ಬೆಂಗಳೂರು/ಉತ್ತರಪ್ರದೇಶ : ಉತ್ತರ ಪ್ರದೇಶದ ಪ್ರಯಾಗ್ ರಾಜ್ ನ ಕುಂಭಮೇಳದಲ್ಲಿ ಡಿಸಿಎಂ ಡಿ ಕೆ ಶಿವಕುಮಾರ್ ಅವರು ಪತ್ನಿ ಉಷಾ ಅವರೊಂದಿಗೆ ಪುಣ್ಯಸ್ನಾನ ಮಾಡಿದರು.



ಇದೇ ವೇಳೆ ನೊಣವಿನಕೆರೆ ಕಾಡಸಿದ್ದೇಶ್ವರ ಮಠದ ಕರಿವೃಷಭ ರಾಜದೇಶಿಕೇಂದ್ರ ಶಿವಯೋಗಿ ಶಿವಾಚಾರ್ಯ ಮಹಾಸ್ವಾಮಿಗಳು ಸಹ ಅಲ್ಲೇ ಉಪಸ್ಥಿತರಿದ್ದರು.
ಕುಂಭಮೇಳಕ್ಕೆ ಆಗಮಿಸಿದ ಡಿಸಿಎಂ ಡಿ ಕೆ ಶಿವಕುಮಾರ್ ಹಾಗೂ ಅವರ ಪತ್ನಿ ಉಷಾ ಅವರನ್ನು ಉತ್ತರ ಪ್ರದೇಶ ಕೈಗಾರಿಕೆ ಸಚಿವ ನಂದಗೋಪಾಲ ಗುಪ್ತಾ ಅವರು ಪ್ರಯಾಗ್ ರಾಜ್ ವಿಮಾನ ನಿಲ್ದಾಣದಲ್ಲಿ ಭಾನುವಾರ ಬರಮಾಡಿಕೊಂಡರು.