ನಗರಾಭಿವೃದ್ಧಿ ಇಲಾಖೆಯಿಂದ ಸಾರಿಗೆ ಇಲಾಖೆಗೆ ದೀಪಾ ಚೋಳನ್ ವರ್ಗಾವಣೆ
ಬೆಂಗಳೂರು, ಜೂನ್ 7: ಹಿರಿಯ ಐಎಎಸ್ ಅಧಿಕಾರಿ ದೀಪಾ ಚೋಳನ್ (2008 ಬ್ಯಾಚ್) ಅವರನ್ನು ನಗರಾಭಿವೃದ್ಧಿ ಇಲಾಖೆಯಿಂದ ವರ್ಗಾವಣೆ ಮಾಡಿ ಸಾರಿಗೆ ಇಲಾಖೆಯ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿದೆ.
ನಗರಾಭಿವೃದ್ಧಿ ಇಲಾಖೆ (ಯುಡಿ ಮತ್ತು ಮುನಿಸಿಪಾಲಿಟೀಸ್) ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಅವರು, ಇದೀಗ ಡಾ. ಪ್ರಸಾದ್ ಎನ್.ವಿ. ಅವರ ಸ್ಥಾನಕ್ಕೆ ಸಾರಿಗೆ ಇಲಾಖೆಯಲ್ಲಿ ಜವಾಬ್ದಾರಿ ವಹಿಸಿಕೊಳ್ಳಲಿದ್ದಾರೆ.
ರಾಜ್ಯ ಸರ್ಕಾರದ ಆಡಳಿತಾತ್ಮಕ ಪುನರ್ವಿನ್ಯಾಸದ ಭಾಗವಾಗಿ ಈ ವರ್ಗಾವಣೆ ನಡೆದಿದೆ.
