Home ಬೆಂಗಳೂರು ನಗರ ಬೆಂಗಳೂರಿಗೆ ಹೊಂದಿಕೊಂಡಿರುವ 110 ಹಳ್ಳಿಗಳಿಗೆ ಕಾವೇರಿ ನೀರು ಸಂಪರ್ಕ ಅಭಿಯಾನಕ್ಕೆ ಡಿಸಿಎಂ ಚಾಲನೆ

ಬೆಂಗಳೂರಿಗೆ ಹೊಂದಿಕೊಂಡಿರುವ 110 ಹಳ್ಳಿಗಳಿಗೆ ಕಾವೇರಿ ನೀರು ಸಂಪರ್ಕ ಅಭಿಯಾನಕ್ಕೆ ಡಿಸಿಎಂ ಚಾಲನೆ

11
0

ಬೆಂಗಳೂರು: ಮಹಾನಗರಿ ಸಿಲಿಕಾನ್‌ ಸಿಟಿ ಬೆಂಗಳೂರಿಗೆ ಹೊಂದಿಕೊಂಡಿರುವ 110 ಹಳ್ಳಿಗಳಿಗೆ ಕಾವೇರಿ ನೀರು ಸಂಪರ್ಕ ಅಭಿಯಾನ, ಮಳೆ ನೀರು ಕೊಯ್ಲು ಜಾಗೃತಿ ಅಭಿಯಾನ, ವರುಣ ಮಿತ್ರ ತರಬೇತಿ ಕಾರ್ಯಕ್ರಮಕ್ಕೆ  ನಗರಾಭಿವೃದ್ಧಿ ಸಚಿವ ಡಿಸಿಎಂ ಡಿ ಕೆ ಶಿವಕುಮಾರ್ ಅವರು ಚಾಲನೆ ನೀಡಿದರು.

ಗುರುವಾರ ವಿಧಾನಸೌಧ ಮೆಟ್ಟಿಲುಗಳ ಮುಂಭಾಗ  110 ಹಳ್ಳಿಗಳಿಗೆ ಕಾವೇರಿ ನೀರು ಸಂಪರ್ಕ ಅಭಿಯಾನ, ಮಳೆ ನೀರು ಕೊಯ್ಲು ಜಾಗೃತಿ ಅಭಿಯಾನ, ವರುಣ ಮಿತ್ರ ತರಬೇತಿ ಕಾರ್ಯಕ್ರಮಕ್ಕೆ  ಅಧಿಕೃತವಾಗಿ ಗಿಡಗಳಿಗೆ ನೀರು ಹಾಕುವ ಮೂಲಕ ಚಾಲಕೆ ನೀಡಿದರು.

ಈ ವೇಳೆ  ಬೆಂಗಳೂರು ಜಲ ಮಂಡಳಿ (ಬಿಡಬ್ಲ್ಯೂ ಎಸ್ಎಸ್ ಬಿ) ವ್ಯವಸ್ಥಾಪಕ ನಿರ್ದೇಶಕ ರಾಮಪ್ರಶಾತ್ ಮನೋಹರ್, ಬಿಡಿಎ ಆಯುಕ್ತ ಜಯರಾಮ್, ಬಿಬಿಎಂಪಿ ಕಮಿಷನರ್ ತುಷಾರ್ ಗಿರಿನಾಥ್, ಬಿಎಂಆರ್ಡಿಎ ಎಂಡಿ, ಡಿಸಿಎಂ ಕಾರ್ಯದರ್ಶಿ ರಾಜೇಂದ್ರ ಚೋಳನ್, ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here