
Dakshina Kannada district administration declared holiday for schools and colleges in 5 taluks
ಮಂಗಳೂರು :
ಕರಾವಳಿ ಜಿಲ್ಲೆ ದಕ್ಷಿಣ ಕನ್ನಡದಲ್ಲಿ ವ್ಯಾಪಕ ಮಳೆಯಾಗುತ್ತಿದೆ. ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ವ್ಯಾಪಕ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗೃತಾ ಕ್ರಮವಾಗಿ ಇಂದು ಮಂಗಳವಾರ ಮಂಗಳೂರು ಸೇರಿ 5 ತಾಲೂಕಿನ ಎಲ್ಲಾ ಶಾಲಾ ಕಾಲೇಜುಗಳಿಗೆ ಜಿಲ್ಲಾಡಳಿತ ರಜೆ ಘೋಷಣೆ ಮಾಡಿದೆ.
ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಹಾಗೂ ಹವಾಮಾನ ಇಲಾಖಾ ಮುನ್ಸೂಚನೆಯನ್ನು ಗಮನದಲ್ಲಿರಿಸಿ ಮಕ್ಕಳ ಸುರಕ್ಷತೆಯನ್ನು ಗಮನದಲ್ಲಿರಿಸಿಕೊಂಡು ಇಂದು ಮಂಗಳೂರು, ಮೂಲ್ಕಿ, ಉಲ್ಲಾಳ, ಮೂಡಬಿದರೆ ಹಾಗೂ ಬಂಟ್ವಾಳ ತಾಲೂಕುಗಳ ಎಲ್ಲಾ ಅಂಗನವಾಡಿ, ಪ್ರಾಥಮಿಕಶಾಲೆ, ಪ್ರೌಢಶಾಲೆ, ಪದವಿ ಪೂರ್ವ ಹಾಗೂ ಪದವಿ ಕಾಲೇಜು ಮುಂತಾದ ಶೈಕ್ಷಣಿಕ ಸಂಸ್ಥೆಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶ ಹೊರಡಿಸಿದ್ದಾರೆ.