ಗುರುವಾರ ವಿಧಾನಸೌಧದ ಸಮಿತಿ ಕೊಠಡಿಯಲ್ಲಿ ರಾಷ್ಟ್ರೀಯ ಐಕ್ಯತಾ ಸಪ್ತಾಹದ ಪ್ರತಿಜ್ಞೆ ಸ್ವೀಕರಿಸಿದ ಸಚಿವರು ಮತ್ತು ಅಧಿಕಾರಿಗಳು. ಚಿತ್ರ: ಲಭ್ಯವಾದದ್ದು
ಬೆಂಗಳೂರು: ಮಾಜಿ ಪ್ರಧಾನಮಂತ್ರಿ ಇಂದಿರಾ ಗಾಂಧಿ ಅವರ ಜನ್ಮದಿನದ ಅಂಗವಾಗಿ ಗುರುವಾರ ವಿಧಾನಸೌಧದ ಸಮಿತಿ ಕೊಠಡಿಯಲ್ಲಿ ಆಯೋಜಿಸಿದ್ದ ರಾಷ್ಟ್ರೀಯ ಐಕ್ಯತಾ ಸಪ್ತಾಹ ಆಚರಣೆಯ ಕಾರ್ಯಕ್ರಮದಲ್ಲಿ ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ ಅವರು ಇಂದಿರಾ ಗಾಂಧಿ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಗೌರವ ಅರ್ಪಿಸಿದರು ಎಂದು ರಾಜ್ಯ ವಾರ್ತಾ ಇಲಾಖೆಯ ಪ್ರಕಟಣೆ ತಿಳಿಸಿದೆ.
ಬಳಿಕ ಅವರು ರಾಷ್ಟ್ರೀಯ ಐಕ್ಯತಾ ಸಪ್ತಾಹದ ಪ್ರತಿಜ್ಞಾ ವಿಧಿಯನ್ನು ಬೋಧಿಸಿದರು ಎಂದು ಪ್ರಕಟಣೆ ಹೇಳಿದೆ. ಕಾರ್ಮಿಕ ಸಚಿವ ಸಂತೋಷ್ ಲಾಡ್ ಹಾಗೂ ಸಚಿವಾಲಯದ ಅಧಿಕಾರಿಗಳು ಮತ್ತು ಸಿಬ್ಬಂದಿ ಉಪಸ್ಥಿತರಿದ್ದರು.
