Home ಬೆಂಗಳೂರು ನಗರ ಒಂದೇ ದಿನ ಬಿಬಿಎಂಪಿ ವ್ಯಾಪ್ತಿಯಲ್ಲಿ 294 ಜನರಿಗೆ ಡೆಂಗ್ಯೂ ದೃಢ

ಒಂದೇ ದಿನ ಬಿಬಿಎಂಪಿ ವ್ಯಾಪ್ತಿಯಲ್ಲಿ 294 ಜನರಿಗೆ ಡೆಂಗ್ಯೂ ದೃಢ

21
0

ಬೆಂಗಳೂರು: ರಾಜ್ಯಾದ್ಯಂತ 445 ಡೆಂಗ್ಯೂ ಪ್ರಕರಣಗಳು ರವಿವಾರದಂದು ಪತ್ತೆಯಾಗಿದ್ದು, ಒಂದೇ ದಿನ 66 ಜನರು ಆಸ್ಪತ್ರೆಗೆ ದಾಖಲಾಗಿದ್ದಾರೆ. ಎಲ್ಲ ಜಿಲ್ಲೆಗಳಲ್ಲಿ 2630 ಜನರಿಗೆ ಪರೀಕ್ಷೆ ಮಾಡಲಾಯಿತು. ಆ ಪೈಕಿ 0-1 ವರ್ಷದ 17, 1-18 ವರ್ಷದ 145 ಮಕ್ಕಳಲ್ಲಿ ಮತ್ತು 18 ವರ್ಷಕ್ಕಿಂತ ಮೇಲ್ಪಟ್ಟ 283 ಮಂದಿಗೆ ಡೆಂಗ್ಯೂ ಜ್ವರ ಕಾಣಿಸಿಕೊಂಡಿದೆ.

ರವಿವಾರ ಒಂದೇ ದಿನ ಬಿಬಿಎಂಪಿ ವ್ಯಾಪ್ತಿಯಲ್ಲಿ 1128 ಮಂದಿಗೆ ಪರೀಕ್ಷೆ ಮಾಡಲಾಗಿದ್ದು, 294 ಜನರಿಗೆ ಡೆಂಗ್ಯೂ ದೃಢಪಟ್ಟಿದೆ. 21 ಮಂದಿ ಆಸ್ಪತ್ರೆಗೆ ಸೇರಿದ್ದಾರೆ. ತುಮಕೂರಿನಲ್ಲಿ 60 ಮಂದಿಗೆ ಪರೀಕ್ಷೆ ಮಾಡಲಾಗಿದ್ದು, 19 ಜನರಿಗೆ ಡೆಂಗ್ಯೂ ದೃಢಪಟ್ಟಿದೆ. ಎಂಟು ಮಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಸೇರಿದ್ದಾರೆ.

ಧಾರವಾಡದಲ್ಲಿ 89 ಮಂದಿಗೆ ಪರೀಕ್ಷೆ ಮಾಡಲಾಗಿದ್ದು, 12 ಜನರಿಗೆ ಡೆಂಗ್ಯೂ ದೃಢಪಟ್ಟಿದೆ. 7 ಮಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಬೀದರ್ ನಲ್ಲಿ 72 ಮಂದಿಗೆ ಪರೀಕ್ಷೆ ಮಾಡಲಾಗಿದ್ದು, 4 ಜನರಿಗೆ ಡೆಂಗ್ಯೂ ದೃಢಪಟ್ಟಿದೆ. ಇಬ್ಬರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಬಳ್ಳಾರಿಯಲ್ಲಿ 499 ಮಂದಿಗೆ ಪರೀಕ್ಷೆ ಮಾಡಲಾಗಿದ್ದು, ಮೂವರಿಗೆ ಡೆಂಗ್ಯೂ ದೃಢಪಟ್ಟಿದೆ. ಇಬ್ಬರು ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಸೇರಿದ್ದಾರೆ.

ಮಂಡ್ಯದಲ್ಲಿ 33 ಮಂದಿಗೆ ಪರೀಕ್ಷೆ ಮಾಡಲಾಗಿದ್ದು, 33 ಮಂದಿಗೂ ಡೆಂಗ್ಯೂ ದೃಢಪಟ್ಟಿದೆ. 9 ಮಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ದಕ್ಷಿಣ ಕನ್ನಡದಲ್ಲಿ 557 ಮಂದಿಗೆ ಪರೀಕ್ಷೆ ಮಾಡಲಾಗಿದ್ದು, ಮೂವರಿಗೆ ಡೆಂಗ್ಯೂ ದೃಢಪಟ್ಟಿದೆ. ಏಳು ಮಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಉಡುಪಿಯಲ್ಲಿ 48 ಮಂದಿಗೆ ಪರೀಕ್ಷೆ ಮಾಡಲಾಗಿದ್ದು, 5 ಮಂದಿಗೂ ಡೆಂಗ್ಯೂ ದೃಢಪಟ್ಟಿದೆ. ಮೂವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಚಿಕ್ಕಮಗಳೂರಿನಲ್ಲಿ 144 ಮಂದಿಗೆ ಪರೀಕ್ಷೆ ಮಾಡಲಾಗಿದ್ದು, 13 ಜನರಿಗೆ ಡೆಂಗ್ಯೂ ದೃಢಪಟ್ಟಿದೆ. ಏಳು ಮಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಇನ್ನು ರಾಜ್ಯದಲ್ಲಿ ಜನವರಿಯಿಂದ ಇಲ್ಲಿಯವರೆಗೆ 68,928 ಮಂದಿಗೆ ಪರೀಕ್ಷೆ ಮಾಡಲಾಗಿದ್ದು, 9527 ಜನರಿಗೆ ಡೆಂಗ್ಯೂ ದೃಢಪಟ್ಟಿದೆ. 308 ಮಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆಯನ್ನು ಪಡೆಯುತ್ತಿದ್ದಾರೆ. ಏಳು ಮಂದಿ ಡೆಂಗ್ಯೂ ರೋಗಕ್ಕೆ ಬಲಿಯಾಗಿದ್ದಾರೆ.

LEAVE A REPLY

Please enter your comment!
Please enter your name here