Home ಬೆಂಗಳೂರು ನಗರ ಸಫಾಯಿ ಕರ್ಮಚಾರಿಗಳಿಗೆ ವಸತಿ ಸೌಲಭ್ಯ ಮೀಸಲಿಡಿ: ಶಿವಣ್ಣ ಎಂ. ಕೋಟೆ

ಸಫಾಯಿ ಕರ್ಮಚಾರಿಗಳಿಗೆ ವಸತಿ ಸೌಲಭ್ಯ ಮೀಸಲಿಡಿ: ಶಿವಣ್ಣ ಎಂ. ಕೋಟೆ

18
0
Demand to Reserve residential quarters for Safai Karmacharias in Karnataka
Advertisement
bengaluru

ಬೆಂಗಳೂರು:

ವಿವಿಧ ವಸತಿ ನಿಗಮಗಳಲ್ಲಿ ಸಫಾಯಿ ಕರ್ಮಚಾರಿಗಳಿಗೆ ವಸತಿ ಸೌಲಭ್ಯ ಮೀಸಲಿರಿಸುವಂತೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸುವಂತೆ ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿಗಳ ಆಯೋಗದ ಅಧ್ಯಕ್ಷರಾದ ಶಿವಣ್ಣ ಎಂ ಕೋಟೆ ಅವರು ಬೆಂಗಳೂರು ನಗರ ಜಿಲ್ಲಾಧಿಕಾರಿಗಳಾದ ಜೆ ಮಂಜುನಾಥ್ ಅವರನ್ನು ಕೋರಿದರು.

ಇಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸಫಾಯಿ ಕರ್ಮಚಾರಿಗಳ ಕಾಯ್ದೆ ಮತ್ತು ನಿಯಮಗಳ ಪ್ರಕಾರ ಪುನರ್ವಸತಿ ಕಾರ್ಯಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಸಫಾಯಿ ಕರ್ಮಚಾರಿಗಳಿಗೆ ಪುನರ್ವಸತಿ ಕಲ್ಪಿಸಲು ಅನುಕೂಲವಾಗುವಂತೆ ಗುರುತಿನ ಚೀಟಿಗಳನ್ನು ನೀಡಲಾಗುತ್ತಿದ್ದು ಈಗಾಗಲೇ ಗುರುತಿಸಲ್ಪಟ್ಟ ಒಟ್ಟು 201 ಸಫಾಯಿ ಕರ್ಮಚಾರಿಗಳಲ್ಲಿ ಸಾಂಕೇತಿಕವಾಗಿ 10 ಫಲಾನುಭವಿಗಳಿಗೆ ಅವರು ಇಂದು ಗುರುತಿನ ಚೀಟಿಗಳನ್ನು ವಿತರಿಸಿದರು.

bengaluru bengaluru

ಈ ಸಮುದಾಯವನ್ನು ಮುಖ್ಯವಾಹಿನಿಗೆ ತರಲು ಗುರುತಿನ ಚೀಟಿ ನೀಡುವುದರಿಂದ ಸರ್ಕಾರದಿಂದ ಯಾವುದೇ ಸೌಲಭ್ಯಗಳನ್ನು ಪಡೆಯಲು ಅನುಕೂಲವಾಗಲಿದೆ ಎಂದರು.

ಜಿಲ್ಲಾಧಿಕಾರಿಗಳಾದ ಜೆ. ಮಂಜುನಾಥ್ ರವರು ಅಂಬೇಡ್ಕರ್ ವಸತಿ ಯೋಜನೆಯಡಿ ಮನೆ ನಿರ್ಮಾಣ ಹಾಗೂ ರಾಜೀವ್ ಗಾಂಧಿ ವಸತಿ ಯೋಜನೆ ಮತ್ತು ಮುಖ್ಯಮಂತ್ರಿ ಬಹುಮಹಡಿ ಕಟ್ಟಡದಲ್ಲಿ ನಿರ್ಮಾಣವಾಗುತ್ತಿರುವ ಮನೆಗಳಲ್ಲಿ ಗುರುತಿನ ಚೀಟಿ ಹೊಂದಿರುವವರಿಗೆ ಮನೆಗಳನ್ನು ನೀಡಲು ಮೀಸಲು ಕಲ್ಪಿಸಲು ಪ್ರಯತ್ನಿಸುವುದಾಗಿ ಭರವಸೆ ನೀಡಿದರು.

Demand to Reserve residential quarters for Safai Karmacharias in Karnataka

ಸಫಾಯಿ ಕರ್ಮಚಾರಿಗಳ ಪುನರ್ವಸತಿ ಹಾಗೂ ಸ್ವಯಂ ಉದ್ಯೋಗಕ್ಕಾಗಿ ಸರ್ಕಾರ ರೂ.50,000 ಗಳ ವರೆಗಿನ ನೇರ ಸಾಲ ಸೌಲಭ್ಯವನ್ನು ನೀಡುತ್ತಿದೆ. ಆದರೆ ಇದು ಅತ್ಯಂತ ಸಣ್ಣ ಮೊತ್ತವಾಗಿದ್ದು, ಕೇವಲ ಇದರಿಂದ ಅವರು ಹೊಸ ಜೀವನ ಕಟ್ಟಿಕೊಳ್ಳಲು ಸಾದ್ಯವಾಗುವುದಿಲ್ಲ. ಅಲ್ಲದೇ, ಒಮ್ಮೆ ಸಾಲ ಪಡೆದಲ್ಲಿ ಮತ್ತೊಮ್ಮೆ ಸಾಲಕ್ಕೆ ಅರ್ಜಿ ಸಲ್ಲಿಸಲು ಅವರು ಅರ್ಹರಿರುವುದಿಲ್ಲ. ಇದು ಪರೋಕ್ಷವಾಗಿ ಅವರಿಗೆ ಅಭಿವೃದ್ಧಿಯಿಂದ ವಂಚಿತರಾಗಿಸಲಿದೆ ಎಂದು ಅವರು ಅಭಿಪ್ರಾಯ ಪಟ್ಟರು. ಕನಿಷ್ಠ ರೂ.5 ಲಕ್ಷ ರೂಗಳ ಸಾಲ ನೀಡಬೇಕೆಂದು ಶಿವಣ್ಣ ರವರು ಸಲಹೆ ನೀಡಿದರು.

ಪುನರ್ವಸತಿ ಭಾಗವಾದ ಕೌಶಲ್ಯ ತರಬೇತಿ ನೀಡುವ ಉದ್ದೇಶದಿಂದ ಸಫಾಯಿ ಕರ್ಮಚಾರಿಗಳ ಸಹಾಯವಾಣಿಗೆ ಬರುವ ಕರೆಗಳ ಸಂದರ್ಭದಲ್ಲಿ ಫಲಾನುಭವಿಗಳಿಂದ ಯಾವ ರೀತಿಯ ಉದ್ಯಮದಲ್ಲಿ ತೊಡಗಿಕೊಳ್ಳಲು ಇಚ್ಛಿಸುವರು, ಅದಕ್ಕೆ ಯಾವ ರೀತಿಯ ಕೌಶಲ್ಯ ತರಬೇತಿ ಅಗತ್ಯವಿದೆ ಎಂಬ ಬಗ್ಗೆ ಮಾಹಿತಿ ಕಲೆ ಹಾಕಬೇಕು ಎಂದು ಜಿಲ್ಲಾಧಿಕಾರಿಗಳು ಸಲಹೆ ನೀಡಿದರು.

201 ಸಫಾಯಿ ಕರ್ಮಚಾರಿಗಳ ಕುಟುಂಬಗಳಲ್ಲಿ ವ್ಯಾಸಾಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಇದುವರೆಗೂ ವಿದ್ಯಾರ್ಥಿ ವೇತನ ಸೌಲಭ್ಯ ದೊರೆತಿಲ್ಲ ಎಂದು ಸಂಘದ ಸದಸ್ಯರು ಮಾನ್ಯ ಜಿಲ್ಲಾಧಿಕಾರಿಗಳಿಗೆ ಆಹವಾಲನ್ನು ಸಲ್ಲಿಸಿದರು, ಇದಕ್ಕೆ ಜಿಲ್ಲಾಧಿಕಾರಿಯವರು ಕಾಲ್ ಸೆಂಟರ್ ಮೂಲಕ ಸೌಲಭ್ಯ ಸಿಗದ ವಿದ್ಯಾರ್ಥಿಗಳ ಮಾಹಿತಿಯನ್ನು ಪಡೆದು ಎರಡು ದಿನಗಳಲ್ಲಿ ಹಣ ಪಾವತಿಸುವಂತೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಅಧಿಕಾರಿ ಮುರಳೀಧರ್ ಅವರಿಗೆ ಸೂಚಿಸಿದರು.

ಸಭೆಯಲ್ಲಿ ಆಯೋಗದ ಕಾರ್ಯದರ್ಶಿಗಳಾದ ರಮಾ, ಬಿಬಿಎಂಪಿ ವಿಶೇಷ ಆಯುಕ್ತರಾದ ಶರತ್, ನಗರ ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿಗಳಾದ ನೌಮೇಶ್ ಕುಮಾರ್ , ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕರಾದ ಲಕ್ಷ್ಮಣ್ ರೆಡ್ಡಿ, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕರಾದ ರಂಗಸ್ವಾಮಿ ಹಾಗೂ ಫಲಾನುಭವಿಗಳು ಉಪಸ್ಥಿತರಿದ್ದರು.


bengaluru

LEAVE A REPLY

Please enter your comment!
Please enter your name here