ಬೆಂಗಳೂರು:
ಪಾದಚಾರಿ ಮಾರ್ಗ ಒತ್ತುವರಿ ತೆರವು ಮಾಡುವ ಮೂಲಕ ಸರ್ಕಾರ ಉತ್ತಮ ಕೆಲಸ ಮಾಡುತ್ತಿದೆ. ವೃದ್ಧರಿಗೆ, ಶಾಲಾಮಕ್ಕಳ ಓಡಾಟಕ್ಕೆ ಇದ್ದ ತೊಂದರೆ ನಿವಾರಣೆಯಾಗಿದೆ. ಮುಂದಿನ ದಿನಗಳಲ್ಲಿ ಡಿ.ಕೆ. ಶಿವಕುಮಾರ್ ಅವರು ಮುಖ್ಯಮಂತ್ರಿಗಳಾಗಲಿ ಎಂದು ಬಿಜೆಪಿ ಶಾಸಕ, ಮಾಜಿ ಸಚಿವರಾದ ಡಾ. ಅಶ್ವಥ್ ನಾರಾಯಣ ಅವರು ಶುಭ ಹಾರೈಸಿದರು.
ಬಡವರಿಗೆ ವಸತಿ ನೀಡುವಲ್ಲಿ ಎಲ್ಲಾ ಸರ್ಕಾರಗಳು ವಿಫಲವಾಗಿ, ಆಸ್ತಿ ತೆರಿಗೆ ಹೆಚ್ಚಳದ ಸಮಸ್ಯೆ, ಪರಿಷ್ಕೃರಣೆ ಮತ್ತು ರಸ್ತೆ ಒತ್ತುವರಿ ಸಮಸ್ಯೆಗಳನ್ನು ಪರಿಹರಿಸಿ ಎಂದು ಡಾ.ಎ.ಎನ್. ಅಶ್ವಥ್ ನಾರಾಯಣ ಅವರು ಉದ್ಘಾಟನಾ ಭಾಷಣದ ವೇಳೆ ಮನವಿ ಮಾಡಿದರು.
ನಗರದ ಶೇಷಾದ್ರಿಪುರಂನ ಶಿರೂರು ಮೈದಾನದಲ್ಲಿ ನಡೆದ “ಬಾಗಿಲಿಗೆ ಬಂತು ಸರ್ಕಾರ, ಸೇವೆಗೆ ಇರಲಿ ಸಹಕಾರ” ಸರಣಿ ಕಾರ್ಯಕ್ರಮದ 5 ನೇ ಆವೃತ್ತಿಯು ಸಂದರ್ಭದಲ್ಲಿ ಅವರು ಮಾತನಾಡುತ್ತಿದ್ದರು.