Home ರಾಜಕೀಯ ಡಿ.ದೇವರಾಜ ಅರಸು ಟ್ರಕ್ ಟರ್ಮಿನಲ್ ಹಗರಣ ಸಂಬಂಧ ಬಿಜೆಪಿ ನಾಯಕ ಡಿ.ಎಸ್. ವೀರಯ್ಯ ಬಂಧನ

ಡಿ.ದೇವರಾಜ ಅರಸು ಟ್ರಕ್ ಟರ್ಮಿನಲ್ ಹಗರಣ ಸಂಬಂಧ ಬಿಜೆಪಿ ನಾಯಕ ಡಿ.ಎಸ್. ವೀರಯ್ಯ ಬಂಧನ

48
0

ಬೆಂಗಳೂರು: ಡಿ.ದೇವರಾಜ ಅರಸು ಟ್ರಕ್ ಟರ್ಮಿನಲ್ ಪ್ರೈವೇಟ್ ಲಿಮಿಟೆಡ್ ನಲ್ಲಿ ನಡೆದಿರುವ ಕೋಟ್ಯಂತರ ರೂ. ಹಗರಣ ಪ್ರಕರಣ ಸಂಬಂಧ ಬಿಜೆಪಿ ನಾಯಕ, ವಿಧಾನ ಪರಿಷತ್ ಮಾಜಿ ಸದಸ್ಯ ಡಿ.ಎಸ್.ವೀರಯ್ಯ ಅವರನ್ನು ಸಿಐಡಿ ಪೊಲೀಸರು ಬಂಧಿಸಿದ್ದಾರೆ.

2021ರಿಂದ 2023ರ ನಡುವೆ ಡಿ.ಎಸ್.ವೀರಯ್ಯ ಅವರು ಡಿ.ದೇವರಾಜ ಅರಸು ಟ್ರಕ್ ಟರ್ಮಿನಲ್ ನಿಗಮದ ಅಧ್ಯಕ್ಷರಾಗಿದ್ದಾಗ ತುಂಡು ಗುತ್ತಿಗೆ ನೀಡುವ ವಿಚಾರದಲ್ಲಿ 47.10 ಕೋಟಿ ರೂ. ನಡೆದಿದೆ ಎನ್ನಲಾದ ಅಕ್ರಮದ ಬಗ್ಗೆ ಹಾಲಿ ವ್ಯವಸ್ಥಾಪಕ ನಿರ್ದೇಶಕ ಸಿ.ಎನ್.ಶಿವಪ್ರಸಾದ್ ನಗರದ ವಿಲ್ಸನ್ ಗಾರ್ಡನ್ ಪೊಲೀಸ್ ಠಾಣೆಗೆ ದೂರು ನೀಡಿದ್ದರು.

ಡಿ.ಎಸ್.ವೀರಯ್ಯ ವಿರುದ್ಧ ವಿಲ್ಸನ್ ಗಾರ್ಡನ್ ಪೊಲೀಸ್ ಠಾಣೆಯಲ್ಲಿ ಭಾರತೀಯ ದಂಡ ಸಂಹಿತೆ 1860(ಐಸಿಸಿ) ಕಲಂ 120ಬಿ, 409, 420, 465, 468 ಮತ್ತು 471ರ ಅಡಿಯಲ್ಲಿ ಎಫ್‍ಐಆರ್ ದಾಖಲಾಗಿತ್ತು. ಈ ಪ್ರಕರಣವನ್ನು ರಾಜ್ಯ ಸರಕಾರ ಸಿಐಡಿ ತನಿಖೆಗೆ ವಹಿಸಿತ್ತು. ತನಿಖೆ ಕೈಗೆತ್ತಿಕೊಂಡಿರುವ ಸಿಐಡಿ ಅಧಿಕಾರಿಗಳು, ಸದ್ಯ ಡಿ.ಎಸ್.ವೀರಯ್ಯ ಅವರನ್ನು ಬಂಧಿಸಿ ವಿಚಾರಣೆ ಚುರುಕುಗೊಳಿಸಿದ್ದಾರೆ.

LEAVE A REPLY

Please enter your comment!
Please enter your name here