Skip to content
ದಿ ಬೆಂಗಳೂರು ಲೈವ್ | ಕನ್ನಡ ಸುದ್ದಿ, ಬ್ರೇಕಿಂಗ್ ಅಪ್ಡೇಟ್ಸ್

ದಿ ಬೆಂಗಳೂರು ಲೈವ್ | ಕನ್ನಡ ಸುದ್ದಿ, ಬ್ರೇಕಿಂಗ್ ಅಪ್ಡೇಟ್ಸ್

ಇದು ನಿಮ್ಮ ಧ್ವನಿ

Primary Menu
  • ಮುಖಪುಟ
  • ಬೆಂಗಳೂರು ನಗರ
  • ಅಪರಾಧ
  • ರಾಜಕೀಯ
  • English News
  • Delhi News
  • ಕರ್ನಾಟಕ
  • ಶಿಕ್ಷಣ
  • ಕ್ರೀಡೆ
  • Home
  • ಕರ್ನಾಟಕ
  • ನಗರ
  • ಬೆಂಗಳೂರು ನಗರ
  • ಬೆಳೆಹಾನಿಯಾದ ರೈತರ ಖಾತೆಗೆ ಪರಿಹಾರಧನ: ಸಿಎಂ ಬಸವರಾಜ ಬೊಮ್ಮಾಯಿ
  • ಕೋಲಾರ
  • ಬೆಂಗಳೂರು ನಗರ

ಬೆಳೆಹಾನಿಯಾದ ರೈತರ ಖಾತೆಗೆ ಪರಿಹಾರಧನ: ಸಿಎಂ ಬಸವರಾಜ ಬೊಮ್ಮಾಯಿ

The Bengaluru Live November 22, 2021 8:00 PM 1 minute read
0
Crop Loss Compensation in Farmer's Account says Karnataka Chief Minister

ಬೆಳೆಹಾನಿಯಾದ ರೈತರ ಖಾತೆಗೆ ಪರಿಹಾರಧನ: ಸಿಎಂ ಬಸವರಾಜ ಬೊಮ್ಮಾಯಿ

📗 ಈ ಸುದ್ದಿಯನ್ನು ಇಂಗ್ಲಿಷ್‌ನಲ್ಲಿ ಓದಿ

ರಸ್ತೆ ಹಾಗೂ ಸೇತುವೆ ದುರಸ್ತಿಗೆ 500 ಕೋಟಿ ರೂ. ಬಿಡುಗಡೆ

ಕೋಲಾರ/ಬೆಂಗಳೂರು :

ರಾಜ್ಯದಲ್ಲಿ ಅತಿವೃಷ್ಟಿಯಿಂದ ಅಪಾರ ಬೆಳೆ ನಷ್ಟವಾಗಿದ್ದು, ಜಿಪಿಎಸ್ ಆಧಾರಿತ ಸರ್ವೇ ಮಾಡಿ ವಿವರಗಳನ್ನು ಪರಿಹಾರದ ಆ್ಯಪ್ ಗೆ ಅಪಲೋಡ್ ಮಾಡಲು ಸೂಚನೆ ನೀಡಲಾಗಿದೆ. ವಿವರಗಳು ಅಪಲೋಡ್ ಆದ ಕೂಡಲೇ ತ್ವರಿತವಾಗಿ ರೈತರ ಖಾತೆಗೆ ಪರಿಹಾರ ಹಣ ನೀಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಅವರು ಇಂದು ಕೋಲಾರ ಜಿಲ್ಲೆಯ ಮಳೆ ಹಾನಿ ಪ್ರದೇಶಗಳಿಗೆ ಭೇಟಿ ನೀಡಿ ನಂತರ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದರು.

Crop Loss Compensation in Farmer's Account says Karnataka Chief Minister

ಕೋಲಾರ ಪ್ರದೇಶದಲ್ಲಿ ಮಳೆಯಿಂದಾಗಿ 90% ರಷ್ಟು ರಾಗಿ ಬೆಳೆ ನಾಶ ಆಗಿದೆ. ಅದಕ್ಕೆ ಕೃಷಿ, ತೋಟಗಾರಿಕೆ,ಕಂದಾಯ, ಆರ್ ಡಿಪಿಆರ್ ಇಲಾಖೆಗಳು ಕೂಡಲೇ ಸಮೀಕ್ಷೆ ಕೈಗೊಳ್ಳಲು ಸೂಚನೆ ನೀಡಲಾಗಿದ್ದು, ತಕ್ಷಣ ಪರಿಹಾರ ನೀಡುವ ವ್ಯವಸ್ಥೆಯನ್ನು ಸರ್ಕಾರ ಮಾಡಲಾಗುವುದು ಎಂದರು.

ಇಂದು ನರಸಾಪುರದಿಂದ ಕೋಲಾರದವರೆಗೂ ಬೆಳೆ ನಷ್ಟವನ್ನು ಗಮನಿಸಲಾಗಿದೆ. ರಾಗಿ ಬೆಳೆ, ತೋಟಗಾರಿಕೆ ಬೆಳೆ, ಕಾಯಿಪಲ್ಲೆ, ಹೂವಿನ ತೋಟ ನಷ್ಟವಾಗಿದೆ. ಗಮನಿಸಿದ್ದೇನೆ. ಕೋಲಾರದ ಮುದವಾಡಿ ಕೆರೆ ತುಂಬಿಹರಿದು,ರಸ್ತೆ ಸಂಪರ್ಕ ಸಂಪೂರ್ಣ ಬಂದ್ ಆಗಿದೆ. ಪ್ರಾಥಮಿಕ ವರದಿಯ ಪ್ರಕಾರ 9 ಮನೆ ಪೂರ್ಣ ಹಾನಿಯಾಗಿದ್ದು, 790 ಮನೆಗಳಿಗೆ ಭಾಗಶ: ಹಾನಿಯಾಗಿದೆ. 48333 ಹೆ.ಪ್ರದೇಶದಲ್ಲಿ ಬೆಳೆ ನಾಶ ಹಾಗೂ 6966 ಹೆ.ಪ್ರದೇಶದಲ್ಲಿ ತೋಟಗಾರಿಕೆ ಬೆಳೆ ನಷ್ಟವಾಗಿದೆ. 189 ಕಿ.ಮೀ.ರಸ್ತೆಗಳು ಹಾಗೂ 34 ಸೇತುವೆಗಳು ಹಾಳಾಗಿರುವುದನ್ನು ಗಮನಿಸಲಾಗಿದೆ ಎಂದು ತಿಳಿಸಿದರು.

Crop Loss Compensation in Farmer's Account says Karnataka Chief Minister

ಜಿಲ್ಲಾಧಿಕಾರಿಗಳ ಪಿಡಿ ಖಾತೆಯಲ್ಲಿನ ಹಣ ಪರಿಹಾರಕ್ಕೆ ಬಳಕೆ:

ಪೂರ್ಣ ಮನೆ ಹಾನಿಗೆ 5 ಲಕ್ಷ ಪರಿಹಾರ ಮೊತ್ತದಲ್ಲಿ ಮೊದಲನೇ ಕಂತಾಗಿ 1 ಲಕ್ಷ ರೂ. ಕೂಡಲೇ ಬಿಡುಗಡೆ ನಂತರ ಮನೆ ನಿರ್ಮಾಣದ ವಿವಿಧ ಹಂತಗಳಲ್ಲಿ 3 ಕಂತಿನಲ್ಲಿ ಹಣ ಬಿಡುಗಡೆ ಮಾಡಲಾಗುವುದು. ಅಂತೆಯೇ ಬಿ ವರ್ಗದಲ್ಲಿ ಹಾನಿಯಾಗಿರುವ ಮನೆಗೆ 3 ಲಕ್ಷ ಪರಿಹಾರದಲ್ಲಿ 1 ಲಕ್ಷ ರೂ. ಕೂಡಲೇ ಬಿಡುಗಡೆ ಡಿಸಿಗಳಿಗೆ ಸೂಚನೆ ನೀಡಲಾಗಿದೆ. ಒಟ್ಟಾರೆ ರಾಜ್ಯದಲ್ಲಿ ಜಿಲ್ಲಾದಿಕಾರಿಗಳ ಪಿಡಿ ಖಾತೆಯಲ್ಲಿ ಸುಮಾರು 685 ಕೋಟಿ ಇದ್ದು, ಇದಕ್ಕಾಗಿ ಬಳಕೆ ಮಾಡಲು ಸೂಚನೆ ನೀಡಲಾಗಿದೆ.

Crop Loss Compensation in Farmer's Account says Karnataka Chief Minister

ರಸ್ತೆ ಹಾಗೂ ಸೇತುವೆ ದುರಸ್ತಿಗೆ 500 ಕೋಟಿ ರೂ. ಬಿಡುಗಡೆ:

ರಸ್ತೆ ಮತ್ತು ಸೇತುವೆ ದುರಸ್ತಿಗೆ 500 ಕೋಟಿ ರೂ. ಬಿಡುಗಡೆ ಮಾಡಲಾಗಿದೆ. ಜಿಲ್ಲೆಗೆ ತುರ್ತು ಕಾಮಗಾರಿಗೆ ಬಳಕೆ ಮಾಡಿಕೊಳ್ಳಲು, ಒಂದು ಭಾಗ ಎನ್ ಡಿಆರ್ ಎಫ್ ಮಾರ್ಗಸೂಚಿಯಂತೆ ರಿಪೇರಿ ವೆಚ್ಚ , ದೊಡ್ಡ ಪ್ರಮಾಣದ ಕಾಮಗಾರಿಗೆ ರಾಜ್ಯ ಸರ್ಕಾರವೇ ವೆಚ್ಚ ಭರಿಸಲಿದೆ. ಈ ಬಗ್ಗೆ ಕೂಡಲೇ ಅಂದಾಜು ಕಳಿಸಲು ಸೂಚಿಸಲಾಗಿದೆ ಎಂದು ತಿಳಿಸಿದರು.

ಶಾಲೆ, ಅಂಗನವಾಡಿಗಳು ಹಾನಿಯಾಗಿದ್ದು, ಅದರ ರಿಪೇರಿ ಗೆ ಎನ್ ಡಿಆರ್ ಎಫ್ ನಲ್ಲಿ ಹಣ ನೀಡಲು ಅವಕಾಶವಿದೆ. ಅದನ್ನು ಬಳಸಿಕೊಂಡು ದುರಸ್ತಿ ಕಾರ್ಯ ಕೈಗೊಳ್ಳಲು ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದರು.

Crop Loss Compensation in Farmer's Account says Karnataka Chief Minister

ಕೆರೆಗಳನ್ನು ಉಳಿಸುವುದು ಸರ್ಕಾರದ ಪ್ರಥಮ ಆದ್ಯತೆ

ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳು ದೊಡ್ಡ ಪ್ರಮಾಣದ ಕೆರೆ, ಕೆರೆ ಅಂಗಳ ಇರುವ ಪ್ರದೇಶ. ಇವುಗಳು ರಾಜ್ಯದ ಆಸ್ತಿ. ಇವುಗಳನ್ನು ದುರಸ್ತಿ, ಸ್ವಚ್ಛ ಮಾಡಲು ಕೂಡಲೇ ಕ್ರಮ ಕೈಗೊಳ್ಳಲು ಹಾಗೂ ಕೋಡಿಗಳು, ಗೇಟುಗಳು ಶಿಥಿಲಗೊಂಡಿದ್ದಲ್ಲಿ ಕೂಡಲೇ ಅಂದಾಜು ಕಳಿಸಿದ್ದಲ್ಲಿ ಹಣ ಬಿಡುಗಡೆಗೊಳಿಸಲಾಗುವುದು. ಕೆರೆಗಳನ್ನು ಉಳಿಸುವುದು ನಮ್ಮ ಪ್ರಥಮ ಆದ್ಯತೆ ಎಂದು ಮುಖ್ಯಮಂತ್ರಿಗಳು ತಿಳಿಸಿದರು.

Crop Loss Compensation in Farmer's Account says Karnataka Chief Minister

ಕೆರೆ ಒತ್ತುವರಿ, ರಾಜಾಕಾಲುವೆ ಒತ್ತುವರಿ ಕೂಡಲೇ ತೆರವು:

ಕೆರೆ ಒತ್ತುವರಿ, ರಾಜಾಕಾಲುವೆ ಒತ್ತುವರಿಯನ್ನು ಕೂಡಲೇ ಗುರುತಿಸಿ, ಒತ್ತುವರಿಯಾದ ಪ್ರದೇಶವನ್ನು ಕೂಡಲೇ ತೆರೆವುಗೊಳಿಸಲು ಆದೇಶ ನೀಡಲಾಗಿದೆ. ಕೆರೆಗಳ ಬಗ್ಗೆ ಸರ್ವೇ ನಂತರ ಬೌಂಡರಿ ನಿಗದಿ ಮಾಡಿಸಿ, ಬೇಲಿ ಅಥವಾ ಗ್ರೀನ್ ಬೇಲಿ ಹಾಕುವ ಮೂಲಕ ಅವುಗಳ ರಕ್ಷಣೆ ಮಾಡಲು ಆದೇಶ ನೀಡಲಾಗಿದೆ.

ವಿದ್ಯುತ್ ಕಂಬಗಳು, ಟ್ರಾನ್ಸ್ ಫಾರ್ಮರ್ ಗಳ ದುರಸ್ತಿಯನ್ನು ಮಳೆ ನಿಂತ 24 ಗಂಟೆಗಳಲ್ಲಿ ಗೆ ಬೆಸ್ಕಾಂಗೆ ಈಗಾಗಲೇ ಸೂಚನೆ ನೀಡಲಾಗಿದೆ ಎಂದು ತಿಳಿಸಿದರು.

ಒಟ್ಟಾರೆ ರಾಜ್ಯದಲ್ಲಿ ನವೆಂಬರ್ ನಲ್ಲಿ ಅಕಾಲಿಕ ಮಳೆಯಿಂದಾಗಿ ಕಟಾವಿಗೆ ಬಂದ ಬೆಳೆ ಹಾನಿಯಾಗಿದೆ. ಕೆರೆ ಕಟ್ಟೆ ಒಡೆದು,ತಗ್ಗು ಪ್ರದೇಶದಲ್ಲಿ ಮಳೆ ನೀರು ನುಗ್ಗಿರುವ ಮನೆಗಳಿಗೆ ಕೂಡಲೇ 10,000 ನೀಡಲು ಸೂಚನೆ ನೀಡಿದೆ. ನಂತರ ಹಾನಿಯಾದ ಪ್ರಮಾಣದ ಪ್ರಕಾರ ಪರಿಹಾರವನ್ನು ನೀಡಲಾಗುವುದು ಇನ್ನೂ 4 ದಿನ ಮಳೆ ಬರುವ ಸೂಚನೆ ಇದ್ದು, ರಕ್ಷಣಾ ಕಾರ್ಯಾಚರಣೆಗೆ ಜಿಲ್ಲಾಡಳಿತಗಳು ಸನ್ನದ್ಧರಾಗಬೇಕು ಎಂದು ಈಗಾಗಲೇ ಸೂಚನೆ ನೀಡಲಾಗಿದೆ ಎಂದರು ತಿಳಿಸಿದರು.

ಭಾರಿ ಮಳೆಯಿಂದ ಹಾನಿಗೊಳಗಾದ ಹೊಸಕೋಟೆಯ ವರದಾಪುರ ಕಾಲೋನಿಗೆ ಇಂದು ಮುಖ್ಯಮಂತ್ರಿ @BSBommai ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಸಚಿವ @MtbNagaraju, ಅಧಿಕಾರಿಗಳು ಮತ್ತಿತರರು ಉಪಸ್ಥಿತರಿದ್ದರು. pic.twitter.com/H1tTA2KGSk

— CM of Karnataka (@CMofKarnataka) November 22, 2021

ಈ ಅನಿರೀಕ್ಷಿತ ಮಳೆಯಿಂದ ಆಗಿರುವ ತೊಂದರೆಯಿಂದ ಜನರಿಗೆ ಕೂಡಲೇ ಪರಿಹಾರ ಹಾಗೂ ಅವರ ಸಹಾಯಕ್ಕೆ ಧಾವಿಸುವ ಮುಖಾಂತರ ಅತ್ಯಂತ ದಕ್ಷತೆ ಹಾಗೂ ಕ್ಷಮತೆಯಿಂದ ಈ ಸಂದರ್ಭವನ್ನು ನಿಭಾಯಿಸುತ್ತೇವೆ ಎಂದು ಭರವಸೆ ಇರುವುದಾಗಿ ಮುಖ್ಯಮಂತ್ರಿಗಳು ತಿಳಿಸಿದರು.

ರೈತರು ಪರಿಹಾರ ಮೊತ್ತ ಹೆಚ್ಚಿಸುವ ಬಗ್ಗೆ ಪ್ರತಿಕ್ರಿಯೆ ನೀಡಿ, ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ನಡುವೆ ಚರ್ಚೆ ಆಗಿದ್ದು, ಕೇಂದ್ರ ಈ ಬಗ್ಗೆ ಶೀಘ್ರದಲ್ಲಿ ನಿರ್ಣಯ ಕೈಗೊಳ್ಳಲಿದೆ.

ಕಳೆದ ವರ್ಷ ಬೆಳೆದ ಬೆಳೆಗಳನ್ನು ಕೆಲ ರೈತರು ದಾಸ್ತಾನು ಮಾಡಿದ್ದು, ನೀರು ನುಗ್ಗಿ ಹಾಳಾಗಿದೆ ಎಂಬುದಕ್ಕೆ ಪ್ರತಿಕ್ರಿಯೆ ನೀಡಿ, ಎನ್ ಡಿ ಆರ್ ಎಫ್ ಮಾರ್ಗಸೂಚಿಯಂತೆ ಜಮೀನನಲ್ಲಿರುವ ಬೆಳೆದು ನಿಂತ ಹಾಗೂ ಕಟಾವಾಗಿ ಜಮೀನನಲ್ಲೆ ಇರುವ ಪೈರಿಗೆ , ಪರಿಹಾರ ನೀಡಲಾಗುವುದು, ಆದರೆ ದಾಸ್ತಾನು ಮಾಡಿಕೊಂಡಿರುವ ಬೆಳೆಯ ಹಾನಿಗೆ ಪರಿಹಾರ ನಿಯಮದಂತೆ ಆಗದಿರುವ ಕಾರಣ, ವಿಶೇಷ ಪ್ರಕರಣಗಳೆಂದು ಪರಿಗಣಿಸಿ ಸಹಾಯ ಮಾಡಲು ಪ್ರಯತ್ನಿಸಲಾಗುವುದು ಎಂದರು.

Also Read: Rs 500 crore for repair of roads and bridges damaged due to rains: Karnataka CM

About the Author

The Bengaluru Live

Administrator

Visit Website View All Posts

Post navigation

Previous: ಕರ್ನಾಟಕ ರಾಜ್ಯ ಮಹಾನಗರ ಪಾಲಿಕೆ ಅಧಿಕಾರಿ ಮತ್ತು ನೌಕರರ ಸಂಘದ ರಾಜ್ಯಾಧ್ಯಕ್ಷರಾಗಿ ಅಮೃತ್ ರಾಜ್ ಅವಿರೋಧವಾಗಿ ನೇಮಕ
Next: ದಕ್ಷಿಣ ಏಷ್ಯಾದಲ್ಲೇ ಮೊದಲ ಬಾರಿ ಅತ್ಯಾಧುನಿಕ “ರೋಸೆನ್‌ಬೌರ್ ಫೈರ್‌ಫೈಟಿಂಗ್ ಸಿಮ್ಯುಲೇಟರ್” ಅಗ್ನಿಶಾಮವನ್ನು ಪರಿಚಯಿಸಿದ ಬೆಂಗಳೂರು ವಿಮಾನ ನಿಲ್ದಾಣ

Leave a Reply Cancel reply

Your email address will not be published. Required fields are marked *

Related Stories

‘ಈಗ Gen Z ಎಲ್ಲಿದೆ?’ ಕೆಪಿಎಸ್‌ಸಿ ನೇಮಕಾತಿ ಅಕ್ರಮಗಳ ಬಗ್ಗೆ ಮೌನ ಪ್ರಶ್ನಿಸಿದ ಎಚ್.ಡಿ. ಕುಮಾರಸ್ವಾಮಿ
  • ರಾಜಕೀಯ
  • ಬೆಂಗಳೂರು ನಗರ

‘ಈಗ Gen Z ಎಲ್ಲಿದೆ?’ ಕೆಪಿಎಸ್‌ಸಿ ನೇಮಕಾತಿ ಅಕ್ರಮಗಳ ಬಗ್ಗೆ ಮೌನ ಪ್ರಶ್ನಿಸಿದ ಎಚ್.ಡಿ. ಕುಮಾರಸ್ವಾಮಿ

The Bengaluru Live September 26, 2026 8:50 PM 0
ಕಾಂಗ್ರೆಸ್ ಸೋಲುಗಳ ಹೊಣೆ ತಪ್ಪಿಸಿಕೊಳ್ಳಲು ರಾಹುಲ್ ಗಾಂಧಿ SIR ಪ್ರತಿಭಟನೆ ಬಳಸುತ್ತಿದ್ದಾರೆ: ಪ್ರಲ್ಹಾದ ಜೋಶಿ ಆರೋಪ
  • ಬೆಂಗಳೂರು ನಗರ
  • ರಾಜಕೀಯ

ಕಾಂಗ್ರೆಸ್ ಸೋಲುಗಳ ಹೊಣೆ ತಪ್ಪಿಸಿಕೊಳ್ಳಲು ರಾಹುಲ್ ಗಾಂಧಿ SIR ಪ್ರತಿಭಟನೆ ಬಳಸುತ್ತಿದ್ದಾರೆ: ಪ್ರಲ್ಹಾದ ಜೋಶಿ ಆರೋಪ

The Bengaluru Live September 26, 2026 8:21 PM 0
ನಾಲ್ಕು ವಿಧಾನ ಪರಿಷತ್ ಸ್ಥಾನಗಳಿಗೆ ಜಂಟಿ ಸ್ಪರ್ಧೆ; ಕ್ಷೇತ್ರವಾರು ಜವಾಬ್ದಾರಿ ಹಂಚಿದ ಬಿಜೆಪಿ–ಜೆಡಿಎಸ್
  • ರಾಜಕೀಯ
  • ಬೆಂಗಳೂರು ನಗರ

ನಾಲ್ಕು ವಿಧಾನ ಪರಿಷತ್ ಸ್ಥಾನಗಳಿಗೆ ಜಂಟಿ ಸ್ಪರ್ಧೆ; ಕ್ಷೇತ್ರವಾರು ಜವಾಬ್ದಾರಿ ಹಂಚಿದ ಬಿಜೆಪಿ–ಜೆಡಿಎಸ್

The Bengaluru Live September 26, 2026 7:41 PM 0

Published In Public Interest by thebengalurulive.com

Latest Post

‘ಈಗ Gen Z ಎಲ್ಲಿದೆ?’ ಕೆಪಿಎಸ್‌ಸಿ ನೇಮಕಾತಿ ಅಕ್ರಮಗಳ ಬಗ್ಗೆ ಮೌನ ಪ್ರಶ್ನಿಸಿದ ಎಚ್.ಡಿ. ಕುಮಾರಸ್ವಾಮಿ ‘ಈಗ Gen Z ಎಲ್ಲಿದೆ?’ ಕೆಪಿಎಸ್‌ಸಿ ನೇಮಕಾತಿ ಅಕ್ರಮಗಳ ಬಗ್ಗೆ ಮೌನ ಪ್ರಶ್ನಿಸಿದ ಎಚ್.ಡಿ. ಕುಮಾರಸ್ವಾಮಿ
  • ರಾಜಕೀಯ
  • ಬೆಂಗಳೂರು ನಗರ

‘ಈಗ Gen Z ಎಲ್ಲಿದೆ?’ ಕೆಪಿಎಸ್‌ಸಿ ನೇಮಕಾತಿ ಅಕ್ರಮಗಳ ಬಗ್ಗೆ ಮೌನ ಪ್ರಶ್ನಿಸಿದ ಎಚ್.ಡಿ. ಕುಮಾರಸ್ವಾಮಿ

September 26, 2026 8:50 PM 0
ಕಾಂಗ್ರೆಸ್ ಸೋಲುಗಳ ಹೊಣೆ ತಪ್ಪಿಸಿಕೊಳ್ಳಲು ರಾಹುಲ್ ಗಾಂಧಿ SIR ಪ್ರತಿಭಟನೆ ಬಳಸುತ್ತಿದ್ದಾರೆ: ಪ್ರಲ್ಹಾದ ಜೋಶಿ ಆರೋಪ ಕಾಂಗ್ರೆಸ್ ಸೋಲುಗಳ ಹೊಣೆ ತಪ್ಪಿಸಿಕೊಳ್ಳಲು ರಾಹುಲ್ ಗಾಂಧಿ SIR ಪ್ರತಿಭಟನೆ ಬಳಸುತ್ತಿದ್ದಾರೆ: ಪ್ರಲ್ಹಾದ ಜೋಶಿ ಆರೋಪ
  • ಬೆಂಗಳೂರು ನಗರ
  • ರಾಜಕೀಯ

ಕಾಂಗ್ರೆಸ್ ಸೋಲುಗಳ ಹೊಣೆ ತಪ್ಪಿಸಿಕೊಳ್ಳಲು ರಾಹುಲ್ ಗಾಂಧಿ SIR ಪ್ರತಿಭಟನೆ ಬಳಸುತ್ತಿದ್ದಾರೆ: ಪ್ರಲ್ಹಾದ ಜೋಶಿ ಆರೋಪ

September 26, 2026 8:21 PM 0
ನಾಲ್ಕು ವಿಧಾನ ಪರಿಷತ್ ಸ್ಥಾನಗಳಿಗೆ ಜಂಟಿ ಸ್ಪರ್ಧೆ; ಕ್ಷೇತ್ರವಾರು ಜವಾಬ್ದಾರಿ ಹಂಚಿದ ಬಿಜೆಪಿ–ಜೆಡಿಎಸ್ ನಾಲ್ಕು ವಿಧಾನ ಪರಿಷತ್ ಸ್ಥಾನಗಳಿಗೆ ಜಂಟಿ ಸ್ಪರ್ಧೆ; ಕ್ಷೇತ್ರವಾರು ಜವಾಬ್ದಾರಿ ಹಂಚಿದ ಬಿಜೆಪಿ–ಜೆಡಿಎಸ್
  • ರಾಜಕೀಯ
  • ಬೆಂಗಳೂರು ನಗರ

ನಾಲ್ಕು ವಿಧಾನ ಪರಿಷತ್ ಸ್ಥಾನಗಳಿಗೆ ಜಂಟಿ ಸ್ಪರ್ಧೆ; ಕ್ಷೇತ್ರವಾರು ಜವಾಬ್ದಾರಿ ಹಂಚಿದ ಬಿಜೆಪಿ–ಜೆಡಿಎಸ್

September 26, 2026 7:41 PM 0
SIR ನೋಟಿಸ್ ಪಡೆದವರ ಮನೆಗಳಲ್ಲೇ ದಾಖಲೆ ಸಂಗ್ರಹಕ್ಕೆ ಚುನಾವಣಾ ಆಯೋಗ ಸೂಚನೆ; ಸಾಮಾನ್ಯವಾಗಿ ಕಚೇರಿ ವಿಚಾರಣೆಗೆ ಹಾಜರಾತಿ ಅಗತ್ಯವಿಲ್ಲ SIR ನೋಟಿಸ್ ಪಡೆದವರ ಮನೆಗಳಲ್ಲೇ ದಾಖಲೆ ಸಂಗ್ರಹಕ್ಕೆ ಚುನಾವಣಾ ಆಯೋಗ ಸೂಚನೆ; ಸಾಮಾನ್ಯವಾಗಿ ಕಚೇರಿ ವಿಚಾರಣೆಗೆ ಹಾಜರಾತಿ ಅಗತ್ಯವಿಲ್ಲ
  • ಬೆಂಗಳೂರು ನಗರ
  • ನವ ದೆಹಲಿ

SIR ನೋಟಿಸ್ ಪಡೆದವರ ಮನೆಗಳಲ್ಲೇ ದಾಖಲೆ ಸಂಗ್ರಹಕ್ಕೆ ಚುನಾವಣಾ ಆಯೋಗ ಸೂಚನೆ; ಸಾಮಾನ್ಯವಾಗಿ ಕಚೇರಿ ವಿಚಾರಣೆಗೆ ಹಾಜರಾತಿ ಅಗತ್ಯವಿಲ್ಲ

September 26, 2026 7:15 PM 0
ಬೀದಿದೀಪ ನಿರ್ವಹಣೆಯಲ್ಲಿ ಲೋಪ: ಎಫಿಲ್ಯೂಮ್, ಇಸ್ಮಾರ್ಟ್‌ಗೆ ₹27.79 ಲಕ್ಷ ದಂಡ ವಿಧಿಸಿದ ಬೆಂಗಳೂರು ಕೇಂದ್ರ ಪಾಲಿಕೆ ಬೀದಿದೀಪ ನಿರ್ವಹಣೆಯಲ್ಲಿ ಲೋಪ: ಎಫಿಲ್ಯೂಮ್, ಇಸ್ಮಾರ್ಟ್‌ಗೆ ₹27.79 ಲಕ್ಷ ದಂಡ ವಿಧಿಸಿದ ಬೆಂಗಳೂರು ಕೇಂದ್ರ ಪಾಲಿಕೆ
  • ಬೆಂಗಳೂರು ನಗರ

ಬೀದಿದೀಪ ನಿರ್ವಹಣೆಯಲ್ಲಿ ಲೋಪ: ಎಫಿಲ್ಯೂಮ್, ಇಸ್ಮಾರ್ಟ್‌ಗೆ ₹27.79 ಲಕ್ಷ ದಂಡ ವಿಧಿಸಿದ ಬೆಂಗಳೂರು ಕೇಂದ್ರ ಪಾಲಿಕೆ

September 26, 2026 6:49 PM 1
ಅಧಿಕಾರಿಗಳು ಗಡುವಿನೊಳಗೆ ಕ್ರಮ ಕೈಗೊಳ್ಳದಿದ್ದರೆ ಬೆಂಗಳೂರಿನ ಕಾಮಗಾರಿ ಬಿಲ್‌ಗಳಿಗೆ ಸ್ವಯಂಚಾಲಿತ ಅನುಮೋದನೆ: ಕೃಷ್ಣ ಬೈರೇಗೌಡ ಅಧಿಕಾರಿಗಳು ಗಡುವಿನೊಳಗೆ ಕ್ರಮ ಕೈಗೊಳ್ಳದಿದ್ದರೆ ಬೆಂಗಳೂರಿನ ಕಾಮಗಾರಿ ಬಿಲ್‌ಗಳಿಗೆ ಸ್ವಯಂಚಾಲಿತ ಅನುಮೋದನೆ: ಕೃಷ್ಣ ಬೈರೇಗೌಡ
  • ಬೆಂಗಳೂರು ನಗರ

ಅಧಿಕಾರಿಗಳು ಗಡುವಿನೊಳಗೆ ಕ್ರಮ ಕೈಗೊಳ್ಳದಿದ್ದರೆ ಬೆಂಗಳೂರಿನ ಕಾಮಗಾರಿ ಬಿಲ್‌ಗಳಿಗೆ ಸ್ವಯಂಚಾಲಿತ ಅನುಮೋದನೆ: ಕೃಷ್ಣ ಬೈರೇಗೌಡ

September 26, 2026 6:28 PM 0

You may have missed

‘ಈಗ Gen Z ಎಲ್ಲಿದೆ?’ ಕೆಪಿಎಸ್‌ಸಿ ನೇಮಕಾತಿ ಅಕ್ರಮಗಳ ಬಗ್ಗೆ ಮೌನ ಪ್ರಶ್ನಿಸಿದ ಎಚ್.ಡಿ. ಕುಮಾರಸ್ವಾಮಿ
  • ರಾಜಕೀಯ
  • ಬೆಂಗಳೂರು ನಗರ

‘ಈಗ Gen Z ಎಲ್ಲಿದೆ?’ ಕೆಪಿಎಸ್‌ಸಿ ನೇಮಕಾತಿ ಅಕ್ರಮಗಳ ಬಗ್ಗೆ ಮೌನ ಪ್ರಶ್ನಿಸಿದ ಎಚ್.ಡಿ. ಕುಮಾರಸ್ವಾಮಿ

The Bengaluru Live September 26, 2026 8:50 PM 0
ಕಾಂಗ್ರೆಸ್ ಸೋಲುಗಳ ಹೊಣೆ ತಪ್ಪಿಸಿಕೊಳ್ಳಲು ರಾಹುಲ್ ಗಾಂಧಿ SIR ಪ್ರತಿಭಟನೆ ಬಳಸುತ್ತಿದ್ದಾರೆ: ಪ್ರಲ್ಹಾದ ಜೋಶಿ ಆರೋಪ
  • ಬೆಂಗಳೂರು ನಗರ
  • ರಾಜಕೀಯ

ಕಾಂಗ್ರೆಸ್ ಸೋಲುಗಳ ಹೊಣೆ ತಪ್ಪಿಸಿಕೊಳ್ಳಲು ರಾಹುಲ್ ಗಾಂಧಿ SIR ಪ್ರತಿಭಟನೆ ಬಳಸುತ್ತಿದ್ದಾರೆ: ಪ್ರಲ್ಹಾದ ಜೋಶಿ ಆರೋಪ

The Bengaluru Live September 26, 2026 8:21 PM 0
ನಾಲ್ಕು ವಿಧಾನ ಪರಿಷತ್ ಸ್ಥಾನಗಳಿಗೆ ಜಂಟಿ ಸ್ಪರ್ಧೆ; ಕ್ಷೇತ್ರವಾರು ಜವಾಬ್ದಾರಿ ಹಂಚಿದ ಬಿಜೆಪಿ–ಜೆಡಿಎಸ್
  • ರಾಜಕೀಯ
  • ಬೆಂಗಳೂರು ನಗರ

ನಾಲ್ಕು ವಿಧಾನ ಪರಿಷತ್ ಸ್ಥಾನಗಳಿಗೆ ಜಂಟಿ ಸ್ಪರ್ಧೆ; ಕ್ಷೇತ್ರವಾರು ಜವಾಬ್ದಾರಿ ಹಂಚಿದ ಬಿಜೆಪಿ–ಜೆಡಿಎಸ್

The Bengaluru Live September 26, 2026 7:41 PM 0
SIR ನೋಟಿಸ್ ಪಡೆದವರ ಮನೆಗಳಲ್ಲೇ ದಾಖಲೆ ಸಂಗ್ರಹಕ್ಕೆ ಚುನಾವಣಾ ಆಯೋಗ ಸೂಚನೆ; ಸಾಮಾನ್ಯವಾಗಿ ಕಚೇರಿ ವಿಚಾರಣೆಗೆ ಹಾಜರಾತಿ ಅಗತ್ಯವಿಲ್ಲ
  • ಬೆಂಗಳೂರು ನಗರ
  • ನವ ದೆಹಲಿ

SIR ನೋಟಿಸ್ ಪಡೆದವರ ಮನೆಗಳಲ್ಲೇ ದಾಖಲೆ ಸಂಗ್ರಹಕ್ಕೆ ಚುನಾವಣಾ ಆಯೋಗ ಸೂಚನೆ; ಸಾಮಾನ್ಯವಾಗಿ ಕಚೇರಿ ವಿಚಾರಣೆಗೆ ಹಾಜರಾತಿ ಅಗತ್ಯವಿಲ್ಲ

The Bengaluru Live September 26, 2026 7:15 PM 0

ನಮ್ಮ ಕುರಿತು

ಬೆಂಗಳೂರು ಲೈವ್ ಬೆಂಗಳೂರು ಮತ್ತು ಕರ್ನಾಟಕವನ್ನು ಕೇಂದ್ರೀಕರಿಸಿ ಇಂಗ್ಲಿಷ್ ಮತ್ತು ಕನ್ನಡದಲ್ಲಿ ಸುದ್ದಿ ಹಾಗೂ ಮಾಹಿತಿಯನ್ನು ಪ್ರಕಟಿಸುವ ಸ್ವತಂತ್ರ ಡಿಜಿಟಲ್ ಸುದ್ದಿ ಪ್ರಕಟಣೆಯಾಗಿದೆ. ಇದು ಫೆಬ್ರವರಿ 2020ರಿಂದ ಕಾರ್ಯನಿರ್ವಹಿಸುತ್ತಿದೆ.

ಉಪಯುಕ್ತ ಕೊಂಡಿಗಳು

  • ಬೆಂಗಳೂರು ಲೈವ್ ಕುರಿತು
  • ಸಂಪರ್ಕಿಸಿ
  • ಸಂಪಾದಕೀಯ ಮಾನದಂಡಗಳು ಮತ್ತು ತಿದ್ದುಪಡಿ ನೀತಿ
  • ಪ್ರಕಾಶಕರು, ಸಂಪಾದಕೀಯ ಹೊಣೆಗಾರಿಕೆ ಮತ್ತು ದೂರು ಪರಿಹಾರ
  • ಮಾಲೀಕತ್ವ ಮತ್ತು ಹಣಕಾಸು ಪಾರದರ್ಶಕತೆ
  • ನಮ್ಮೊಂದಿಗೆ ಜಾಹೀರಾತು ನೀಡಿ
  • ಗೌಪ್ಯತಾ ನೀತಿ
  • ಸೇವಾ ನಿಯಮಗಳು
  • ಪತ್ರಿಕಾ ಪ್ರಕಟಣೆ ಸಲ್ಲಿಸಿ

ಇತ್ತೀಚಿನ ಸುದ್ದಿಗಳು

  • ‘ಈಗ Gen Z ಎಲ್ಲಿದೆ?’ ಕೆಪಿಎಸ್‌ಸಿ ನೇಮಕಾತಿ ಅಕ್ರಮಗಳ ಬಗ್ಗೆ ಮೌನ ಪ್ರಶ್ನಿಸಿದ ಎಚ್.ಡಿ. ಕುಮಾರಸ್ವಾಮಿ
  • ಕಾಂಗ್ರೆಸ್ ಸೋಲುಗಳ ಹೊಣೆ ತಪ್ಪಿಸಿಕೊಳ್ಳಲು ರಾಹುಲ್ ಗಾಂಧಿ SIR ಪ್ರತಿಭಟನೆ ಬಳಸುತ್ತಿದ್ದಾರೆ: ಪ್ರಲ್ಹಾದ ಜೋಶಿ ಆರೋಪ
  • ನಾಲ್ಕು ವಿಧಾನ ಪರಿಷತ್ ಸ್ಥಾನಗಳಿಗೆ ಜಂಟಿ ಸ್ಪರ್ಧೆ; ಕ್ಷೇತ್ರವಾರು ಜವಾಬ್ದಾರಿ ಹಂಚಿದ ಬಿಜೆಪಿ–ಜೆಡಿಎಸ್
  • SIR ನೋಟಿಸ್ ಪಡೆದವರ ಮನೆಗಳಲ್ಲೇ ದಾಖಲೆ ಸಂಗ್ರಹಕ್ಕೆ ಚುನಾವಣಾ ಆಯೋಗ ಸೂಚನೆ; ಸಾಮಾನ್ಯವಾಗಿ ಕಚೇರಿ ವಿಚಾರಣೆಗೆ ಹಾಜರಾತಿ ಅಗತ್ಯವಿಲ್ಲ
©Copyright 2025 The Bengaluru Live All rights reserved. | MoreNews by AF themes.