ನವ ದೆಹಲಿ: ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಬಂಧಿತ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಗೆ ಸುಪ್ರೀಂಕೋರ್ಟ್ ಜಾಮೀನು ಮಂಜೂರು ಮಾಡಿದೆ.
ನ್ಯಾಯಮೂರ್ತಿ ಸೂರ್ಯ ಕಾಂತ್ ಮತ್ತು ನ್ಯಾಯಮೂರ್ತಿ ಉಜ್ಜಲ್ ಭೂಯಾನ್ ಅವರನ್ನೊಳಗೊಂಡ ಸುಪ್ರೀಂಕೋರ್ಟ್ ಪೀಠವು ಸೆ.5ರಂದು ಈ ಕುರಿತು ತೀರ್ಪನ್ನು ಕಾಯ್ದಿರಿಸಿತ್ತು. ಕೇಜ್ರಿವಾಲ್ ಭ್ರಷ್ಟಾಚಾರ ಪ್ರಕರಣದಲ್ಲಿ ಸಿಬಿಐನಿಂದ ಜಾಮೀನು ನಿರಾಕರಣೆ ಮತ್ತು ಬಂಧನವನ್ನು ಪ್ರಶ್ನಿಸಿ ಎರಡು ಪ್ರತ್ಯೇಕ ಅರ್ಜಿಗಳನ್ನು ಸಲ್ಲಿಸಿದ್ದರು.
ಸಿಬಿಐ ನಡೆಸಿದ ಬಂಧನವು ನ್ಯಾಯಸಮ್ಮತವಲ್ಲ ಎಂದು ಹೇಳಿರುವ ಸುಪ್ರೀಂ ಕೋರ್ಟ್,ದೀರ್ಘಾವಧಿಯ ಜೈಲುವಾಸವು ಸ್ವಾತಂತ್ರ್ಯದ ಹರಣಕ್ಕೆ ಸಮಾನವಾಗಿದೆ ಎಂದು ಹೇಳಿದೆ.
ಆದರೆ, ಜೂನ್ 26 ರಂದು ಸಿಬಿಐ ಕೇಜ್ರಿವಾಲ್ ಅವರನ್ನು ಬಂಧಿಸಿರುವುದು ಮಾನ್ಯವಾಗಿದೆ ಮತ್ತು ಸಂಬಂಧಿತ ಕಾರ್ಯವಿಧಾನದ ಕಾನೂನುಗಳಿಗೆ ಅನುಸಾರವಾಗಿದೆ ಎಂದು ಪೀಠವು ಪರಿಗಣಿಸಿದೆ.
ಇದಲ್ಲದೆ ಅಬಕಾರಿ ನೀತಿ ಪ್ರಕರಣದಲ್ಲಿ ದಿಲ್ಲಿ ಸಿಎಂ ಅವರನ್ನು ಸಿಬಿಐ ಬಂಧಿಸಿದ ಸಮಯ ಮತ್ತು ವಿಧಾನದ ಕುರಿತು ಭುಯಾನ್ ಅವರು ತಮ್ಮ ತೀರ್ಪಿನಲ್ಲಿ ಪ್ರಶ್ನೆಗಳನ್ನು ಎತ್ತಿದ್ದರು.