ಮೊದಲಿಗೆ 4 ಜಿಲ್ಲೆಗಳಲ್ಲಿ ಜಾರಿ, 20 ಸಾವಿರ ವಿದ್ಯಾರ್ಥಿಗಳಿಗೆ ಲಾಭ
ಬೆಂಗಳೂರು:
ರಾಜ್ಯದಲ್ಲಿ ಯುವಜನ ಸಬಲೀಕರಣ ಮತ್ತು ಮಹಿಳಾ ಉದ್ಯಮಶೀಲತೆಯನ್ನು ಸಾಧಿಸುವ ಮಹತ್ವಾಕಾಂಕ್ಷೆಯುಳ್ಳ `ಕೋಡ್ ಉನ್ನತಿ’ ಉಪಕ್ರಮಕ್ಕೆ ಐಟಿ, ಬಿಟಿ ಮತ್ತು ಕೌಶಲ್ಯ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಅವರು ಶುಕ್ರವಾರ ಇಲ್ಲಿ ಚಾಲನೆ ನೀಡಿದರು.
ಇದೇ ಸಂದರ್ಭದಲ್ಲಿ, ಯೋಜನೆಯ ಅಂಗವಾಗಿ ವಿಶ್ವಸಂಸ್ಥೆ ಅಭಿವೃದ್ಧಿ ಕಾರ್ಯಕ್ರಮ (ಯುಎನ್ ಡಿಪಿ), ಎಸ್ ಎ ಪಿ ಲ್ಯಾಬ್, ಕೌಶಲ್ಯಾಭಿವೃದ್ಧಿ ಮತ್ತು ರಾಜ್ಯ ಯುವಜನ ಸಬಲೀಕರಣ ಮತ್ತು ಕ್ರೀಡಾ ಇಲಾಖೆಗಳು ಒಡಂಬಡಿಕೆಗೆ ಸಹಿ ಹಾಕಿದವು.
The @saplabsindia and @UNDP_India collaboration will empower Karnataka's youth and women as it opens up new vistas for skilling.@Code_unnati is another step by our state to empower people with proper career guidance & skill to explore future opportunities. Best wishes to all! pic.twitter.com/KQZyWKwHxQ
— Dr. Ashwathnarayan C. N. (@drashwathcn) December 10, 2021
ಇದರ ಅಂಗವಾಗಿ ವಿಕಾಸಸೌಧದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಸಚಿವರು, ಕೋಡ್ ಉನ್ನತಿ’ ಯೋಜನೆಯು ಮೊದಲಿಗೆ ಬೆಂಗಳೂರು ಗ್ರಾಮಾಂತರ, ರಾಮನಗರ, ದಕ್ಷಿಣ ಕನ್ನಡ ಮತ್ತು ರಾಯಚೂರು ಜಿಲ್ಲೆಗಳಲ್ಲಿ ರಾಷ್ಟ್ರೀಯ ಸೇವಾ ಯೋಜನೆ (ಎನ್ಎಸ್ಎಸ್) ಘಟಕಗಳ ಮೂಲಕ ಜಾರಿಗೆ ಬರಲಿದೆ. ನಂತರ ಉಳಿದ ಜಿಲ್ಲೆಗಳಿಗೆ ವಿಸ್ತರಣೆಗೊಳ್ಳಲಿರುವ ಈ ಯೋಜನೆಗೆ
ಸಿಸ್ಟಮ್ಸ್, ಅಪ್ಲಿಕೇಶನ್ಸ್ ಅಂಡ್ ಪ್ರಾಡಕ್ಟ್ಸ್ ಇನ್ ಡೇಟಾ ಪ್ರೋಸೆಸಿಂಗ್’ ಪ್ರಯೋಗಾಲಯ (ಸ್ಯಾಪ್ ಲ್ಯಾಬ್ಸ್ ಇಂಡಿಯಾ) ನೆರವು ನೀಡಲಿದೆ ಎಂದರು.
📢 Karnataka Edu Min @drashwathcn launched @Code_unnati to empower women & youth of #Karnataka.
— UNDP India (@UNDP_India) December 10, 2021
This joint initiative of @saplabsindia & @UNDP_India, in p’ship with @governmentofkar, aims to support women & youth through digital & entrepreneurial skills#BuildForwardBetter pic.twitter.com/p21xK6k2ac
ಯೋಜನೆಯ ಗುರಿಗಳನ್ನು ತಲುಪಲು ರಾಜ್ಯದಲ್ಲಿ ಈಗಾಗಲೇ 50 ಸರಕಾರಿ ಪದವಿಪೂರ್ವ, ಐಟಿಐ, ಪಾಲಿಟೆಕ್ನಿಕ್, ಕಲಾ ಮತ್ತು ವಿಜ್ಞಾನ ಕಾಲೇಜುಗಳನ್ನು ಗುರುತಿಸಲಾಗಿದೆ. ಮೊದಲ ಹೆಜ್ಜೆಯಾಗಿ 100 ಜನ ಎನ್ಎಸ್ಎಸ್ ಅಧಿಕಾರಿಗಳಿಗೆ ಉದ್ಯೋಗ ಮಾಹಿತಿ, ವೃತ್ತಿ ಮಾರ್ಗದರ್ಶನ, ಕೌನ್ಸೆಲಿಂಗ್, ಡಿಜಿಟಲ್ ಕೌಶಲಗಳಿಗೆ ಸಂಬಂಧಿಸಿದಂತೆ 3 ದಿನಗಳ ತರಬೇತಿ ಕೊಡಲಾಗುವುದು. ನಂತರ, ಎರಡು ಶೈಕ್ಷಣಿಕ ವರ್ಷಗಳ ಅವಧಿಯಲ್ಲಿ ಈ ಕಾಲೇಜುಗಳಲ್ಲಿ ಓದುತ್ತಿರುವ 20 ಸಾವಿರ ವಿದ್ಯಾರ್ಥಿಗಳಿಗೆ 200 ಗಂಟೆಗಳ ಕಾಲದ ಡಿಜಿಟಲ್ ಕೌಶಲ್ಯ ತರಬೇತಿ ನೀಡಲಾಗುವುದು ಎಂದು ಅವರು ತಿಳಿಸಿದರು.
ಇದಲ್ಲದೆ, 3,000 ವಿದ್ಯಾರ್ಥಿಗಳಿಗೆ ಉದ್ಯಮಶೀಲತೆಯ ಬಗ್ಗೆ ಜಾಗೃತಿ ಮೂಡಿಸುವ ತರಬೇತಿಯನ್ನು ಏರ್ಪಡಿಸಲಾಗುವುದು. ಈ ಮೂಲಕ ವಿದ್ಯಾರ್ಥಿಗಳಲ್ಲಿರುವ ಆಸಕ್ತಿಗಳನ್ನು ನಿಖರವಾಗಿ ತಿಳಿದುಕೊಳ್ಳಲಾಗುವುದು. ತರಬೇತಿಯ ಬಳಿಕ ವಿದ್ಯಾರ್ಥಿಗಳು ತಮಗಿರುವ ಉದ್ಯಮಶೀಲತೆಯ ಯೋಜನೆಗಳನ್ನು ಪರಿಣತರ ತಂಡಕ್ಕೆ ಸಲ್ಲಿಸಿ, ಸೂಕ್ತ ಮಾರ್ಗದರ್ಶನ ಪಡೆಯಲು `ಬೂಟ್ ಕ್ಯಾಂಪಸ್’ ಎನ್ನುವ ಕಾರ್ಯಕ್ರಮವನ್ನೂ ಈ ಯೋಜನೆಯಲ್ಲಿ ಅಳವಡಿಸಲಾಗಿದೆ ಎಂದು ಅವರು ವಿವರಿಸಿದರು.
.@Skill_Karnataka signed an MoU with @monster_india for career support and counselling of youth. Monster being an international platform, will offer good support to job aspirants with job opportunity and right career guidance.@CMofKarnataka @BSBommai @Monster pic.twitter.com/ov2HvXIqmK
— Dr. Ashwathnarayan C. N. (@drashwathcn) December 10, 2021
ರಾಜ್ಯದಲ್ಲಿ ಯುವಜನ ಸಬಲೀಕರಣವನ್ನು ಸಾಕಾರಗೊಳಿಸುವ ಉದ್ದೇಶದಿಂದ ಈಗಾಗಲೇ `ಕರ್ನಾಟಕ ರಾಜ್ಯ ಕೌಶಲ್ಯ ಮತ್ತು ಉದ್ಯಮಶೀಲತಾ ಕಾರ್ಯಪಡೆ’ಯನ್ನು ರಚಿಸಲಾಗಿದ್ದು, ಶಿಕ್ಷಣ, ಕೃಷಿ ಮುಂತಾದ 20 ಇಲಾಖೆಗಳನ್ನು ಒಂದೇ ಸೂತ್ರದಡಿ ತರಲಾಗಿದೆ. ಈ ಮೂಲಕ ಮುಂಬರುವ ವರ್ಷಗಳಲ್ಲಿ ಒಂದು ಕೋಟಿ ಉದ್ಯೋಗಗಳನ್ನು ಸೃಷ್ಟಿಸುವ ಸಂಕಲ್ಪ ಸರಕಾರದ್ದಾಗಿದೆ ಎಂದು ಅಶ್ವತ್ಥನಾರಾಯಣ ನುಡಿದರು.
ಕಾರ್ಯಕ್ರಮದಲ್ಲಿ ಯುಎನ್ ಡಿಪಿ ಇಂಡಿಯಾದ ಮುಖ್ಯಸ್ಥ ಅಮಿತ್ ಕುಮಾರ್, ಸ್ಯಾಪ್ ಲ್ಯಾಬ್ಸ್ ಇಂಡಿಯಾದ ವ್ಯವಸ್ಥಾಪಕ ನಿರ್ದೇಶಕಿ ಸಿಂಧೂ ಗಂಗಾಧರನ್, ಯೋಜನೆ ಮತ್ತು ಅಂಕಿಅಂಶ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್, ಕರ್ನಾಟಕ ಕೌಶಲ್ಯಾಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಅಶ್ವಿನ್ ಗೌಡ ಉಪಸ್ಥಿತರಿದ್ದರು.