Home ಬೆಂಗಳೂರು ನಗರ Davanagere Old Lady crawled for 5 km for Old Age Pension|ಮಾಶಾಸನಕ್ಕಾಗಿ 5...

Davanagere Old Lady crawled for 5 km for Old Age Pension|ಮಾಶಾಸನಕ್ಕಾಗಿ 5 ಕಿ.ಮೀ. ದೂರ ತೆವಳಿದ ವೃದ್ಧೆ; ಹೆಚ್.ಡಿ.ಕುಮಾರಸ್ವಾಮಿ ದುಃಖ

55
0
Davanagere Old Lady crawled for 5 km for Old Age Pension

ಗ್ಯಾರಂಟಿ ಕೊಟ್ಟ ಸರ್ಕಾರಕ್ಕೆ ಕರುಣೆ ಇಲ್ಲವೇ ಎಂದು ಪ್ರಶ್ನೆ

ಅಶಕ್ತರಿಗೆ ನಿಯಮಿತವಾಗಿ ಮಾಶಾಸನ ನೀಡುವಂತೆ ಆಗ್ರಹ

ಬೆಂಗಳೂರು:

ಮಾಶಾಸನಕ್ಕಾಗಿ 5 ಕಿ.ಮೀ. ದೂರ ತೆವಳಿಕೊಂಡು ಬಂದಿರುವ ದಾವಣಗೆರೆ ಜಿಲ್ಲೆಯ ಅಜ್ಜಿಯೊಬ್ಬರು ನಾಗರಿಕ ಸಮಾಜದ ಆತ್ಮಸಾಕ್ಷಿಯನ್ನೇ ಕಲಕಿದ್ದಾರೆ ಎಂದು ದುಃಖ, ಆಘಾತ ವ್ಯಕ್ತಪಡಿಸಿದ್ದಾರೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ (HD Kumaraswamy) ಅವರು.

ಈ ಬಗ್ಗೆ X ಜಾಲತಾಣದಲ್ಲಿ ಪೋಸ್ಟ್ ಮಾಡಿರುವ ಅವರು; ಇಂಥ ಆಸಕ್ತರನ್ನು ಸರಕಾರ ನಿರ್ಲಕ್ಷ್ಯ ಮಾಡಬಾರದು. ನಿಯಮಿತವಾಗಿ ಮಾಶಾಸನ ನೀಡಬೇಕು ಎಂದು ಒತ್ತಾಯ ಮಾಡಿದ್ದಾರೆ.

ರಾಜ್ಯ ಕಾಂಗ್ರೆಸ್ ಸರಕಾರ ಗ್ಯಾರೆಂಟಿಗಳನ್ನು ಕೊಟ್ಟು ಜನರ ಬದುಕು ಹಸನು ಮಾಡುತ್ತಿದ್ದೇವೆ ಎಂದು ಹೇಳುತ್ತಿದೆ. ಹಸನು ಮಾಡುವ ಮಾತು ಒಳ್ಳೆಯದೇ.. ಆದರೆ, ಜನಜೀವನ ಹೇಗೆ ಹಳಿ ತಪ್ಪುತ್ತಿದೆ ಎನ್ನುತ್ತಿರುವುದಕ್ಕೆ ಈ ದೃಶ್ಯವೇ ಜೀವಂತ ಸಾಕ್ಷಿ ಎಂದು ಅವರು ಬೇಸರ ವ್ಯಕ್ತಪಡಿಸಿದ್ದಾರೆ.

ಮಾಶಾಸನಕ್ಕಾಗಿ 5 ಕಿ.ಮೀ. ದೂರ ತೆವಳಿಕೊಂಡು ಬಂದಿರುವ ಈ ಅಜ್ಜಿ ನಾಗರಿಕ ಸಮಾಜದ ಆತ್ಮಸಾಕ್ಷಿಯನ್ನೇ ಕಲಕಿದ್ದಾರೆ. ಆ ಅಜ್ಜಿ ಅನುಭವಿಸಿರುವ ಯಾತನೆ ನಾವೆಲ್ಲರೂ ತಲೆ ತಗ್ಗಿಸುವಂತೆ ಮಾಡಿದೆ ಹಾಗೂ ಸರಕಾರದ ಕ್ಷಮತೆಯನ್ನೂ ಪ್ರಶ್ನಿಸಿದೆ. ಈ ಅಜ್ಜಿ ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ಕುಣಿಬೆಳಕೆರೆ ಗ್ರಾಮದವರು. ರಸ್ತೆಯ ಬದಿಯಲ್ಲಿ ತೆವಳಿಕೊಂಡು ಸಾಗಿದ ಅಜ್ಜಿಯ ದುಸ್ಥಿತಿಯನ್ನು ಕಂಡು ನನಗೆ ತೀವ್ರ ಆಘಾತ ಉಂಟಾಗಿದೆ ಎಂದು ಕುಮಾರಸ್ವಾಮಿ ಅವರು ಹೇಳಿದ್ದಾರೆ.

ನಾನು ಮುಖ್ಯಮಂತ್ರಿ ಆಗಿದ್ದಾಗ ವೃದ್ಧರು, ವಿಕಲಚೇತನರು, ವಿಧವೆಯರು, ದೇವದಾಸಿಯರು ಸೇರಿ ಸಮಾಜದ ವಿವಿಧ ದುರ್ಬಲ ಜನರಿಗೆ ಅನೇಕ ಕಾರ್ಯಕ್ರಮಗಳನ್ನು ಕೊಟ್ಟು, ಅವರ ಆರ್ಥಿಕ ಸಬಲೀಕರಣಕ್ಕೆ ಕ್ರಮ ವಹಿಸಿದ್ದೆ. ವೃದ್ದಾಪ್ಯ ವೇತನ ವಿಕಲಚೇತನರ  ಮಾಶಾಸನವನ್ನು ಏರಿಕೆ ಮಾಡಿದ್ದೆ. ಕಷ್ಟದಲ್ಲಿರುವವರಿಗೆ ಆಸರೆ ಕೊಡುವುದು ಆಡಳಿತ ನಡೆಸುವವರ ಕರ್ತವ್ಯ. ಗೃಹಲಕ್ಷ್ಮಿಯರಿಗೆ ₹2000 ಕೊಡುತ್ತೀರಿ ಸರಿ, ಆದರೆ ಇಂತಹ ಅಸಂಖ್ಯಾತ ವೃದ್ಧ ಅಮ್ಮಂದಿರ ಪರಿಸ್ಥಿತಿ ಏನು? ಸರಕಾರಕ್ಕೆ ಕನಿಕರ ಎನ್ನುವುದು ಇಲ್ಲವೇ? ಎಂದು ಸರಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ ಅವರು.

ರಾಜ್ಯ ಸರಕಾರ ಗ್ಯಾರಂಟಿಗಳನ್ನು ಜಾರಿ ಮಾಡಿದೆ, ಸಂತೋಷ. ಆದರೆ; ಬಡ, ಅಶಕ್ತ ಮಹಿಳೆಯರಿಗೆ ನೆರವಾಗುವ ವೃದ್ಯಾಪ್ಯ ವೇತನ, ವಿಧವಾ ವೇತನವನ್ನು ಸಕಾಲಕ್ಕೆ ಮತ್ತು ನಿಯಮಿತವಾಗಿ ಬಿಡುಗಡೆ ಮಾಡಬೇಕು. ಮಾಶಾಸನಕ್ಕಾಗಿ ಈ ಅಜ್ಜಿ 5 ಕಿ.ಮೀ. ತೆವಳಿಕೊಂಡು ಬಂದ ದೃಶ್ಯಗಳು ಪುನರಾವರ್ತನೆ ಆಗಬಾರದು. ಕೂಡಲೇ ಆ ತಾಯಿಗೆ ಸರಕಾರ ಎಲ್ಲ ಸೌಲಭ್ಯಗಳನ್ನು ಕೂಡಲೇ ಒದಗಿಸಬೇಕು. ಕಣ್ತೆರೆದು ನೋಡಲಿ ಕಾಂಗ್ರೆಸ್ ಸರಕಾರ ಎಂದು ಅವರು ಒತ್ತಾಯ ಮಾಡಿದ್ದಾರೆ.

LEAVE A REPLY

Please enter your comment!
Please enter your name here