂ ಕಟಾವಾಗಿ ಜಮೀನನಲ್ಲೆ ಇರುವ ಪೈರಿಗೆ , ಪರಿಹಾರ ನೀಡಲಾಗುವುದು, ಆದರೆ ದಾಸ್ತಾನು ಮಾಡಿಕೊಂಡಿರುವ ಬೆಳೆಯ ಹಾನಿಗೆ ಪರಿಹಾರ ನಿಯಮದಂತೆ ಆಗದಿರುವ ಕಾರಣ, ವಿಶೇಷ ಪ್ರಕರಣಗಳೆಂದು ಪರಿಗಣಿಸಿ ಸಹಾಯ ಮಾಡಲು ಪ್ರಯತ್ನಿಸಲಾಗುವುದು ಎಂದರು.

Also Read: Rs 500 crore for repair of roads and bridges damaged due to rains: Karnataka CM

About the Author

The Bengaluru Live

Administrator

Visit Website View All Posts

Post navigation

Previous: ಕರ್ನಾಟಕ ರಾಜ್ಯ ಮಹಾನಗರ ಪಾಲಿಕೆ ಅಧಿಕಾರಿ ಮತ್ತು ನೌಕರರ ಸಂಘದ ರಾಜ್ಯಾಧ್ಯಕ್ಷರಾಗಿ ಅಮೃತ್ ರಾಜ್ ಅವಿರೋಧವಾಗಿ ನೇಮಕ
Next: ದಕ್ಷಿಣ ಏಷ್ಯಾದಲ್ಲೇ ಮೊದಲ ಬಾರಿ ಅತ್ಯಾಧುನಿಕ “ರೋಸೆನ್‌ಬೌರ್ ಫೈರ್‌ಫೈಟಿಂಗ್ ಸಿಮ್ಯುಲೇಟರ್” ಅಗ್ನಿಶಾಮವನ್ನು ಪರಿಚಯಿಸಿದ ಬೆಂಗಳೂರು ವಿಮಾನ ನಿಲ್ದಾಣ

Leave a Reply Cancel reply

Your email address will not be published. Required fields are marked *

Related Stories

  • ಕರ್ನಾಟಕ
  • ಬೆಂಗಳೂರು ನಗರ

‘RSSಗೆ ಈಗ ಸಂವಿಧಾನದ ಶಕ್ತಿ ಅರ್ಥವಾಗಿದೆ; 100 ವರ್ಷಗಳಲ್ಲಿ ಮೊದಲ ಬಾರಿ ಕಾನೂನು ಪಾಲನೆ’

The Bengaluru Live November 13, 2025 11:03 PM
  • ಕರ್ನಾಟಕ
  • ಬೆಂಗಳೂರು ನಗರ

ಪುಣೆ: ವಾಹನಗಳಿಗೆ ಡಿಕ್ಕಿ ಹೊಡೆದು ಹೊತ್ತಿ ಉರಿದ ಟ್ರಕ್; ಕನಿಷ್ಠ ಎಂಟು ಮಂದಿ ಸಾವು – Video

The Bengaluru Live November 13, 2025 10:40 PM
  • ಕರ್ನಾಟಕ
  • ಬೆಂಗಳೂರು ನಗರ

ಕೆಂಪು ಕೋಟೆ ಬಳಿ ನಡೆದದ್ದು ಉಗ್ರ ದಾಳಿ ಎಂಬುದರಲ್ಲಿ ಅನುಮಾನ ಇಲ್ಲ- ಮಾರ್ಕೊ ರುಬಿಯೊ; ಭಾರತದ ತನಿಖಾ ವಿಧಾನಕ್ಕೆ ತಲೆದೂಗಿದ ಅಮೆರಿಕ ಸಚಿವ!

The Bengaluru Live November 13, 2025 10:02 PM

Latest Post

‘RSSಗೆ ಈಗ ಸಂವಿಧಾನದ ಶಕ್ತಿ ಅರ್ಥವಾಗಿದೆ; 100 ವರ್ಷಗಳಲ್ಲಿ ಮೊದಲ ಬಾರಿ ಕಾನೂನು ಪಾಲನೆ’
  • ಕರ್ನಾಟಕ
  • ಬೆಂಗಳೂರು ನಗರ

‘RSSಗೆ ಈಗ ಸಂವಿಧಾನದ ಶಕ್ತಿ ಅರ್ಥವಾಗಿದೆ; 100 ವರ್ಷಗಳಲ್ಲಿ ಮೊದಲ ಬಾರಿ ಕಾನೂನು ಪಾಲನೆ’

November 13, 2025 11:03 PM
ಪುಣೆ: ವಾಹನಗಳಿಗೆ ಡಿಕ್ಕಿ ಹೊಡೆದು ಹೊತ್ತಿ ಉರಿದ ಟ್ರಕ್; ಕನಿಷ್ಠ ಎಂಟು ಮಂದಿ ಸಾವು – Video
  • ಕರ್ನಾಟಕ
  • ಬೆಂಗಳೂರು ನಗರ

ಪುಣೆ: ವಾಹನಗಳಿಗೆ ಡಿಕ್ಕಿ ಹೊಡೆದು ಹೊತ್ತಿ ಉರಿದ ಟ್ರಕ್; ಕನಿಷ್ಠ ಎಂಟು ಮಂದಿ ಸಾವು – Video

November 13, 2025 10:40 PM
ಕೆಂಪು ಕೋಟೆ ಬಳಿ ನಡೆದದ್ದು ಉಗ್ರ ದಾಳಿ ಎಂಬುದರಲ್ಲಿ ಅನುಮಾನ ಇಲ್ಲ- ಮಾರ್ಕೊ ರುಬಿಯೊ; ಭಾರತದ ತನಿಖಾ ವಿಧಾನಕ್ಕೆ ತಲೆದೂಗಿದ ಅಮೆರಿಕ ಸಚಿವ!
  • ಕರ್ನಾಟಕ
  • ಬೆಂಗಳೂರು ನಗರ

ಕೆಂಪು ಕೋಟೆ ಬಳಿ ನಡೆದದ್ದು ಉಗ್ರ ದಾಳಿ ಎಂಬುದರಲ್ಲಿ ಅನುಮಾನ ಇಲ್ಲ- ಮಾರ್ಕೊ ರುಬಿಯೊ; ಭಾರತದ ತನಿಖಾ ವಿಧಾನಕ್ಕೆ ತಲೆದೂಗಿದ ಅಮೆರಿಕ ಸಚಿವ!

November 13, 2025 10:02 PM
ಬೆಳಗಾವಿ: ಕಬ್ಬು ಬೆಳೆಗಾರರ ಪ್ರತಿಭಟನೆ ವೇಳೆ ಕಲ್ಲು ತೂರಾಟ ನಡೆಸಿದ ಆರು ಜನರ ಬಂಧನ
  • ಕರ್ನಾಟಕ
  • ಬೆಂಗಳೂರು ನಗರ

ಬೆಳಗಾವಿ: ಕಬ್ಬು ಬೆಳೆಗಾರರ ಪ್ರತಿಭಟನೆ ವೇಳೆ ಕಲ್ಲು ತೂರಾಟ ನಡೆಸಿದ ಆರು ಜನರ ಬಂಧನ

November 13, 2025 9:41 PM
ದೆಹಲಿ ಸ್ಫೋಟ: ಅಲ್ ಫಲಾಹ್ ವಿಶ್ವವಿದ್ಯಾಲಯದ ಸದಸ್ಯತ್ವ ಅಮಾನತುಗೊಳಿಸಿದ AIU!
  • ಕರ್ನಾಟಕ
  • ಬೆಂಗಳೂರು ನಗರ

ದೆಹಲಿ ಸ್ಫೋಟ: ಅಲ್ ಫಲಾಹ್ ವಿಶ್ವವಿದ್ಯಾಲಯದ ಸದಸ್ಯತ್ವ ಅಮಾನತುಗೊಳಿಸಿದ AIU!

November 13, 2025 9:41 PM
ದೆಹಲಿ ಸ್ಫೋಟದಲ್ಲಿ ಜೈಶ್‍ನ 22 ವೈಟ್-ಕಾಲರ್ ಭಯೋತ್ಪಾದಕರು ಭಾಗಿ: ವಿಮಾನ ನಿಲ್ದಾಣಗಳಿಗೆ ಲುಕ್ಔಟ್ ಎಚ್ಚರಿಕೆ
  • ಕರ್ನಾಟಕ
  • ಬೆಂಗಳೂರು ನಗರ

ದೆಹಲಿ ಸ್ಫೋಟದಲ್ಲಿ ಜೈಶ್‍ನ 22 ವೈಟ್-ಕಾಲರ್ ಭಯೋತ್ಪಾದಕರು ಭಾಗಿ: ವಿಮಾನ ನಿಲ್ದಾಣಗಳಿಗೆ ಲುಕ್ಔಟ್ ಎಚ್ಚರಿಕೆ

November 13, 2025 9:41 PM

You may have missed

  • ಕರ್ನಾಟಕ
  • ಬೆಂಗಳೂರು ನಗರ

‘RSSಗೆ ಈಗ ಸಂವಿಧಾನದ ಶಕ್ತಿ ಅರ್ಥವಾಗಿದೆ; 100 ವರ್ಷಗಳಲ್ಲಿ ಮೊದಲ ಬಾರಿ ಕಾನೂನು ಪಾಲನೆ’

The Bengaluru Live November 13, 2025 11:03 PM
  • ಕರ್ನಾಟಕ
  • ಬೆಂಗಳೂರು ನಗರ

ಪುಣೆ: ವಾಹನಗಳಿಗೆ ಡಿಕ್ಕಿ ಹೊಡೆದು ಹೊತ್ತಿ ಉರಿದ ಟ್ರಕ್; ಕನಿಷ್ಠ ಎಂಟು ಮಂದಿ ಸಾವು – Video

The Bengaluru Live November 13, 2025 10:40 PM
  • ಕರ್ನಾಟಕ
  • ಬೆಂಗಳೂರು ನಗರ

ಕೆಂಪು ಕೋಟೆ ಬಳಿ ನಡೆದದ್ದು ಉಗ್ರ ದಾಳಿ ಎಂಬುದರಲ್ಲಿ ಅನುಮಾನ ಇಲ್ಲ- ಮಾರ್ಕೊ ರುಬಿಯೊ; ಭಾರತದ ತನಿಖಾ ವಿಧಾನಕ್ಕೆ ತಲೆದೂಗಿದ ಅಮೆರಿಕ ಸಚಿವ!

The Bengaluru Live November 13, 2025 10:02 PM
  • ಕರ್ನಾಟಕ
  • ಬೆಂಗಳೂರು ನಗರ

ಬೆಳಗಾವಿ: ಕಬ್ಬು ಬೆಳೆಗಾರರ ಪ್ರತಿಭಟನೆ ವೇಳೆ ಕಲ್ಲು ತೂರಾಟ ನಡೆಸಿದ ಆರು ಜನರ ಬಂಧನ

The Bengaluru Live November 13, 2025 9:41 PM

About Us

ಬೆಂಗಳೂರು ಲೈವ್ ಇಂಗ್ಲಿಷ್ ಮತ್ತು ಕನ್ನಡ ಭಾಷೆಯಲ್ಲಿ ಸುದ್ದಿಗಳನ್ನು ಪ್ರಕಟಿಸುವ ಸ್ಥಳೀಯ ಡಿಜಿಟಲ್ ಮಾಧ್ಯಮ ಸಂಸ್ಥೆಗಳಲ್ಲಿ ಒಂದಾಗಿದೆ. ನಮ್ಮ ಸುದ್ದಿ ವೆಬ್‌ಸೈಟ್‌ಗಳ ಮೂಲಕ ಅಂತರ್ಜಾಲದಲ್ಲಿ ನಾವು ಅತಿದೊಡ್ಡ ಸ್ಥಳೀಯ ಸುದ್ದಿ ಪೂರೈಕೆದಾರರಲ್ಲಿ ಒಬ್ಬರಾಗಿದ್ದೇವೆ.

Useful Links

  • About
  • Privacy
  • Contact Us
  • Advertise with us

Recent News

  • ‘RSSಗೆ ಈಗ ಸಂವಿಧಾನದ ಶಕ್ತಿ ಅರ್ಥವಾಗಿದೆ; 100 ವರ್ಷಗಳಲ್ಲಿ ಮೊದಲ ಬಾರಿ ಕಾನೂನು ಪಾಲನೆ’
  • ಪುಣೆ: ವಾಹನಗಳಿಗೆ ಡಿಕ್ಕಿ ಹೊಡೆದು ಹೊತ್ತಿ ಉರಿದ ಟ್ರಕ್; ಕನಿಷ್ಠ ಎಂಟು ಮಂದಿ ಸಾವು – Video
  • ಕೆಂಪು ಕೋಟೆ ಬಳಿ ನಡೆದದ್ದು ಉಗ್ರ ದಾಳಿ ಎಂಬುದರಲ್ಲಿ ಅನುಮಾನ ಇಲ್ಲ- ಮಾರ್ಕೊ ರುಬಿಯೊ; ಭಾರತದ ತನಿಖಾ ವಿಧಾನಕ್ಕೆ ತಲೆದೂಗಿದ ಅಮೆರಿಕ ಸಚಿವ!
  • ಬೆಳಗಾವಿ: ಕಬ್ಬು ಬೆಳೆಗಾರರ ಪ್ರತಿಭಟನೆ ವೇಳೆ ಕಲ್ಲು ತೂರಾಟ ನಡೆಸಿದ ಆರು ಜನರ ಬಂಧನ
©Copyright 2025 The Bengaluru Live All rights reserved. | MoreNews by AF themes.