ಡಿಸಿಇಟಿ 2026: ಅರ್ಜಿ ಸಲ್ಲಿಕೆ ಅವಧಿ ಏಪ್ರಿಲ್ 10ರವರೆಗೆ ವಿಸ್ತರಣೆ
ಬೆಂಗಳೂರು: ಡಿಪ್ಲೊಮಾ ವಿದ್ಯಾರ್ಥಿಗಳಿಗೆ ಲ್ಯಾಟರಲ್ ಎಂಟ್ರಿ ಮೂಲಕ ಎಂಜಿನಿಯರಿಂಗ್ ದ್ವಿತೀಯ ವರ್ಷ (ಮೂರನೇ ಸೆಮಿಸ್ಟರ್) ಪ್ರವೇಶಕ್ಕೆ ನಡೆಸಲಾಗುವ ಡಿಸಿಇಟಿ 2026 ಪರೀಕ್ಷೆಗೆ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕವನ್ನು ಏಪ್ರಿಲ್ 10ರವರೆಗೆ ವಿಸ್ತರಿಸಲಾಗಿದೆ.
ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್. ಪ್ರಸನ್ನ ಅವರು ಈ ಕುರಿತು ಮಾಹಿತಿ ನೀಡಿದ್ದು, ವಿದ್ಯಾರ್ಥಿಗಳ ಮನವಿಯನ್ನು ಪರಿಗಣಿಸಿ ದಿನಾಂಕ ವಿಸ್ತರಣೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ.
ಅರ್ಜಿ ಶುಲ್ಕ ಪಾವತಿಸಲು ಸಹ ಏಪ್ರಿಲ್ 10 ಕೊನೆಯ ದಿನವಾಗಿದ್ದು, ಅಭ್ಯರ್ಥಿಗಳು ನಿಗದಿತ ದಿನಾಂಕದೊಳಗೆ ಅರ್ಜಿ ಸಲ್ಲಿಸುವಂತೆ ಸೂಚಿಸಲಾಗಿದೆ.
ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಕೆಇಎ ಅಧಿಕೃತ ವೆಬ್ಸೈಟ್ನ್ನು ಪರಿಶೀಲಿಸಲು ತಿಳಿಸಿದ್ದಾರೆ.
