Skip to content
ದಿ ಬೆಂಗಳೂರು ಲೈವ್ | ಕನ್ನಡ ಸುದ್ದಿ, ಬ್ರೇಕಿಂಗ್ ಅಪ್ಡೇಟ್ಸ್

ದಿ ಬೆಂಗಳೂರು ಲೈವ್ | ಕನ್ನಡ ಸುದ್ದಿ, ಬ್ರೇಕಿಂಗ್ ಅಪ್ಡೇಟ್ಸ್

ಇದು ನಿಮ್ಮ ಧ್ವನಿ

Primary Menu
  • ಮುಖಪುಟ
  • ಪ್ರಾಯೋಜಿತ
  • ಬೆಂಗಳೂರು ನಗರ
  • ಅಪರಾಧ
  • ರಾಜಕೀಯ
  • English News
  • Delhi News
  • ಕರ್ನಾಟಕ
  • ಶಿಕ್ಷಣ
  • ಕ್ರೀಡೆ
  • Home
  • ಕರ್ನಾಟಕ
  • ಡಿ.ಉಮಾಪತಿಯವರಿಗೆ ವಡ್ಡರ್ಸೆ ರಘುರಾಮ ಶೆಟ್ಟಿ ಸಾಮಾಜಿಕ ನ್ಯಾಯ ಪತ್ರಿಕೋದ್ಯಮ ಪ್ರಶಸ್ತಿ
  • ಬೆಂಗಳೂರು ನಗರ
  • ಕರ್ನಾಟಕ

ಡಿ.ಉಮಾಪತಿಯವರಿಗೆ ವಡ್ಡರ್ಸೆ ರಘುರಾಮ ಶೆಟ್ಟಿ ಸಾಮಾಜಿಕ ನ್ಯಾಯ ಪತ್ರಿಕೋದ್ಯಮ ಪ್ರಶಸ್ತಿ

The Bengaluru Live December 5, 2024 6:28 PM
ಡಿ.ಉಮಾಪತಿಯವರಿಗೆ ವಡ್ಡರ್ಸೆ ರಘುರಾಮ ಶೆಟ್ಟಿ ಸಾಮಾಜಿಕ ನ್ಯಾಯ ಪತ್ರಿಕೋದ್ಯಮ ಪ್ರಶಸ್ತಿ

ಡಿ.ಉಮಾಪತಿಯವರಿಗೆ ವಡ್ಡರ್ಸೆ ರಘುರಾಮ ಶೆಟ್ಟಿ ಸಾಮಾಜಿಕ ನ್ಯಾಯ ಪತ್ರಿಕೋದ್ಯಮ ಪ್ರಶಸ್ತಿ

📗 ಈ ಸುದ್ದಿಯನ್ನು ಇಂಗ್ಲಿಷ್‌ನಲ್ಲಿ ಓದಿ

ಬೆಂಗಳೂರು (ಕರ್ನಾಟಕ ವಾರ್ತೆ) ಡಿ.5: ಕರ್ನಾಟಕ ಸರ್ಕಾರದ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ಪ್ರಸಕ್ತ ವರ್ಷದಿಂದ ಪ್ರಾರಂಭಿಸಿರುವ “ವಡ್ಡರ್ಸೆ ರಘುರಾಮಶೆಟ್ಟಿ ಸಾಮಾಜಿಕ ನ್ಯಾಯ ಪತ್ರಿಕೋದ್ಯಮ” ಪ್ರಶಸ್ತಿಗೆ ಹೆಸರಾಂತ ಹಿರಿಯ ಪತ್ರಕರ್ತರಾದ ಡಿ.ಉಮಾಪತಿಯವರನ್ನು ಆಯ್ಕೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ ಎಂದು ಇಲಾಖೆಯ ಆಯುಕ್ತರಾದ ಹೇಮಂತ್ ಎಂ.ನಿಂಬಾಳ್ಕರ್ ತಿಳಿಸಿದ್ದಾರೆ.

ಈ ಕುರಿತು ಪ್ರಕಟಣೆ ನೀಡಿರುವ ಅವರು, ಪತ್ರಿಕೋದ್ಯಮದಲ್ಲಿ ಸಾಮಾಜಿಕ ನ್ಯಾಯ ಕುರಿತು ವರದಿ ,ವಿಶೇಷ ಲೇಖನಗಳ ಪ್ರಕಟಣೆಯನ್ನು ಗುರುತಿಸಿ,ಗೌರವಿಸುವ ಉದ್ದೇಶದಿಂದ ಮುಖ್ಯಮಂತ್ರಿಯವರು 2024 ರ ಆಯವ್ಯಯದಲ್ಲಿ ಹಿರಿಯ ಪತ್ರಕರ್ತ “ವಡ್ಡರ್ಸೆ ರಘುರಾಮಶೆಟ್ಟಿ” ಅವರ ಹೆಸರಿನಲ್ಲಿ ಸಾಮಾಜಿಕ ನ್ಯಾಯ ಪತ್ರಿಕೋದ್ಯಮ ಪ್ರಶಸ್ತಿ ಘೋಷಿಸಿದ್ದರು. ನ್ಯಾ.ಅಶೋಕ ಹಿಂಚಿಗೇರಿ ಅವರ ಅಧ್ಯಕ್ಷತೆಯಲ್ಲಿ ರಚನೆಯಾಗಿದ್ದ ಪ್ರಶಸ್ತಿ ಆಯ್ಕೆ ಸಮಿತಿಯು ಒಮ್ಮತದಿಂದ ಹಿರಿಯ ಪತ್ರಕರ್ತ ಡಿ.ಉಮಾಪತಿಯವರನ್ನು “ವಡ್ಡರ್ಸೆ ರಘುರಾಮಶೆಟ್ಟಿ ಸಾಮಾಜಿಕ ನ್ಯಾಯ ಪತ್ರಿಕೋದ್ಯಮ ಪ್ರಶಸ್ತಿಗೆ ಆಯ್ಕೆ ಮಾಡಿತ್ತು.ಪ್ರಶಸ್ತಿಯು 2 ಲಕ್ಷ ರೂ.ನಗದು ಹಾಗೂ ಸ್ಮರಣಿಕೆ ಒಳಗೊಂಡಿದೆ.

ಡಿ.ಉಮಾಪತಿ ಅವರ ಪರಿಚಯ: ಮಾರ್ಚ್ 18,1959 ರಲ್ಲಿ ಚಿತ್ರದುರ್ಗ ಜಿಲ್ಲೆಯಲ್ಲಿ ಜನಿಸಿದ ಡಿ ಉಮಾಪತಿ ಅವರು ಮೈಸೂರು ಮಹಾರಾಜ ಕಾಲೇಜಿನಲ್ಲಿ ಆಂಗ್ಲ ಸಾಹಿತ್ಯ ಮತ್ತು ಪತ್ರಿಕೋದ್ಯಮದಲ್ಲಿ ಬಿ.ಎ, ಮೈಸೂರು ವಿಶ್ವವಿದ್ಯಾಲಯದಲ್ಲಿ ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿಯನ್ನು ಎರಡನೆ ರ‍್ಯಾಂಕ್ ಪಡೆದವರು.

ನ್ಯೂ ಇಂಡಿಯನ್ ಎಕ್ಸಪ್ರೆಸ್ ಸಮೂಹ ಸಂಸ್ಥೆಯ ಕನ್ನಡಪ್ರಭ, ಈ ಟಿವಿಯ ದೆಹಲಿ ಕರೆಸ್ಪಾಂಡೆಂಟ್ ಅಗಿ 27 ವರ್ಷಗಳ ಪರಿಣಾಮಕಾರಿ ವರದಿಗಳಿಂದ ಹೆಸರುಗಳಿಸಿದವರು.

ಪಾರ್ಲಿಮೆಂಟ್ ವರದಿ, ಚುನಾವಣಾ ವಿಶ್ಲೇಷಣೆಗಳು , ಸುಪ್ರೀಂ ಕೋರ್ಟು ಗಳಲ್ಲಿನ ನದಿ ನೀರು ನ್ಯಾಯಾಧೀಕರಣ ವ್ಯಾಜ್ಯಗಳ, ರಾಷ್ಟ್ರಮಟ್ಟದ ರಾಜಕೀಯ ಬೆಳವಣಿಗೆಗಳು, ಮತ್ತು ವಿದೇಶಾಂಗ ಸಚಿವರ ವಿದೇಶ ಪ್ರವಾಸದ ಜೊತೆಗೂಡಿ ರಾಜತಾಂತ್ರಿಕ ವರದಿಗಾರಿಕೆಯಲ್ಲಿ ವಿಶಿಷ್ಟ ಅನುಭವ ಇವರದ್ದಾಗಿದೆ.

ದೆಹಲಿಯಲ್ಲಿ ನೆಲೆಸಿರುವ ಡಿ. ಉಮಾಪತಿ ಅವರು ಆಂದೋಲನ , ರೈತ ಚಳವಳಿ, ವಿಜಯಕರ್ನಾಟಕ, ಪ್ರಜಾವಾಣಿ, ಸಂಯುಕ್ತ ಕರ್ನಾಟಕ, ವಾರ್ತಾಭಾರತಿ ಪತ್ರಿಕೆಗಳಿಗೆ ಅಂಕಣ ಬರಹಗಾರರಾಗಿಯೂ. ಪ್ರಸ್ತುತ ’ನ್ಯಾಯಪಥ(ಗೌರಿ ಮಿಡಿಯಾ)’ ಮತ್ತು ’ಈದಿನ’ ವೆಬ್ ಜರ್ನಲ್ ಸಂದರ್ಶಕ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.

’ದೆಹಲಿ ನೋಟ’ , ’ಪದಕುಸಿಯೇ ನೆಲವಿಲ್ಲ’ ಉಮಾಪತಿ ಅವರ ಎರಡು ಮಹತ್ವದ ಕೃತಿಗಳು ಪ್ರಕಟವಾಗಿವೆ.

About the Author

The Bengaluru Live

Administrator

Visit Website View All Posts

Post navigation

Previous: ಇವಿಎಂ ಬದಲು ಬ್ಯಾಲೆಟ್ ಪೇಪರ್ ಕೋರಿದ್ದ ಪಿಐಎಲ್ ಸುಪ್ರೀಂ ಕೋರ್ಟಲ್ಲಿ ವಜಾ
Next: ಬಿವಿಕೆ ಅಯ್ಯಂಗರ್ ರಸ್ತೆಯಲ್ಲಿ ವೈಟ್ ಟಾಪಿಂಗ್ ಕಾಮಗಾರಿಯನ್ನು ತ್ವರಿತವಾಗಿ ಪೂರ್ಣಗೊಳಿಸಿ: ತುಷಾರ್ ಗಿರಿ ನಾಥ್

Related Stories

ನಿಲ್ದಾಣದ ಪ್ಲಾಟ್‌ಫಾರ್ಮ್‌ನಲ್ಲಿ ಹೂವಿನ ಹಾರ ಹಾಕಿದ ನೀಲಿ-ಬೆಳ್ಳಿ ಬಣ್ಣದ ಮೆಟ್ರೋ ರೈಲಿನ ಪಕ್ಕ ಸುರಕ್ಷತಾ ಕವಚ, ಹೆಲ್ಮೆಟ್ ಧರಿಸಿ ನಿಂತಿರುವ ಯೋಜನಾ ಸಿಬ್ಬಂದಿ
  • ಬೆಂಗಳೂರು ನಗರ

ಬ್ಲೂ ಲೈನ್ ಫೇಸ್ 2ಎ ಮೆಟ್ರೋ ಪರೀಕ್ಷಾರ್ಥ ಸಂಚಾರ: ನವೆಂಬರ್ 24ರಂದು ಕೆ.ಆರ್. ಪುರಂನಿಂದ ದೊಡ್ಡನೆಕ್ಕುಂದಿಗೆ ರೈಲು

The Bengaluru Live November 23, 2026 7:26 PM
ಕರ್ನಾಟಕ ಲೋಕಾಯುಕ್ತ ಕಚೇರಿ — ಕಡತ ಚಿತ್ರ
  • ಕರ್ನಾಟಕ

‘ಬಿಗ್ ಬುಲೆಟಿನ್’ ಹೇಳಿಕೆ: ಪಬ್ಲಿಕ್ ಟಿವಿಯ ಎಚ್.ಆರ್. ರಂಗನಾಥ್, ಅರುಣ್ ಬಡಿಗೇರ್‌ಗೆ ಲೋಕಾಯುಕ್ತ ನೋಟಿಸ್

The Bengaluru Live November 23, 2026 7:14 PM
ರಸ್ತೆ ಸುರಕ್ಷತಾ ಪ್ರಾಧಿಕಾರದ ಸಭೆಯಲ್ಲಿ ಮೈಕ್‌ಗಳಿರುವ ಮೇಜಿನ ಬಳಿ ಕುಳಿತಿರುವ ಹಿರಿಯ ಅಧಿಕಾರಿಗಳು
  • ಕರ್ನಾಟಕ

ರಸ್ತೆ ಅಪಘಾತ ತಗ್ಗಿಸಲು ಎಐ ಕ್ಯಾಮೆರಾ; ತುರ್ತು ಚಿಕಿತ್ಸೆಗೆ ₹2.5 ಲಕ್ಷದವರೆಗೆ ನಗದುರಹಿತ ನೆರವು, ₹322 ಕೋಟಿ ಕ್ರಿಯಾ ಯೋಜನೆ

The Bengaluru Live November 23, 2026 5:59 PM

Latest Post

ಬ್ಲೂ ಲೈನ್ ಫೇಸ್ 2ಎ ಮೆಟ್ರೋ ಪರೀಕ್ಷಾರ್ಥ ಸಂಚಾರ: ನವೆಂಬರ್ 24ರಂದು ಕೆ.ಆರ್. ಪುರಂನಿಂದ ದೊಡ್ಡನೆಕ್ಕುಂದಿಗೆ ರೈಲು ನಿಲ್ದಾಣದ ಪ್ಲಾಟ್‌ಫಾರ್ಮ್‌ನಲ್ಲಿ ಹೂವಿನ ಹಾರ ಹಾಕಿದ ನೀಲಿ-ಬೆಳ್ಳಿ ಬಣ್ಣದ ಮೆಟ್ರೋ ರೈಲಿನ ಪಕ್ಕ ಸುರಕ್ಷತಾ ಕವಚ, ಹೆಲ್ಮೆಟ್ ಧರಿಸಿ ನಿಂತಿರುವ ಯೋಜನಾ ಸಿಬ್ಬಂದಿ
  • ಬೆಂಗಳೂರು ನಗರ

ಬ್ಲೂ ಲೈನ್ ಫೇಸ್ 2ಎ ಮೆಟ್ರೋ ಪರೀಕ್ಷಾರ್ಥ ಸಂಚಾರ: ನವೆಂಬರ್ 24ರಂದು ಕೆ.ಆರ್. ಪುರಂನಿಂದ ದೊಡ್ಡನೆಕ್ಕುಂದಿಗೆ ರೈಲು

November 23, 2026 7:26 PM
‘ಬಿಗ್ ಬುಲೆಟಿನ್’ ಹೇಳಿಕೆ: ಪಬ್ಲಿಕ್ ಟಿವಿಯ ಎಚ್.ಆರ್. ರಂಗನಾಥ್, ಅರುಣ್ ಬಡಿಗೇರ್‌ಗೆ ಲೋಕಾಯುಕ್ತ ನೋಟಿಸ್ ಕರ್ನಾಟಕ ಲೋಕಾಯುಕ್ತ ಕಚೇರಿ — ಕಡತ ಚಿತ್ರ
  • ಕರ್ನಾಟಕ

‘ಬಿಗ್ ಬುಲೆಟಿನ್’ ಹೇಳಿಕೆ: ಪಬ್ಲಿಕ್ ಟಿವಿಯ ಎಚ್.ಆರ್. ರಂಗನಾಥ್, ಅರುಣ್ ಬಡಿಗೇರ್‌ಗೆ ಲೋಕಾಯುಕ್ತ ನೋಟಿಸ್

November 23, 2026 7:14 PM
ರಸ್ತೆ ಅಪಘಾತ ತಗ್ಗಿಸಲು ಎಐ ಕ್ಯಾಮೆರಾ; ತುರ್ತು ಚಿಕಿತ್ಸೆಗೆ ₹2.5 ಲಕ್ಷದವರೆಗೆ ನಗದುರಹಿತ ನೆರವು, ₹322 ಕೋಟಿ ಕ್ರಿಯಾ ಯೋಜನೆ ರಸ್ತೆ ಸುರಕ್ಷತಾ ಪ್ರಾಧಿಕಾರದ ಸಭೆಯಲ್ಲಿ ಮೈಕ್‌ಗಳಿರುವ ಮೇಜಿನ ಬಳಿ ಕುಳಿತಿರುವ ಹಿರಿಯ ಅಧಿಕಾರಿಗಳು
  • ಕರ್ನಾಟಕ

ರಸ್ತೆ ಅಪಘಾತ ತಗ್ಗಿಸಲು ಎಐ ಕ್ಯಾಮೆರಾ; ತುರ್ತು ಚಿಕಿತ್ಸೆಗೆ ₹2.5 ಲಕ್ಷದವರೆಗೆ ನಗದುರಹಿತ ನೆರವು, ₹322 ಕೋಟಿ ಕ್ರಿಯಾ ಯೋಜನೆ

November 23, 2026 5:59 PM
ವಿಧಾನಸೌಧದಲ್ಲಿ ವಿಶ್ವಸಂಸ್ಥೆ ವಿಶೇಷ ವರದಿಗಾರ್ತಿ ಹೆಬಾ ಹಗ್ರಾಸ್ ಅವರಿಗೆ ಕರ್ನಾಟಕದ ವಿಕಲಚೇತನ ಸಬಲೀಕರಣ ಮಾದರಿ ಪ್ರಸ್ತುತ ವಿಧಾನಸೌಧದ ಸಂವಾದ ಸಭೆಯಲ್ಲಿ ಸಭಾ ಮೇಜಿನ ಬಳಿ ಕುಳಿತಿರುವ ಅಧಿಕಾರಿಗಳು ಮತ್ತು ಭೇಟಿ ನೀಡಿದ ವಿಶ್ವಸಂಸ್ಥೆ ವಿಶೇಷ ವರದಿಗಾರ್ತಿ
  • ಕರ್ನಾಟಕ

ವಿಧಾನಸೌಧದಲ್ಲಿ ವಿಶ್ವಸಂಸ್ಥೆ ವಿಶೇಷ ವರದಿಗಾರ್ತಿ ಹೆಬಾ ಹಗ್ರಾಸ್ ಅವರಿಗೆ ಕರ್ನಾಟಕದ ವಿಕಲಚೇತನ ಸಬಲೀಕರಣ ಮಾದರಿ ಪ್ರಸ್ತುತ

November 23, 2026 5:37 PM
ನವೆಂಬರ್ 24 ಮತ್ತು 25ರಂದು ದಕ್ಷಿಣ ಒಳನಾಡಿನಲ್ಲಿ ಗುಡುಗು, ಸಿಡಿಲು ಸಾಧ್ಯತೆ: ಐಎಂಡಿ ಮೋಡ ಕವಿದ ಆಕಾಶ ಮತ್ತು ಗ್ರಾಮೀಣ ಭೂದೃಶ್ಯದ ಎಐ ನಿರ್ಮಿತ ಪ್ರಾತಿನಿಧಿಕ ಚಿತ್ರ.
  • ಕರ್ನಾಟಕ

ನವೆಂಬರ್ 24 ಮತ್ತು 25ರಂದು ದಕ್ಷಿಣ ಒಳನಾಡಿನಲ್ಲಿ ಗುಡುಗು, ಸಿಡಿಲು ಸಾಧ್ಯತೆ: ಐಎಂಡಿ

November 23, 2026 5:34 PM
ನವೆಂಬರ್ 25ರಂದು ಹೆಣ್ಣೂರು, ಹೊರಮಾವು, ಹೊಯ್ಸಳ ನಗರ ಸುತ್ತಮುತ್ತ ವಿದ್ಯುತ್ ವ್ಯತ್ಯಯ ಬೆಂಗಳೂರಿನ ಬೆಸ್ಕಾಂ ಕಾರ್ಪೊರೇಟ್ ಕಚೇರಿಯ ಫೈಲ್ ಚಿತ್ರ
  • ಬೆಂಗಳೂರು ನಗರ

ನವೆಂಬರ್ 25ರಂದು ಹೆಣ್ಣೂರು, ಹೊರಮಾವು, ಹೊಯ್ಸಳ ನಗರ ಸುತ್ತಮುತ್ತ ವಿದ್ಯುತ್ ವ್ಯತ್ಯಯ

November 23, 2026 5:28 PM

ನೀವು ತಪ್ಪಿಸಿಕೊಂಡಿರಬಹುದು

ನಿಲ್ದಾಣದ ಪ್ಲಾಟ್‌ಫಾರ್ಮ್‌ನಲ್ಲಿ ಹೂವಿನ ಹಾರ ಹಾಕಿದ ನೀಲಿ-ಬೆಳ್ಳಿ ಬಣ್ಣದ ಮೆಟ್ರೋ ರೈಲಿನ ಪಕ್ಕ ಸುರಕ್ಷತಾ ಕವಚ, ಹೆಲ್ಮೆಟ್ ಧರಿಸಿ ನಿಂತಿರುವ ಯೋಜನಾ ಸಿಬ್ಬಂದಿ
  • ಬೆಂಗಳೂರು ನಗರ

ಬ್ಲೂ ಲೈನ್ ಫೇಸ್ 2ಎ ಮೆಟ್ರೋ ಪರೀಕ್ಷಾರ್ಥ ಸಂಚಾರ: ನವೆಂಬರ್ 24ರಂದು ಕೆ.ಆರ್. ಪುರಂನಿಂದ ದೊಡ್ಡನೆಕ್ಕುಂದಿಗೆ ರೈಲು

The Bengaluru Live November 23, 2026 7:26 PM
ಕರ್ನಾಟಕ ಲೋಕಾಯುಕ್ತ ಕಚೇರಿ — ಕಡತ ಚಿತ್ರ
  • ಕರ್ನಾಟಕ

‘ಬಿಗ್ ಬುಲೆಟಿನ್’ ಹೇಳಿಕೆ: ಪಬ್ಲಿಕ್ ಟಿವಿಯ ಎಚ್.ಆರ್. ರಂಗನಾಥ್, ಅರುಣ್ ಬಡಿಗೇರ್‌ಗೆ ಲೋಕಾಯುಕ್ತ ನೋಟಿಸ್

The Bengaluru Live November 23, 2026 7:14 PM
ರಸ್ತೆ ಸುರಕ್ಷತಾ ಪ್ರಾಧಿಕಾರದ ಸಭೆಯಲ್ಲಿ ಮೈಕ್‌ಗಳಿರುವ ಮೇಜಿನ ಬಳಿ ಕುಳಿತಿರುವ ಹಿರಿಯ ಅಧಿಕಾರಿಗಳು
  • ಕರ್ನಾಟಕ

ರಸ್ತೆ ಅಪಘಾತ ತಗ್ಗಿಸಲು ಎಐ ಕ್ಯಾಮೆರಾ; ತುರ್ತು ಚಿಕಿತ್ಸೆಗೆ ₹2.5 ಲಕ್ಷದವರೆಗೆ ನಗದುರಹಿತ ನೆರವು, ₹322 ಕೋಟಿ ಕ್ರಿಯಾ ಯೋಜನೆ

The Bengaluru Live November 23, 2026 5:59 PM
ವಿಧಾನಸೌಧದ ಸಂವಾದ ಸಭೆಯಲ್ಲಿ ಸಭಾ ಮೇಜಿನ ಬಳಿ ಕುಳಿತಿರುವ ಅಧಿಕಾರಿಗಳು ಮತ್ತು ಭೇಟಿ ನೀಡಿದ ವಿಶ್ವಸಂಸ್ಥೆ ವಿಶೇಷ ವರದಿಗಾರ್ತಿ
  • ಕರ್ನಾಟಕ

ವಿಧಾನಸೌಧದಲ್ಲಿ ವಿಶ್ವಸಂಸ್ಥೆ ವಿಶೇಷ ವರದಿಗಾರ್ತಿ ಹೆಬಾ ಹಗ್ರಾಸ್ ಅವರಿಗೆ ಕರ್ನಾಟಕದ ವಿಕಲಚೇತನ ಸಬಲೀಕರಣ ಮಾದರಿ ಪ್ರಸ್ತುತ

The Bengaluru Live November 23, 2026 5:37 PM

ನಮ್ಮ ಕುರಿತು

ಬೆಂಗಳೂರು ಲೈವ್ ಬೆಂಗಳೂರು ಮತ್ತು ಕರ್ನಾಟಕವನ್ನು ಕೇಂದ್ರೀಕರಿಸಿ ಇಂಗ್ಲಿಷ್ ಮತ್ತು ಕನ್ನಡದಲ್ಲಿ ಸುದ್ದಿ ಹಾಗೂ ಮಾಹಿತಿಯನ್ನು ಪ್ರಕಟಿಸುವ ಸ್ವತಂತ್ರ ಡಿಜಿಟಲ್ ಸುದ್ದಿ ಪ್ರಕಟಣೆಯಾಗಿದೆ. ಇದು ಫೆಬ್ರವರಿ 2020ರಿಂದ ಕಾರ್ಯನಿರ್ವಹಿಸುತ್ತಿದೆ.

ಉಪಯುಕ್ತ ಕೊಂಡಿಗಳು

  • ಬೆಂಗಳೂರು ಲೈವ್ ಕುರಿತು
  • ಸಂಪರ್ಕಿಸಿ
  • ಸಂಪಾದಕೀಯ ಮಾನದಂಡಗಳು ಮತ್ತು ತಿದ್ದುಪಡಿ ನೀತಿ
  • ಪ್ರಕಾಶಕರು, ಸಂಪಾದಕೀಯ ಹೊಣೆಗಾರಿಕೆ ಮತ್ತು ದೂರು ಪರಿಹಾರ
  • ಮಾಲೀಕತ್ವ ಮತ್ತು ಹಣಕಾಸು ಪಾರದರ್ಶಕತೆ
  • ನಮ್ಮೊಂದಿಗೆ ಜಾಹೀರಾತು ನೀಡಿ
  • ಗೌಪ್ಯತಾ ನೀತಿ
  • ಸೇವಾ ನಿಯಮಗಳು
  • ಪತ್ರಿಕಾ ಪ್ರಕಟಣೆ ಸಲ್ಲಿಸಿ

ಇತ್ತೀಚಿನ ಸುದ್ದಿಗಳು

  • ಬ್ಲೂ ಲೈನ್ ಫೇಸ್ 2ಎ ಮೆಟ್ರೋ ಪರೀಕ್ಷಾರ್ಥ ಸಂಚಾರ: ನವೆಂಬರ್ 24ರಂದು ಕೆ.ಆರ್. ಪುರಂನಿಂದ ದೊಡ್ಡನೆಕ್ಕುಂದಿಗೆ ರೈಲು
  • ‘ಬಿಗ್ ಬುಲೆಟಿನ್’ ಹೇಳಿಕೆ: ಪಬ್ಲಿಕ್ ಟಿವಿಯ ಎಚ್.ಆರ್. ರಂಗನಾಥ್, ಅರುಣ್ ಬಡಿಗೇರ್‌ಗೆ ಲೋಕಾಯುಕ್ತ ನೋಟಿಸ್
  • ರಸ್ತೆ ಅಪಘಾತ ತಗ್ಗಿಸಲು ಎಐ ಕ್ಯಾಮೆರಾ; ತುರ್ತು ಚಿಕಿತ್ಸೆಗೆ ₹2.5 ಲಕ್ಷದವರೆಗೆ ನಗದುರಹಿತ ನೆರವು, ₹322 ಕೋಟಿ ಕ್ರಿಯಾ ಯೋಜನೆ
  • ವಿಧಾನಸೌಧದಲ್ಲಿ ವಿಶ್ವಸಂಸ್ಥೆ ವಿಶೇಷ ವರದಿಗಾರ್ತಿ ಹೆಬಾ ಹಗ್ರಾಸ್ ಅವರಿಗೆ ಕರ್ನಾಟಕದ ವಿಕಲಚೇತನ ಸಬಲೀಕರಣ ಮಾದರಿ ಪ್ರಸ್ತುತ
©Copyright 2025 The Bengaluru Live All rights reserved. | MoreNews by AF themes.