ದಾವಣಗೆರೆ:
ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರವೆಸಗಿದ ಆರೋಪಿಗೆ 20 ವರ್ಷ ಜೈಲು ಶಿಕ್ಷೆ 20,000 ರೂ ದಂಡ ವಿದಿಸಿ ನ್ಯಾಯಾಲಯ ಅದೇಶ ನೀಡಿದೆ.
ಮಗಳು ಕಾಣೆಯಾದ ಬಗ್ಗೆ ಮಹಿಳಾ ಠಾಣೆಯಲ್ಲಿ ತಂದೆ ದೂರು ದಾಖಲಿಸಿದ್ದರು. ಸದರಿ ಪ್ರಕರಣದಲ್ಲಿ ತನಿಖೆ ಕೈಗೊಂಡು ಬಾಲಕಿಯನ್ನು ಪತ್ತೆ ಮಾಡಲಾಗಿ, ಆರೋಪಿ ದುಗ್ಗೇಶ ಬಾಲಕಿ ಅಪ್ರಾಪ್ತ ವಯಸ್ಸಿನವಳಾಗಿದ್ದರೂ ಸಹ ಮದುವೆಯಾಗುವುದಾಗಿ ನಂಬಿಸಿ, ಪುಸಲಾಯಿಸಿ ಶಿವಮೊಗ್ಗಕ್ಕೆ ಕರೆದುಕೊಂಡು ಹೋಗಿ ಬಲವಂತವಾಗಿ ಅತ್ಯಾಚಾರ ಮಾಡಿರುವುದಾಗಿ ವಿಚಾರಣೆ ವೇಳೆ ತಿಳಿದು ಬಂದಿತ್ತು. ತನಿಖಾಧಿಕಾರಿ ಶಿಲ್ಪಾ ವೈಎಸ್ ಪ್ರಕರಣದಲ್ಲಿ ಪೋಕ್ಸೋ ಕಾಯ್ದೆ ಅಡಿ ಆರೋಪಿ ದುಗ್ಗೇಶ ವಿರುದ್ದ ನ್ಯಾಯಾಲಯಕ್ಕೆ ದೋಷರೋಪಣಾ ಪಟ್ಟಿಯನ್ನು ಸಲ್ಲಿಸಿದ್ದರು.
ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಎಫ್.ಟಿ.ಎಸ್.ಸಿ-1 ನ್ಯಾಯಾಲಯ ದಾವಣಗೆರೆ ನ್ಯಾಯಾಲಯದಲ್ಲಿ ವಿಚಾರಣೆ ನಡೆಸಿದ ನ್ಯಾಯಾಧೀಶರಾದ ಶ್ರೀಪಾದ್ .ಎನ್ ರವರು ಪ್ರಕರಣದ ಆರೋಪಿ ದುಗ್ಗೇಶ ಮೇಲೆ ಆರೋಪ ಸಾಬೀತಾಗಿದ್ದರಿಂದ ಆರೋಪಿತನಿಗೆ 20 ವರ್ಷ ಶಿಕ್ಷೆ ಹಾಗೂ 20,000 ರೂ ದಂಡ ವಿಧಿಸಿದ್ದು ಮತ್ತು ಸಂತ್ರಸ್ಥೆಗೆ ಸರ್ಕಾರದಿಂದ 5 ಲಕ್ಷ ರೂ ಪರಿಹಾರ ನೀಡುವಂತೆ ತೀರ್ಪು ನೀಡಿದೆ.
ಪ್ರಕರಣದಲ್ಲಿ ಸಂತ್ರಸ್ಥೆ ಪರವಾಗಿ ಸರ್ಕಾರಿ ವಕೀಲರಾದ ಸುನಂದಾ ಮಡಿವಾಳರ್ ರವರು ನ್ಯಾಯ ಮಂಡನೆ ಮಾಡಿದ್ದರು.