
pic source: twitter handle Nasir Khuehami (ناصر کہویہامی) @NasirKhuehami
ಬೆಂಗಳೂರು:
ಉಕ್ರೇನ್ ನಲ್ಲಿ ಮೃತಪಟ್ಟ ಹಾವೇರಿ ಜಿಲ್ಲೆಯ ಯುವಕ ನವೀನ್ ಅವರ ತಂದೆ ಶೇಖರಗೌಡ ಅವರೊಂದಿಗೆ ದೂರವಾಣಿ ಮಾತನಾಡಿದ ಮುಖ್ಯಮಂತ್ರಿಗಳು, ಅವರ ಕುಟುಂಬಕ್ಕೆ ಸಾಂತ್ವನ ಹೇಳಿದರು.
ನವೀನ್ ಪಾರ್ಥಿವ ಶರೀರವನ್ನು ರಾಜ್ಯಕ್ಕೆ ತರಲು ಸಾಧ್ಯವಿರುವ ಎಲ್ಲ ಪ್ರಯತ್ನ ಮಾಡುವುದಾಗಿ ತಿಳಿಸಿದ ಅವರು, ಈ ಸಂಬಂಧ ವಿದೇಶಾಂಗ ಸಚಿವಾಲಯದ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಲಾಗುತ್ತಿದೆ ಎಂದು ತಿಳಿಸಿದರು.
ಮಗನ ಬಗ್ಗೆ ಮಾಹಿತಿ ನೀಡಿದ ಶೇಖರಗೌಡ ಗ್ಯಾನ ಗೌಡರ್ ಇಂದು ಮುಂಜಾನೆ ತಮ್ಮ ಮಗ ದೂರವಾಣಿ ಕರೆ ಮಾಡಿದ್ದ. ಪ್ರತಿ ದಿನ ಎರಡು ಮೂರು ಬಾರಿ ದೂರವಾಣಿ ಮೂಲಕ ಮಾತಾಡುತ್ತಿದ್ದ ಎಂದು ವಿವರಿಸಿದರು.
ಈ ಸಂಬಂಧ ವಿದೇಶಾಂಗ ಸಚಿವಾಲಯದ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಲಾಗುತ್ತಿದ್ದು, ಉಳಿದ ವಿಧ್ಯಾರ್ಥಿಗಳನ್ನು ಸುರಕ್ಷಿತವಾಗಿ ಕರೆತರಲು ಎಲ್ಲ ರೀತಿಯ ಪ್ರಯತ್ನ ನಡೆಸಲಾಗುತ್ತಿದೆ.
— Basavaraj S Bommai (@BSBommai) March 1, 2022
2/2
ನವೀನ್ ಸಾವು ಅತ್ಯಂತ ದುರಾದೃಷ್ಟಕರ. ಭಗವಂತ ನವೀನ್ ಆತ್ಮಕ್ಕೆ ಶಾಂತಿ ನೀಡಲಿ. ಕುಟುಂಬದವರಿಗೆ ಈ ನೋವು ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುವು ದಾಗಿ ಮುಖ್ಯಮಂತ್ರಿಗಳು ತಿಳಿಸಿದ್ದಾರೆ.