Home ಬೆಳಗಾವಿ ಪುಂಡಾಟಿಕೆ ತಡೆಗೆ ನಿರ್ಣಾಯಕ ಕ್ರಮ: ಸಿಎಂ

ಪುಂಡಾಟಿಕೆ ತಡೆಗೆ ನಿರ್ಣಾಯಕ ಕ್ರಮ: ಸಿಎಂ

61
0
Decisive action to stop vandalism: CM Bommai

ಬೆಳಗಾವಿ:

ಪುಂಡಾಟಿಕೆ ತಡೆಗಟ್ಟಲು ನಿರ್ಣಾಯಕ ಕ್ರಮಗಳನ್ನು ಕೈಗೊಂಡು ಕಾನೂನು ಸುವ್ಯವಸ್ಥೆ ಹಾಳು ಮಾಡುವವರ ವಿರುದ್ಧ ಕಠಿಣ ಕ್ರಮಗಳನ್ನು ತೆಗೆದುಕೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಬೆಳಗಾವಿಯಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು ಕರ್ನಾಟಕದಲ್ಲಿ ಪುಂಡಾಟಿಕೆ ಮಾಡಿದ ಪ್ರಮುಖರನ್ನು ಬಂಧಿಸಲಾಗಿದೆ. ಪುಂಡಾಟಿಕೆ ಮುಂದುವರೆಸಲು ಅವಕಾಶ ನೀಡುವುದಿಲ್ಲ ಎಂದರು.

ಮಹಾರಾಷ್ಟ್ರ ಸರ್ಕಾದೊಂದಿಗೆ ನಮ್ಮ ರಾಜ್ಯದ ಗೃಹ ಕಾರ್ಯದರ್ಶಿಗಳು ಹಾಗೂ ಪೊಲೀಸ್ ಮಹಾನಿರ್ದೇಶಕರು ಮಾತನಾಡಿ ಕನ್ನಡಿಗರು ಹಾಗೂ ಕನ್ನಡಿಗರ ಆಸ್ತಿ ಹಾಗೂ ಸರ್ಕಾರಿ ವಾಹನಗಳ ರಕ್ಷಣೆಗೆ ಕ್ರಮಕೈಗೊಳ್ಳಯುವಂತೆ ಮನವಿ ಮಾಡಿದ್ದಾರೆ ಎಂದರು.

LEAVE A REPLY

Please enter your comment!
Please enter your name here